AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಮತ್ತೆ ಏರಿಕೆಯತ್ತ ಮುಖ ಮಾಡಿದ ಪೆಟ್ರೋಲ್, ಡಿಸೇಲ್ ದರ; ವಿವಿಧ ನಗರಗಳಲ್ಲಿ ಬೆಲೆ ಎಷ್ಟಿದೆ?

Petrol Diesel Rate Today: ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 27 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 24 ಪೈಸೆ ಹೆಚ್ಚಾಗಿದೆ. ಕಳೆದ ತಿಂಗಳು ಮೇ 4ರಿಂದ ಏರಿಕೆ ಕಾಣಲು ಪ್ರಾರಂಭಿಸಿದ ಇಂಧನ ದರ ಇಲ್ಲಿಯವರೆಗೂ ಏರುತ್ತಲೇ ಇದೆ.

Petrol Price Today: ಮತ್ತೆ ಏರಿಕೆಯತ್ತ ಮುಖ ಮಾಡಿದ ಪೆಟ್ರೋಲ್, ಡಿಸೇಲ್ ದರ; ವಿವಿಧ ನಗರಗಳಲ್ಲಿ ಬೆಲೆ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 12, 2021 | 9:11 AM

Share

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಶುಕ್ರವಾರ ಏರಿಕೆ ಕಂಡು ಬಂದ ಬಳಿಕ ಇಂದು (ಶನಿವಾರ ಜೂನ್ 12) ಮತ್ತೆ ತೈಲ ಕಂಪನಿಗಳು ಬೆಲೆಯನ್ನು ಹೆಚ್ಚಿಸಿವೆ. ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 27 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 24 ಪೈಸೆ ಹೆಚ್ಚಾಗಿದೆ. ಕಳೆದ ತಿಂಗಳು ಮೇ 4 ರಿಂದ ಏರಿಕೆ ಕಾಣಲು ಪ್ರಾರಂಭಿಸಿದ ಇಂಧನ ದರ ಇಲ್ಲಿಯವರೆಗೂ ಏರುತ್ತಲೇ ಇದೆ. ಕಳೆದ ತಿಂಗಳಿನಿಂದ ಈವರೆಗೆ ತೈಲ ದರ ಒಟ್ಟು 24 ಬಾರಿ ಏರಿಕೆ ಕಂಡಿದ್ದರಿಂದ ದೆಹಲಿ ಮಾರುಕಟ್ಟೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 96.12 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 86.98 ರೂಪಾಯಿಗೆ ಏರಿಕೆಯಾಗಿದೆ.

ನಾಲ್ಕು ಮಹಾನಗರಗಳಲ್ಲಿನ ಪೆಟ್ರೋಲ್ ಮತ್ತು ಡಿಸೇಲ್ ದರ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.12 ರೂಪಾಯಿ ಮತ್ತು ಡೀಸೆಲ್ ಬೆಲೆ 86.98 ರೂಪಾಯಿಯಾಗಿದೆ. ಅದೇ ರೀತಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 102.30 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 94.39 ರೂಪಾಯಿಯಾಗಿದೆ. ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್​ಗೆ 96.06 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 94.39 ರೂಪಾಯಿಯಾಗಿದೆ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 97.43 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 91.64 ರೂಪಾಯಿಯಾಗಿದೆ. ಅದರಂತೆ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್​ಗೆ 99.33 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 92.21 ರೂಪಾಯಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:47 am, Sat, 12 June 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ