AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸ್ಥಿರತೆಯಲ್ಲಿದೆ ಪೆಟ್ರೋಲ್​, ಡೀಸೆಲ್​ ಬೆಲೆ; ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ

Petrol Diesel Rate Today: ವಾಣಿಜ್ಯ ನಗರಿ ಮುಂಬೈನಲ್ಲಿ 24 ಪೈಸೆ ಹೆಚ್ಚಳದ ಬಳಿಕ ಲೀಟರ್​ ಪೆಟ್ರೋಲ್​ ಬೆಲೆ 107.54 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 16 ಪೈಸೆ ಹೆಚ್ಚಳದ ಬಳಿಕ 97.54 ರೂಪಾಯಿಗೆ ತಲುಪಿದೆ. ಹಾಗೆಯೇ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 102.23 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ.

Petrol Price Today: ಇಂದು ಸ್ಥಿರತೆಯಲ್ಲಿದೆ ಪೆಟ್ರೋಲ್​, ಡೀಸೆಲ್​ ಬೆಲೆ; ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 16, 2021 | 8:24 AM

Share

Petrol Diesel Price Today | ದೆಹಲಿ: ಕಳೆದ ಎರಡು ದಿನಗಳಿಂದ ಸತತವಾಗಿ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಹೆಚ್ಚಳ ಮಾಡಲಾಗಿತ್ತು. ಆ ಬಳಿಕ ಇಂದು ( ಜುಲೈ 16, ಶುಕ್ರವಾರ) ಪೆಟ್ರೋಲ್​ (Petrol Rate) ಮತ್ತು ಡೀಸೆಲ್​ ದರದಲ್ಲಿ(Diesel Rate) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಎಲ್ಲಾ ಪ್ರಮುಖ ನಗರಗಳಲ್ಲಿಯೂ ಇಂಧನ ದರ(Fuel Price) ನಿನ್ನೆಯ ದರವನ್ನೇ ಕಾಯ್ದಿರಿಸಿಕೊಂಡಿದೆ. ನಿನ್ನೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ಬೆಲೆಯಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದ್ದು ಆ ಬಳಿಕ 105.54 ರೂಪಾಯಿ ಆಗಿದೆ. ಜತೆಗೆ ಲೀಟರ್​ ಡೀಸೆಲ್​ ದರದಲ್ಲಿ 15 ಪೈಸೆ ಏರಿಕೆ ಮಾಡಲಾಗಿದ್ದು 89.87 ರೂಪಾಯಿ ನಿಗದಿಯಾಗಿದೆ.

ನಿನ್ನೆ ಗುರವಾರ ಇಂಧನ ದರ ಏರಿಕೆಯ ಬಳಿಕ ವಾಣಿಜ್ಯ ನಗರಿ ಮುಂಬೈನಲ್ಲಿ 24 ಪೈಸೆ ಹೆಚ್ಚಳ ಕಂಡ ಲೀಟರ್​ ಪೆಟ್ರೋಲ್​ ಬೆಲೆ 107.54 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 16 ಪೈಸೆ ಹೆಚ್ಚಳದ ಬಳಿಕ 97.54 ರೂಪಾಯಿಗೆ ತಲುಪಿದೆ. ಹಾಗೆಯೇ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 102.23 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ.

ಇನ್ನು, ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 101.74 ರೂಪಾಯಿ ಆಗಿದೆ. ಅದೇ ರೀತಿ 21 ಪೈಸೆ ಹೆಚ್ಚಳದ ಬಳಿಕ ಲೀಟರ್​ ಡೀಸೆಲ್ ದರ 93.02 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 104.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರವನ್ನು 95.26 ರೂಪಾಯಿ ನಿಗದಿ ಮಾಡಲಾಗಿದೆ.

ಭೋಪಾಲ್​ನಲ್ಲಿ 36 ಪೈಸೆ ಹೆಚ್ಚಳ ಕಂಡ ಬಳಿಕವೇ ಲೀಟರ್​ ಪೆಟ್ರೋಲ್​ ಬೆಲೆ 109.89 ರೂಪಾಯಿ ಆಗಿದೆ. ಅದೇ ರೀತಿ 17 ಪೈಸೆ ಹೆಚ್ಚಳದ ಬಳಿಕ 98.67 ರೂಪಾಯಿಗೆ ಏರಿಕೆಯಾಗಿದೆ. ಜುಲೈ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರವನ್ನು 8 ಬಾರಿ ಹೆಚ್ಚಳ ಮಾಡಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು