Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ!

Petrol Diesel Rate Today: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 102.11 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.54 ರೂಪಾಯಿಗೆ ಏರಿಕೆಯಾಗಿದೆ.

Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jun 29, 2021 | 9:12 AM

Petrol Diesel Price Today | ದೆಹಲಿ: ಒಂದು ದಿನದ ವಿರಾಮದ ಬಳಿಕ ಇಂದು (ಜೂನ್​ 29, ಮಂಗಳವಾರ) ಮತ್ತೆ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗಿದೆ. ಲೀಟರ್​ ಪೆಟ್ರೊಲ್​ ದರದಲ್ಲಿ 31-35 ಪೈಸೆ ಹಾಗೂ ಲೀಟರ್​ ಡೀಸೆಲ್​ ದಲ್ಲಿ 26-30 ಪೈಸೆ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಪ್ರಮುಖ ನಗರಗಳಲ್ಲಿ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಆರಂಭಿಸಿದ ತೈಲ ದರ ಇಂದಿನವರೆಗೂ ಏರುತ್ತಲೇ ಇದೆ. ಒಟ್ಟು 32 ಬಾರಿ ಏರಿಕೆ ಕಂಡಿದೆ. ದೆಹಲಿಯಲ್ಲಿ ಇಂದು ಲೀಟರ್​ ಪೆಟ್ರೋಲ್ ದರ 98.81 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 89.18 ರೂಪಾಯಿಗೆ ಏರಿಕೆ ಆಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿಯೇ ಮುಂಬೈನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗರಿಷ್ಠ ಮಟ್ಟದಲ್ಲಿದೆ. ಲೀಟರ್ ಪೆಟ್ರೋಲ್​ ದರ 104.90 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ ಲೀಟರ್ ಡೀಸೆಲ್​ ದರ 96.72 ರೂಪಾಯಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 99.80 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.72 ರೂಪಾಯಿ ಆಗಿದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 98.64 ರೂಪಾಯಿಗೆ ಏರಿಕೆಯಾಗಿದೆ ಹಾಗೂ ಲೀಟರ್​ ಡೀಸೆಲ್​ ದರ 92.03 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಭೋಪಾಲ್​, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕದಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 102.11 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.54 ರೂಪಾಯಿಗೆ ಏರಿಕೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ