Petrol Price Today: ಸತತ ಆರು ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ; ಪ್ರಮುಖ ನಗರಗಳಲ್ಲಿ ಇಂದಿನ ದರ ವಿವರ ಪರಿಶೀಲಿಸಿ
Petrol Rate Today: ಸ್ಥಳೀಯ ತೆರಿಗೆ ಮತ್ತು ಸರಕು ಶುಲ್ಕವನ್ನು ಅವಲಂಬಿಸಿ ವಾಹನಗಳ ಇಂಧನ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಜತೆಗೆ ಕೇಂದ್ರ ಸರ್ಕಾರವು ಕೂಡ ಇಂಧನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸುತ್ತದೆ.
Petrol Diesel Price Today | ದೆಹಲಿ: ಸತತ ಆರು ದಿನಗಳಿಂದ ದೇಶದಾದ್ಯಂತ ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆ (Diesel Price) ಸ್ಥಿರವಾಗಿದೆ. ಇಂದು ( ಸೆಪ್ಟೆಂಬರ್ 11, ಶನಿವಾರ) ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಕಳೆದ ಸೆಪ್ಟೆಂಬರ್ 5ನೇ ತಾರೀಕಿನಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಲಾಯಿತು. ಆ ನಂತರದ ದಿನಗಳಿಂದ ಇಲ್ಲಿಯವರೆಗೆ ಏರಿಳಿತ ಕಂಡಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂಧನ ದರ (Fuel Price) ಸ್ಥಿರವಾಗಿಯೇ ಇದೆ. ಸ್ಥಳೀಯ ತೆರಿಗೆ ಮತ್ತು ಸರಕು ಶುಲ್ಕವನ್ನು ಅವಲಂಬಿಸಿ ವಾಹನಗಳ ಇಂಧನ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಜತೆಗೆ ಕೇಂದ್ರ ಸರ್ಕಾರವು ಕೂಡ ಇಂಧನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.62 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.71 ರೂಪಾಯಿ ಇದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 98.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.21 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 105.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 103.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.55 ರೂಪಾಯಿ ಇದೆ. ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.76 ರೂಪಾಯಿ ಇದೆ.
ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.94 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ. ಛಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 97.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.35 ರೂಪಾಯಿ ಇದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಇಂದು ಯಥಾಸ್ಥಿತಿಯಲ್ಲಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html
(Petrol Price Unchanged today on 2021 September 11 and check diesel price in Bangalore Delhi Mumbai and Major city)