AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಶತಕ ಬಾರಿಸಿ ಮುನ್ನುಗ್ಗುತ್ತಲೇ ಇದೆ ಇಂಧನ ದರ; ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ

Petrol Diesel Price Today: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 100.95 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 89.92 ರೂಪಾಯಿ ಇದೆ. ಅದೇ ರೀತಿ ಮುಂಬೈಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 106.97 ರೂಪಾಯಿಗೆ ತಲುಪಿದೆ.

Petrol Price Today: ಶತಕ ಬಾರಿಸಿ ಮುನ್ನುಗ್ಗುತ್ತಲೇ ಇದೆ ಇಂಧನ ದರ; ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jul 11, 2021 | 9:22 AM

Share

Petrol Diesel Price Today|ದೆಹಲಿ: ನಿನ್ನೆ ದರ ಏರಿಕೆಯ ಬಳಿಕ ಇಂದು (ಜುಲೈ 11, ಭಾನುವಾರ) ಪೆಟ್ರೋಲ್ (Petrol Rate)​ ಮತ್ತು ಡೀಸೆಲ್​ ದರದಲ್ಲಿ (Diesel Rate) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ನಿನ್ನೆ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 30 ರಿಂದ 39 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 24 ರಿಂದ 32 ಪೈಸೆ ಹೆಚ್ಚಳ ಮಾಡಲಾಗಿತ್ತು. ಆದರೆ ಸದ್ಯದಲ್ಲಿ ಇಂಧನ ದರ (Fuel Rate) ಇಳಿಕೆಯತ್ತ ಸಾಗುವ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 100.95 ರೂಪಾಯಿ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 89.92 ರೂಪಾಯಿ ಇದೆ. ಅದೇ ರೀತಿ ಮುಂಬೈಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 106.97 ರೂಪಾಯಿಗೆ ತಲುಪಿದೆ. ಇಂದು ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್ 101.05 ರೂಪಾಯಿಗೆ ಹಾಗೂ ಡೀಸೆಲ್ ಪ್ರತಿ ಲೀಟರ್​ಗೆ 93.01 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ ದರ 101.71 ರೂಪಾಯಿ ಹಾಗೂ ಲೀಟರ್​ ಡೀಸೆಲ್ ಬೆಲೆ 94.43 ರೂಪಾಯಿ ಇದೆ.

ಇನ್ನು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಲಡಾಖ್, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ, ದೆಹಲಿ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಪೆಟ್ರೋಲ್​ ಬೆಲೆ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:21 am, Sun, 11 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್