AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 3 ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ! ವಾಹನ ಸವಾರರು ಕೊಂಚ ನಿರಾಳ

Petrol Rate Today: ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಇದ್ದರೆ, ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೊಲ್​ ಬೆಲೆ 102.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ.

Petrol Price Today: ಸತತ 3 ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ! ವಾಹನ ಸವಾರರು ಕೊಂಚ ನಿರಾಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 20, 2021 | 8:21 AM

Share

Petrol Diesel Price Today | ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಕಳೆದ ಎರಡು ದಿನಗಳಿಂದ ಸ್ಥಿರವಾಗಿತ್ತು. ಅದೇ ರೀತಿ ಇಂದು ( ಜುಲೈ 20, ಮಂಗಳವಾರ) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಈಗಾಗಲೇ ಪೆಟ್ರೋಲ್(Petrol Price)​ ಮತ್ತು ಡೀಸೆಲ್​ ದರ(Diesel Price) ಗರಿಷ್ಟ ಮಟ್ಟದಲ್ಲಿಯೇ ಇದೆ. ಇಂಧನ ದರ(Fuel Price) ಹೆಚ್ಚಳವಾಗದೇ ಸ್ಥಿರತೆಯನ್ನು ಕಾಯ್ದುಕೊಂಡಿರುವುದು ವಾಹನ ಸವಾರರಿಗೆ ಕೊಂಚ ಸಮಾಧಾನ ತರುವ ವಿಚಾರ. ಕಳೆದ ಬಾರಿ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.84 ರೂಪಾಯಿ ಆಗಿದೆ. ಲೀಟರ್​ ಡೀಸೆಲ್​ ದರ 89.87 ರೂಪಾಯಿ ಇದೆ. ಅದೇ ದರವನ್ನು ಮೂರು ದಿನಗಳಿಂದ ಕಾಯ್ದುಕೊಂಡು ಬಂದಿದೆ.

ಜನವರಿ 1ನೇ ತಾರೀಕಿನಿಂದ ಜುಲೈ 9ರವರೆಗೆ ಪೆಟ್ರೋಲ್​ ದರ ಒಟ್ಟು 63 ಬಾರಿ ಹಾಗೂ ಡೀಸೆಲ್​ ದರವನ್ನು 61ಬಾರಿ ಏರಿಕೆ ಮಾಡಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್ ದರ 107.83 ರೂಪಾಯಿ ಇದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 97.45 ರೂಪಾಯಿ ಇದೆ. ಮೇ 29ನೇ ತಾರೀಕಿನಂದೇ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಇದ್ದರೆ, ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೊಲ್​ ಬೆಲೆ 102.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ.

ಇನ್ನು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ತಮಿಳುನಾಡು, ಕೇರಳ, ಬಿಹಾರ ಮತ್ತು ಪಂಜಾಬ್​ನಲ್ಲಿ ಲೀಟರ್ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುತ್ತಿದ್ದು ಗರಿಷ್ಟ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ.

ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.92 ರೂಪಾಯಿ ಹಾಗೂ ಲೀಟರ್​ ಡೀಸೆಲ್ ದರ 90.26 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್​ ಪೆಟ್ರೋಲ್​ ದರ 97.93 ರೂಪಾಯಿ ಇದ್ದರೆ, ಲೀಟರ್​ ಡೀಸೆಲ್​ ದರ 89.50 ರೂಪಾಯಿ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:19 am, Tue, 20 July 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?