Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ

Petrol Diesel Rate Today: ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.99 ರೂಪಾಯಿ ಇದೆ. ಅದೇ ರೀತಿ ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 104.50 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.68 ರೂಪಾಯಿ ಇದೆ.

Petrol Price Today: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ
ಪಿಟಿಐ ಚಿತ್ರ
Follow us
TV9 Web
| Updated By: shruti hegde

Updated on: Jul 09, 2021 | 9:11 AM

Petrol Diesel Price Today| ದೆಹಲಿ: ಪೆಟ್ರೋಲ್​ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು ( ಜುಲೈ 9, ಶುಕ್ರವಾರ) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜುಲೈ ತಿಂಗಳಿನಲ್ಲಿ ಒಟ್ಟು 6 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಏರಿಕೆ ಮಾಡಲಾಗಿದೆ. ಸದ್ಯ ಪೆಟ್ರೋಲ್​ ಮತ್ತು ಡೀಸೆಲ್​ ದರ ಇಳಿಕೆ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಎರಡು ದಿನಗಳ ಹಿಂದೆ ಇಂಧನ ದರ ಏರಿಕೆಯ ಬಳಿಕ ಪ್ರಮುಖ ಎಲ್ಲಾ ಮಹಾನಗರಗಳಲ್ಲಿ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಇಂದು ಪೆಟ್ರೋಲ್​, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲದ ಕಾರಣ ಸ್ಥಿರತೆಯನ್ನು ಕಾಯ್ದುಕೊಂಡಿದೆ.

ಮೇ 4 ರಿಂದ ಇಲ್ಲಿಯವರೆಗೆ ಒಟ್ಟು 38 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದವನ್ನು ಏರಿಕೆ ಮಾಡಲಾಗಿದೆ. ಆ ಮೂಲಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ 105.56 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.62 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 100.62 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.65 ರೂಪಾಯಿ ಇದೆ.

ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 106.59 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್ ದರ 101.37 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.15 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 103.94 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.99 ರೂಪಾಯಿ ಇದ್ದು, ಹೈದರಾಬಾದ್​ನಲ್ಲಿ ಲೀಟರ್​ ಪೆಟ್ರೋಲ್​ ದರ 104.50 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.68 ರೂಪಾಯಿ ಇದೆ.

ಇನ್ನು ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಕ್​ ಮತ್ತು ಬಿಹಾರ ರಾಜ್ಯಗಳಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.88 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.40 ರೂಪಾಯಿ ಹಾಗೂ ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 102.79 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.14 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!