Petrol Price Today: ಪ್ರಮುಖ ನಗರಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್​ ಬೆಲೆ ಇನ್ನೂ ಏರುತ್ತಲೇ ಇದೆ; ಇಂಧನ ದರ ವಿವರ ಹೀಗಿದೆ

| Updated By: shruti hegde

Updated on: Jul 01, 2021 | 9:26 AM

Petrol Diesel Rate Today: ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 104.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 96.72 ರೂಪಾಯಿ ಇದೆ.

Petrol Price Today: ಪ್ರಮುಖ ನಗರಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್​ ಬೆಲೆ ಇನ್ನೂ ಏರುತ್ತಲೇ ಇದೆ; ಇಂಧನ ದರ ವಿವರ ಹೀಗಿದೆ
ಏರುತ್ತಲೇ ಇದೆ ಇಂಧನದ ದರ (ಪಿಟಿಐ ಚಿತ್ರ)
Follow us on

Petrol Diesel Price Today | ದೆಹಲಿ: ಜನರಿಗೆ ಅಗತ್ಯವಿರುವಂತಹ ಪೆಟ್ರೋಲ್​, ಡೀಸೆಲ್ ದರ ಏರುತ್ತಲೇ ಇದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಇಂಧನ ದರ ಇನ್ನೂ ಹೆಚ್ಚಳವಾಗುತ್ತಲೇ ಇದೆ, ಇಳಿಕೆಯತ್ತ ಸಾಗುವುದು ಯಾವಾಗ? ಎಂಬುದು ಗ್ರಾಹಕರ ಪ್ರಶ್ನೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್​ ದರ ಮಾತ್ರ ಕುಸಿತ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದನ್ನು ಗಮನಿಸಿದ ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ತೈಲ ದರದಲ್ಲಿ ಯಾವುದೇ ಬದಲಾವಣೆಗಳನ್ನು ಕಂಡಿಲ್ಲದ ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ. ಇಳಿಕೆಯತ್ತ ಸಾಗದಿದ್ದರೂ ಹೆಚ್ಚಳವಾಗಿಲ್ಲವಲ್ಲ! ಅಷ್ಟೇ ಸಾಕು, ಎಂದು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಇಂದು ( ಜುಲೈ 1, ಗುರವಾರ) ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇದು ಗ್ರಾಹಕರಿಗೆ ಸ್ವಲ್ಪ ಸಮಾಧಾನ ತರುವ ವಿಚಾರ.

ಏರುತ್ತಲೇ ಇರುವ ಪೆಟ್ರೋಲ್​, ಡೀಸೆಲ್​ ದರದಿಂದ ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕೇರಳ, ತಮಿಳುನಾಡು, ಬಿಹಾರ, ಒಡಿಶಾ, ಕರ್ನಾಟಕ, ಲಡಾಕ್​, ಪಾಟ್ನಾದಲ್ಲಿ ಈಗಾಗಲೇ ಪೆಟ್ರೋಲ್​ ದರ 100ರ ಗಡಿ ದಾಟಿದೆ. ಹಾಗೆಯೇ ಕರ್ನಾಟಕದ ಬಹುತೇಹ ಜಿಲ್ಲೆಗಳಲ್ಲಿ ಸಹ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಕಳೆದ ಮೇ ತಿಂಗಳಿನಿಂದ ತೈಲ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತ್ತು. ಇಲ್ಲಿಯವರೆಗೂ ಕೂಡಾ ಏರುತ್ತಲೇ ಇದೆ. ಒಟ್ಟು 32 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಲೀಟರ್​​ ಪೆಟ್ರೋಲ್​ ದರ 98.81 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 89.18 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 102.11 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.54 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 104.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 96.72 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 99.80 ರೂಪಾಯಿ ಇದೆ. ಲೀಟರ್ ಡೀಸೆಲ್​ ದರ 93.72 ರೂಪಾಯಿ ಆಗಿದೆ. ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 98.64 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.03 ರೂಪಾಯಿ ಇದೆ. ಇನ್ನು, ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 100.81 ರೂಪಾಯಿ ಇದ್ದರೆ, ಲೀಟರ್ ಡೀಸೆಲ್​ ದರ 94.52 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

Published On - 9:07 am, Thu, 1 July 21