AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಏರಿದ ಪೆಟ್ರೋಲ್​, ಡೀಸೆಲ್​ ಬೆಲೆ; ಗರಿಷ್ಠ ಮಟ್ಟ ತಲುಪಿದೆ ಇಂಧನ ದರ

Petrol Diesel Rate Today: ಮೇ 4ರಿಂದ ಇಲ್ಲಿಯವರೆಗೆ ಒಟ್ಟು 31 ಬಾರಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 101.75 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 94.25 ರೂಪಾಯಿಗೆ ಏರಿಕೆಯಾಗಿದೆ.

Petrol Price Today: ಇಂದು ಸಹ ಏರಿದ ಪೆಟ್ರೋಲ್​, ಡೀಸೆಲ್​ ಬೆಲೆ; ಗರಿಷ್ಠ ಮಟ್ಟ ತಲುಪಿದೆ ಇಂಧನ ದರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 27, 2021 | 9:08 AM

Share

Petrol Diesel Price Today | ದೆಹಲಿ: ಇಂದು (ಭಾನುವಾರ, ಜೂನ್ 27) ಮತ್ತೆ ಇಂಧನ ದರ ಏರಿಕೆ ಕಂಡಿದೆ. ಈಗಾಗಲೇ ಗರಿಷ್ಠ ಮಟ್ಟ ತಲುಪಿದ್ದ ಪೆಟ್ರೋಲ್​, ಡೀಸೆಲ್​ ದರ ಮತ್ತೆ ಏರಿಕೆಯತ್ತ ಸಾಗುತ್ತಲೇ ಇದೆ. ನಿನ್ನೆ ಕೂಡಾ ತೈಲ ದರದಲ್ಲಿ ಏರಿಕೆ ಮಾಡಲಾಗಿತ್ತು. ಆ ಬಳಿಕ ಸತತವಾಗಿ ಎರಡನೇ ದಿನವೂ ದರ ಹೆಚ್ಚಳವಾಗಿದೆ. ಕಳೆದ ವಾರದಲ್ಲಿ ಒಂದು ದಿನದ ವಿರಾಮದ ಬಳಿಕ ಪೆಟ್ರೋಲ್​, ಡೀಸೆಲ್​ ದರ ಏರಿಕೆ ಕಾಣುತ್ತಿತ್ತು. ಇಂದು ಸತತವಾಗಿ ಎರಡನೇ ದಿನವೂ ದರ ಏರಿಕೆಯತ್ತ ಸಾಗಿದೆ. ಈ ಗಾಗಲೇ ಗರಿಷ್ಠ ಮಟ್ಟದಲ್ಲಿರುವ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 104.56 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರದಲ್ಲಿ 96.42 ರೂಪಾಯಿಗೆ ಹೆಚ್ಚಳವಾಗಿದೆ.

ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಸತತ 18 ದಿನಗಳ ಕಾಲ ಇಂಧನ ದರ ಏರಿಕೆ ಆಗಿರಲಿಲ್ಲ. ತದನಂತರ ಮೇ 4ನೇ ತಾರೀಕಿನಿಂದ ಹೆಚ್ಚಳವಾಗಲು ಪ್ರಾರಂಭಿಸಿದ ಪೆಟ್ರೋಲ್​, ಡೀಸೆಲ್​ ದರ ಇಂದಿನವರೆಗೂ ಏರುತ್ತಲೇ ಇದೆ. ಮೇ 4ರಿಂದ ಇಲ್ಲಿಯವರೆಗೆ ಒಟ್ಟು 31 ಬಾರಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 101.75 ರೂಪಾಯಿಗೆ ಏರಿಕೆಯಾಗಿದೆ. ಲೀಟರ್​ ಡೀಸೆಲ್​ ದರ 94.25 ರೂಪಾಯಿಗೆ ಏರಿಕೆಯಾಗಿದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 98.46 ರೂಪಾಯಿ ಇದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 88.90 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಶತಕ ಬಾರಿಸಲು ಗಡಿಯ ಅಂಚಿನಲ್ಲಿಯೇ ಇದೆ. ಲೀಟರ್ ಪೆಟ್ರೋಲ್​ ದರ 99.49 ಹಾಗೂ ಲೀಟರ್​ ಡೀಸೆಲ್​ ದರ 93.46 ರೂಪಾಯಿಗೆ ಏರಿಕೆ ಆಗಿದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 98.30 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 91.75 ರೂಪಾಯಿಗೆ ಹೆಚ್ಚಳವಾಗಿದೆ. ಭೋಪಾಲ್​ನಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಲೀಟರ್​ ಪೆಟ್ರೋಲ್ ದರ 106.71 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.63 ರೂಪಾಯಿಗೆ ಹೆಚ್ಚಳವಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್