AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಇದೇ ಮೊದಲ ಬಾರಿಗೆ 100ರ ಗಡಿ ದಾಟಿದ ಡೀಸೆಲ್​ ದರ; ವಿವಿಧ ನಗರಗಲ್ಲಿನ ಇಂಧನ ಬೆಲೆ ಹೀಗಿದೆ

Petrol Diesel Rate Today: ಬೆಂಗಳೂರಿನಲ್ಲಿ ಪೆಟ್ರೋಲ್​ ದರ ಶತಕದ ಹಾದಿಯಲ್ಲಿದ್ದು ಲೀಟರ್​ ಪೆಟ್ರೋಲ್​ಗೆ 99.63 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ಗೆ 92.52 ರೂಪಾಯಿಗೆ ಏರಿಕೆ ಆಗಿದೆ. 100ರ ಗಡಿ ದಾಟಲು ಇನ್ನೇನು ಕೆಲ ಪೈಸೆಗಳಷ್ಟೆ ಬಾಕಿ ಇದೆ.

Petrol Diesel Price Today: ಇದೇ ಮೊದಲ ಬಾರಿಗೆ 100ರ ಗಡಿ ದಾಟಿದ ಡೀಸೆಲ್​ ದರ; ವಿವಿಧ ನಗರಗಲ್ಲಿನ ಇಂಧನ ಬೆಲೆ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 14, 2021 | 9:03 AM

Share

ದೆಹಲಿ: ಇಂದು (ಸೋಮವಾರ, ಜೂನ್ 14) ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆ ಕಂಡಿದೆ. ರಾಜಸ್ಥಾನದ ಶ್ರೀಗಂಗನಗರ್​ನಲ್ಲಿ ಈಗಾಗಲೇ ಪೆಟ್ರೋಲ್​ ದರ ಗರಿಷ್ಟ ಮಟ್ಟದಲ್ಲಿದೆ. ಆಗಲೇ ಡೀಸೆಲ್​ ದರವು ಕೂಡಾ ಶತಕ ಬಾರಿಸಿ ಗರಿಷ್ಠ ಮಟ್ಟ ತಲುಪಿದೆ. ಶ್ರೀಗಂಗನಗರ್​ ಒಂದು ಪುಟ್ಟ ಪಟ್ಟಣ. ಲೀಟರ್ ಪೆಟ್ರೋಲ್ ದರ ಅತಿ ದುಬಾರಿಯಲ್ಲಿದ್ದು 107.53 ರೂಪಾಯಿಗೆ ಏರಿಕೆ ಆಗಿದೆ. ಹಾಗೆಯೇ ಲೀಟರ್​ ಡೀಸೆಲ್ ದರ 100 ರೂಪಾಯಿಗೆ ತಲುಪಿದೆ.

ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 29-30 ಪೈಸೆ ಹೆಚ್ಚಳ ಮಾಡಲಾಗಿದೆ. ಹಾಗೆಯೇ ಲೀಟರ್ ಡೀಸೆಲ್​ ದರದಲ್ಲಿ 28-30 ಪೈಸೆ ಏರಿಕೆ ಮಾಡಲಾಗಿದೆ. ಮೇ ತಿಂಗಳ ನಾಲ್ಕನೇ ತಾರೀಕಿನಿಂದ ಇಂಧನ ದರ ಏರಿಕೆಯತ್ತ ಮುಖ ಮಾಡಿತು. ಆ ಬಳಿಕ ಇಂದಿನವರೆಗೂ ಕೂಡಾ ಪೆಟ್ರೋಲ್​ ಮತ್ತು ಡೀಸೆಲ್​ ದರ ಹೆಚ್ಚಳವಾಗುತ್ತಲೇ ಇದೆ. ಒಟ್ಟು 25 ಬಾರಿ ತೈಲ ದರ ಏರಿಕೆ ಕಂಡಿದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.41 ರೂಪಾಯಿಗೆ ಏರಿಕೆ ಆಗಿದೆ. ಹಾಗೂ ಲೀಟರ್​ ಡೀಸೆಲ್​ ದರ 87.28 ರೂಪಾಯಿಗೆ ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 102.30 ರೂಪಾಯಿ ಇದೆ. ಹಾಗೂ ಲೀಟರ್​ ಡೀಸೆಲ್​ ದರ 94.70 ರೂಪಾಯಿಗೆ ಏರಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ ದರ 97.69 ರೂಪಾಯಿಗೆ ಏರಿಕೆ ಆಗಿದೆ. ಹಾಗೂ ಡೀಸೆಲ್​ ದರ 91.92 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 96.34 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 87.28 ರೂಪಾಯಿಗೆ ಏರಿದೆ.

ಇನ್ನು, ಬೆಂಗಳೂರಿನಲ್ಲಿ ಪೆಟ್ರೋಲ್​ ದರ ಶತಕದ ಹಾದಿಯಲ್ಲಿದ್ದು ಲೀಟರ್​ ಪೆಟ್ರೋಲ್​ಗೆ 99.63 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ಗೆ 92.52 ರೂಪಾಯಿಗೆ ಏರಿಕೆ ಆಗಿದೆ. 100ರ ಗಡಿ ದಾಟಲು ಇನ್ನೇನು ಕೆಲ ಪೈಸೆಗಳಷ್ಟೆ ಬಾಕಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
TV9 Web
TV9 Web

TV9 Kannada

Read More
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
‘ಪ್ಯಾರಡೈಸ್’ ಸೋಲು: ‘ಮಾರ್ಟಿನ್’ ದಿನಗಳನ್ನು ನೆನಪಿಸಿಕೊಂಡ ಉದಯ್ ಮೆಹ್ತಾ
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ