AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ವಾಹನ ಸವಾರರಿಗೆ ಸಮಾಧಾನ ತರುವ ವಿಚಾರ; 2 ದಿನಗಳಿಂದ ಸ್ಥಿರತೆಯಲ್ಲಿದೆ ಪೆಟ್ರೋಲ್​, ಡೀಸೆಲ್​ ದರ!

Petrol Diesel Rate Today: ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ.

Petrol Price Today: ವಾಹನ ಸವಾರರಿಗೆ ಸಮಾಧಾನ ತರುವ ವಿಚಾರ; 2 ದಿನಗಳಿಂದ ಸ್ಥಿರತೆಯಲ್ಲಿದೆ ಪೆಟ್ರೋಲ್​, ಡೀಸೆಲ್​ ದರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 19, 2021 | 8:22 AM

Share

Petrol diesel Price Today | ದೆಹಲಿ: ನಿನ್ನೆ ಕೂಡಾ ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಅದೇ ರೀತಿ ಇಂದು ( ಜುಲೈ 19, ಸೋಮವಾರ) ಪೆಟ್ರೋಲ್​(Petrol Price) ಮತ್ತು ಡೀಸೆಲ್​ ದರಲ್ಲಿ(Diesel Price) ಬದಲಾವಣೆಗಳಿಲ್ಲ. ಏರುತ್ತಲೇ ಇರುವ ಇಂಧನ ದರ(Fuel Price) ನೋಡುತ್ತಿದ್ದ ವಾಹನ ಸವಾರರಿಗೆ ಇಂದು ಕೊಂಚ ಸಮಾಧಾನ ತರುವ ವಿಚಾರ. ಕಳೆದ ಶನಿವಾರ ಪೆಟ್ರೋಲ್​ ಬೆಲೆ ಅಲ್ಪವೇ ಏರಿಕೆ ಆಗಿತ್ತು. ಆದರೆ ಡೀಸೆಲ್​ ದರದಲ್ಲಿ ಬದಲಾವಣೆಗಳಿರಲಿಲ್ಲ. ಆ ನಂತರ ತೈಲ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇತ್ತೀಚಿಗಿನ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 101.84 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ಬೆಲೆ 89.87 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 107.83 ರೂಪಾಯಿ ಇದೆ. ಪ್ರಮುಖ ಮೆಟ್ರೋ ಸಿಟಿಗಳಲ್ಲಿಯೇ ಮೊದಲಿಗೆ ಗರಿಷ್ಠ ಮಟ್ಟ ತಲುಪಿದ್ದು ಮುಂಬೈ. ಲೀಟರ್​ ಡೀಸೆಲ್​ ದರವೂ ಸಹ ಗರಿಷ್ಠ ಮಟ್ಟದಲ್ಲಿಯೇ ಇದ್ದು 97.45 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 102.49 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.39 ಪೈಸೆ ಇದೆ. ರಾಜ್ಯದಿಂದ ರಾಜ್ಯಕ್ಕೆ ಇಂಧನ ದರ ಬದಲಾವಣೆ ಇರುತ್ತದೆ. ಏಕೆಂದರೆ ಸ್ಥಳೀಯ ತೆರಿಗೆ ಮತ್ತು ವ್ಯಾಟ್​ ಅನುಸಾರ ಬೆಲೆ ನಿರ್ಧಾರವಾಗುತ್ತದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ತಮಿಳುನಾಡು, ಕೇರಳ, ಬಿಹಾರ​, ಪಂಜಾಬಿ​ನಲ್ಲಿ ಈಗಾಗಲೇ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್​ ಡೀಸೆಲ್ ದರ 90.26 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್​ ಪೆಟ್ರೋಲ್​ ದರ 97.93 ರೂಪಾಯಿ ಇದ್ದರೆ, ಲೀಟರ್​ ಡೀಸೆಲ್​ ದರ 89.50 ರೂಪಾಯಿ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:21 am, Mon, 19 July 21

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್