ತಮಿಳುನಾಡಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹3 ಇಳಿಕೆ: ರಾಜ್ಯ ಬಜೆಟ್​​ನಲ್ಲಿ ಹಣಕಾಸು ಸಚಿವ ತ್ಯಾಗರಾಜನ್ ಘೋಷಣೆ

Tamil Nadu Budget: ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ನಿರ್ದೇಶನದಂತೆ, ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂಪಾಯಿಗಳಷ್ಟು ಕಡಿಮೆ ಮಾಡಲಾಗುವುದು. ಪೆಟ್ರೋಲ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ತಮಿಳುನಾಡು ಸರ್ಕಾರವು 1,160 ಕೋಟಿ ರೂಪಾಯಿಗಳ ನಷ್ಟವನ್ನು ಅನುಭವಿಸುತ್ತದೆ ಎಂದು ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹3 ಇಳಿಕೆ: ರಾಜ್ಯ ಬಜೆಟ್​​ನಲ್ಲಿ ಹಣಕಾಸು ಸಚಿವ ತ್ಯಾಗರಾಜನ್ ಘೋಷಣೆ
ತಮಿಳುನಾಡು ಬಜೆಟ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: Aug 13, 2021 | 3:50 PM

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಅವರ ನಿರ್ದೇಶನದಂತೆ, ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿಮೆ ಮಾಡಲಾಗುವುದು ಎಂದು ತಮಿಳುನಾಡು ಹಣಕಾಸು ಮತ್ತು ಮಾನವ ಸಂಪನ್ಮೂಲ ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ (PTR Palanivel Thiagarajan) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು. ತಮಿಳುನಾಡು ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಕಾಗದ ರಹಿತ ಬಜೆಟ್ ಅಧಿವೇಶನ ಇಂದು ಚೆನ್ನೈನ ಕಲೈವನಾರ್ ಆರಂಗಂ ನಲ್ಲಿ ನಡೆಯಿತು. ಈ ವರ್ಷದ ಮೇನಲ್ಲಿ ಅಧಿಕಾರಕ್ಕೆ ಬಂದ ನಂತರ ಇದು ಡಿಎಂಕೆ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನವಾಗಿದೆ. ಹಣಕಾಸು ಮತ್ತು ಮಾನವ ಸಂಪನ್ಮೂಲ ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಅವರು 2021-22ರ ಆರ್ಥಿಕ ವರ್ಷದ ಪರಿಷ್ಕೃತ ಬಜೆಟ್ ವೇಳೆ ರಾಜ್ಯದ ಹಣಕಾಸು ಕುರಿತು ‘ಶ್ವೇತ ಪತ್ರ’ ವರದಿಯನ್ನು ಪ್ರಕಟಿಸಿದರು. ಒಂದೆರಡು ದಿನಗಳ ಹಿಂದೆ ಸಚಿವ ತ್ಯಾಗರಾಜನ್ ಅವರು ತಮ್ಮ ವರದಿಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದು ಹೇಳಿದ್ದರು. ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಎಂಕೆ ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲಾ ಕಲ್ಯಾಣ ಯೋಜನೆಗಳನ್ನು ನೀಡುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.

ಬಜೆಟ್ ಭಾಷಣದ ಮುಖ್ಯಾಂಶಗಳು ಸಾಮಾಜಿಕ ಭದ್ರತಾ ಪಿಂಚಣಿಗಾಗಿ ನಿಧಿ ಹೆಚ್ಚಳ ಸಾಮಾಜಿಕ ಭದ್ರತಾ ಪಿಂಚಣಿ ನಿಧಿಯನ್ನು ವರ್ಷಕ್ಕೆ 4807.56 ಕೋಟಿ ರೂ. ಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವರು ಘೋಷಿಸಿದ್ದಾರೆ.

ಆದಿ ದ್ರಾವಿಡರ ಅಭಿವೃದ್ಧಿಗೆ 81ಸಾವಿರ ಕೋಟಿಗಿಂತಲೂ ಹೆಚ್ಚು ಅನುದಾನ ಆದಿ ದ್ರಾವಿಡರು ಮತ್ತು ಬುಡಕಟ್ಟು ಜನರ ಶಿಕ್ಷಣ ಅಭಿವೃದ್ಧಿಗೆ ರೂ 81,884.70 ಕೋಟಿ ಹಂಚಿಕೆ ಮಾಡಲಾಗಿದೆ.

ಎಂಜಿಆರ್ ಊಟದ ಯೋಜನೆಗೆ 1725 ಕೋಟಿ ರೂ 2021-22 ನೇ ಸಾಲಿಗೆ ಎಂಜಿಆರ್ ಊಟದ ಯೋಜನೆಗೆ ರೂ. 1725 ಕೋಟಿ ಹಂಚಿಕೆ ಮಾಡಲಾಗಿದೆ. ಆದಾಯದ ಕೊರತೆ ರೂ. 58 ಕೆ ಕೋಟಿ 2021-22ರ ವರ್ಷಕ್ಕೆ ರಾಜ್ಯದ ಆದಾಯ ಕೊರತೆ ರೂ 58,692.68 ಕೋಟಿ ಆಗುವ ನಿರೀಕ್ಷೆ ಸರ್ಕಾರಿ ನೌಕರರಿಗೆ ಹೆರಿಗೆ ರಜೆಯನ್ನು ಒಂದು ವರ್ಷಕ್ಕೆ ಏರಿಸಲಾಗಿದೆ. ನೀರಾವರಿಗಾಗಿ 6607 ಕೋಟಿ ರೂ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ 27 ನಗರಗಳಲ್ಲಿ ಭೂಗತ ಒಳಚರಂಡಿ ಯೋಜನೆ ಜಾರಿಗೊಳಿಸಲಾಗುವುದು. ಪ್ರತಿ ವಿಧಾನಸಭೆಯಲ್ಲಿ ಕ್ರೀಡಾ ಪ್ರದೇಶಗಳನ್ನು ಸ್ಥಾಪಿಸಲು 3 ಕೋಟಿ ರೂ ಸರ್ಕಾರವು ಕ್ರೀಡಾ ಮೂಲಸೌಕರ್ಯಗಳನ್ನು ಸುಧಾರಿಸುವತ್ತ ಗಮನ ಹರಿಸುತ್ತದೆ. ರಾಜ್ಯವು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 3 ಕೋಟಿ ವೆಚ್ಚದಲ್ಲಿ ಕ್ರೀಡಾ ಪ್ರದೇಶಗಳನ್ನು ಸ್ಥಾಪಿಸುತ್ತದೆ ಎಂದು ಹಣಕಾಸು ಸಚಿವರು ಹೇಳಿದರು. ರಾಣಿಪೇಟೆ, ತೇನಿ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಸರ್ಕಾರ ನಿರ್ಧಾರ

ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ ಇಳಿಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ನಿರ್ದೇಶನದಂತೆ, ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂಪಾಯಿಗಳಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು. ಪೆಟ್ರೋಲ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ತಮಿಳುನಾಡು ಸರ್ಕಾರವು 1,160 ಕೋಟಿ ರೂಪಾಯಿಗಳ ನಷ್ಟವನ್ನು ಅನುಭವಿಸುತ್ತದೆ ಎಂದು ಅವರು ಹೇಳಿದ್ದಾರೆ.

ಶಾಲಾ ಶಿಕ್ಷಣಕ್ಕಾಗಿ 32,599 ಕೋಟಿ ರೂ 100 ಹೊಸ ಬಸ್‌ಗಳಿಗೆ ರೂ 623.59 ಕೋಟಿ, ಸಾರ್ವಜನಿಕ ಬಸ್‌ಗಳಲ್ಲಿ ತಮಿಳುನಾಡು ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ರೂ 703 ಕೋಟಿ ನಿಗದಿಪಡಿಸಲಾಗಿದೆ.

ಮಧುರೈನಲ್ಲಿ ಮೆಟ್ರೋ ಸ್ಥಾಪಿಸಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ತಮಿಳುನಾಡು ಹಣಕಾಸು ಸಚಿವರು ಹೇಳಿದ್ದಾರೆ.

ಕೋಡಂಬಕ್ಕಂ-ಪೂನಮಲ್ಲಿ ಮೆಟ್ರೋ ಕಾರಿಡಾರ್ 2025 ರ ವೇಳೆಗೆ ಪೂರ್ಣಗೊಳ್ಳಲಿದೆ

ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಅವರು ಮೆಟ್ರೋ ರೈಲು ಯೋಜನೆಯ 2 ನೇ ಹಂತವು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ ಎಂದು ಹೇಳಿದರು. ಕೋಡಂಬಕ್ಕಂ-ಪೂನಮಲ್ಲಿ ಕಾರಿಡಾರ್ 2025 ರ ವೇಳೆಗೆ ಪೂರ್ಣಗೊಳ್ಳಲಿದೆ. ವಿಮಾನ ನಿಲ್ದಾಣದಿಂದ ತಾಂಬರಂ ಮೂಲಕ ಕಿಲಾಂಬಕ್ಕಂವರೆಗಿನ ಹಂತ -1 ವಿಸ್ತರಣೆ ಮಾರ್ಗ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ.

ನಮಕ್ಕು ನಾಮೇ ಯೋಜನೆ ಜಾರಿಗೆ  ಕಲೈಂಗರ್ ಅವರ ನಮಕ್ಕು ನಾವೇ ಯೋಜನೆಯನ್ನು ಮತ್ತೆ ಅನುಷ್ಠಾನಕ್ಕೆ ತರಲಿದ್ದು ಅದಕ್ಕಾಗಿ 100 ಕೋಟಿ ರೂ. 10 ವರ್ಷಗಳಲ್ಲಿ 1000 ಚೆಕ್‌ಡ್ಯಾಮ್‌ಗಳು,ಇದಲ್ಲದೆ, ಹೊಸ ಬಂದರುಗಳನ್ನು ನಿರ್ಮಿಸಲು 433 ಕೋಟಿ ರೂ.

ಇದನ್ನು ಓದಿ: Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಕೇರಳ, ತಮಿಳುನಾಡು, ಆಂಧ್ರದಲ್ಲೂ ವರುಣನ ಆರ್ಭಟ

(Petrol price will be reduced by Rs 3 per litre Tamil Nadu Finance PTR Palanivel Thiagarajan in budget speech)

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ