AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿಕೆಯಾದ ಪೆಟ್ರೋಲ್, ಡೀಸೆಲ್​ ದರ; ವಿವಿಧ ನಗರಗಳಲ್ಲಿ ಇಂಧನ ಬೆಲೆ ಎಷ್ಟು?

Petrol Diesel Rate Today: ಮೇ 29ನೇ ತಾರೀಕಿನಂದು ಮುಂಬೈ ನಗರ ಪೆಟ್ರೋಲ್​ ದರದಲ್ಲಿ 100ರ ಗಡಿ ದಾಟಿ ಮುನ್ನುಗ್ಗಿತ್ತು. ಪ್ರಮುಖ ಮೊಟ್ರೋ ಸಿಟಿಗಳಲ್ಲಿಯೇ ಅತಿ ಗರಿಷ್ಠ ಮಟ್ಟದ ಇಂಧನ ದರ ಹೊಂದಿರುವ ನಗರವೆಂದರೆ ಅದು ಮುಂಬೈ.

Petrol Price Today: ಇಂದು ಸಹ ಏರಿಕೆಯಾದ ಪೆಟ್ರೋಲ್, ಡೀಸೆಲ್​ ದರ; ವಿವಿಧ ನಗರಗಳಲ್ಲಿ ಇಂಧನ ಬೆಲೆ ಎಷ್ಟು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 22, 2021 | 9:17 AM

Share

Petrol Diesel Price Today | ದೆಹಲಿ: ಒಂದು ದಿನದ ವಿರಾಮದ ಬಳಿಕ ಇಂದು (ಮಂಗಳವಾರ, ಜೂನ್ 22) ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಏರಿಕೆಯತ್ತ ಸಾಗಿದೆ. ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ(Petrol Rate) 25 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ(Diesel Rate) 28 ಪೈಸೆ ಹೆಚ್ಚಳ ಮಾಡಲಾಗಿದೆ. ಮೇ ತಿಂಗಳ ಪ್ರಾರಂಭದಿಂದ ಒಟ್ಟು 28 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯಾಗಿದೆ. ಈಗಾಗಲೇ ಇಂಧನ ದರ(Fuel Price) ಗರಿಷ್ಠ ಮಟ್ಟ ತಲುಪಿದ್ದು ಗ್ರಾಹಕರ ಕೆಂಗಣ್ಣಿಗೆ ಕಾರಣವಾಗಿದೆ.

ಮೇ 29ನೇ ತಾರೀಕಿನಂದು ಮುಂಬೈ ನಗರ ಪೆಟ್ರೋಲ್​ ದರದಲ್ಲಿ 100ರ ಗಡಿ ದಾಟಿ ಮುನ್ನುಗ್ಗಿತ್ತು. ಪ್ರಮುಖ ಮೊಟ್ರೋ ಸಿಟಿಗಳಲ್ಲಿಯೇ ಅತಿ ಗರಿಷ್ಠ ಮಟ್ಟದ ಇಂಧನ ದರ ಹೊಂದಿರುವ ನಗರವೆಂದರೆ ಅದು ಮುಂಬೈ. ಇದೀಗ ಇಂದು ಮತ್ತೆ ತೈಲ ದರ ಏರಿಕೆಯ ಬಳಿಕ ಲೀಟರ್​ ಪೆಟ್ರೋಲ್​ ಬೆಲೆ 103.63 ರೂಪಾಯಿ ಆಗಿದೆ. ಅದೇ ರೀತಿ ಲೀಟರ್ ಡೀಸೆಲ್​ ದರದಲ್ಲಿ 28 ಪೈಸೆ ಹೆಚ್ಚಳದ ಬಳಿಕ 95.72 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ ​ಇಂಧನ ದರ ಹೆಚ್ಚಳದ ಬಳಿಕ ಲೀಟರ್​ ಪೆಟ್ರೋಲ್​ ದರ 97.50 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 88.23 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 98.65 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.83 ರೂಪಾಯಿಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 100.79 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.54 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಪೆಟ್ರೋಲ್​ ದರದಲ್ಲಿ 29 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28 ಪೈಸೆ ಹೆಚ್ಚಳ ಮಾಡಲಾಗಿದೆ.

ರಾಜಸ್ಥಾನ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಮ್ಮ ಮತ್ತು ಕಾಶ್ಮೀರ ಸೇರಿದಂತೆ ಕರ್ನಾಟಕದಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ರಾಜಸ್ಥಾನದ ಶ್ರೀಗಂಗನಗರ್​ನಲ್ಲಿ ಲೀಟರ್​ ಪೆಟ್ರೋಲ್ ಬೆಲೆ ಜತೆಗೆ ಡೀಸೆಲ್​​ ದರವೂ ಕೂಡಾ ಗರಿಷ್ಠ ಮಟ್ಟದಲ್ಲಿದೆ. ಲೀಟರ್​ ಪೆಟ್ರೊಲ್​ ದರ 108.37 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 101.12 ರೂಪಾಯಿ ನಿಗದಿಯಾಗಿದೆ. ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಮುಂಬೈ, ಹೈದಾರಾಬಾದ್​ ಮತ್ತು ಬೆಂಗಳೂರು ಶತಕ ಬಾರಿಸಿ ಮುನ್ನುಗ್ಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:24 am, Tue, 22 June 21

Follow Us
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್