AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್ ಬೆಲೆ ಎಷ್ಟಿದೆ ಪರಿಶೀಲಿಸಿ

Petrol Diesel Rate Today: ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 94.72 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 99.88 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರ 92.31 ರೂಪಾಯಿ ಇದೆ.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್ ಬೆಲೆ ಎಷ್ಟಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 06, 2021 | 9:01 AM

Share

Petrol Diesel Price Today| ದೆಹಲಿ: ಇಂದು (ಜುಲೈ 6, ಮಂಗಳವಾರ) ಪೆಟ್ರೋಲ್​​ ಮತ್ತು ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇದು ವಾಹನ ಸವಾರರಿಗೆ ಕೊಂಚ ಸಮಾಧಾನ ನೀಡುವ ವಿಚಾರ. ನಿನ್ನೆ ಇಂಧನ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಪೆಟ್ರೋಲ್​ ದರ ಶತಕ ಬಾರಿಸಲು ಗಡಿ ಅಂಚಿನಲ್ಲಿಯೇ ನಿಂತಿದೆ. ಕೇವಲ 10 ಪೈಸೆಗಳಷ್ಟು ಅಂತರದಲ್ಲಿದೆ. ನಿನ್ನೆ ಲೀಟರ್​ ಪೆಟ್ರೋಲ್​ ದರದಲ್ಲಿ 31 ರಿಂದ 39 ಪೈಸೆ ಏರಿಕೆ ಮಾಡಲಾಗಿತ್ತು. ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿರಲಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೊಲ್​ ದರ 99.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.40 ರೂಪಾಯಿ ಇದೆ.

ಪೆಟ್ರೋಲ್​ ದರ ದಿನೇ ದಿನೇ ಹೆಚ್ಚಳ ಕಾಣುತ್ತಿರುವುದರಿಂದ ವಾಹನ ಸವಾರರು ಬೇಸರ ಹೊರಹಾಕುತ್ತಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯ ಬಳಿಕ ಮೇ ತಿಂಗಳಿನಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಹೆಚ್ಚಳವಾಗುತ್ತಲೇ ಇದೆ. ಇಲ್ಲಿಯವರೆಗೆ ಒಟ್ಟು 35 ಬಾರಿ ತೈಲ ದರ ಏರಿಕೆ ಕಂಡು ಬಂದಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 105.95 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 96.95 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 100.78 ರೂಪಾಯಿಗೆ ಹಾಗೂ ಲೀಟರ್​ ಡೀಸೆಲ್​ ದರ 93.94 ರೂಪಾಯಿ ಇದೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ ಪೆಟ್ರೋಲ್​, ಡೀಸೆಲ್​ ಬೆಲೆ. ಇಂದು ಸ್ಥಿರತೆ ಕಾಯ್ದುಕೊಂಡಿದ್ದರಿಂದ ಪ್ರಮುಖ ನಗರಗಳಲ್ಲಿ ನಿನ್ನೆಯ ದರವೇ ಇದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 94.72 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 99.88 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರ 92.31 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ