AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ? ಪರಿಶೀಲಿಸಿ

Petrol Diesel Rate Today: ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 107.83 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 97.45 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 102.49 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಆಗಿದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ? ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Jul 18, 2021 | 9:17 AM

Petrol Diesel Price Today|ದೆಹಲಿ: ನಿನ್ನೆ ಪೆಟ್ರೋಲ್​ ದರದಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಇಂದು ( ಜುಲೈ 18, ರವಿವಾರ) ಪೆಟ್ರೊಲ್ ​(Petrol Price) ಮತ್ತು ಡೀಸೆಲ್​ ದರ (Diesel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ತೈಲ ಕಂಪನಿಗಳು ಇಂಧನ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದು ವಾಹನ ಸವಾರರಿಗೆ ಕೊಂಚ ಸಮಾಧಾನ ತರುವ ವಿಚಾರ. ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ನಿನ್ನೆಯ ದರವೇ ಇದೆ. ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.84 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.87 ರೂಪಾಯಿ ಇದೆ.

ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 107.83 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 97.45 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 102.49 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ.

ಇನ್ನು, ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್​ ಡೀಸೆಲ್ ದರ 90.26 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್​ ಪೆಟ್ರೋಲ್​ ದರ 97.93 ರೂಪಾಯಿ ಇದ್ದರೆ, ಲೀಟರ್​ ಡೀಸೆಲ್​ ದರ 89.50 ರೂಪಾಯಿ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ