Petrol Price Today: ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿನ ಇಂಧನ ದರ ವಿವರ ಹೀಗಿದೆ
Petrol Diesel Rate Today: ಜುಲೈ ತಿಂಗಳಲ್ಲಿ ಡೀಸೆಲ್ ಬೆಲೆ ಇನ್ನು ಬದಲಾವಣೆ ಕಂಡಿಲ್ಲ ಎನ್ನುವುದು ಕೊಂಚ ಸಮಾಧಾನ ತಂದಿದೆ. ಈ ವಾರದಲ್ಲಿ ಬುಧವಾರ ಮತ್ತು ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
Petrol Diesel Price Today| ದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು (ಜುಲೈ 3) ಯಾವುದೇ ಬದಲಾವಣೆ ಮಾಡಿಲ್ಲ. ಶುಕ್ರವಾರ ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ. ಆದರೆ ಜುಲೈ ತಿಂಗಳಲ್ಲಿ ಡೀಸೆಲ್ ಬೆಲೆ ಇನ್ನು ಬದಲಾವಣೆ ಕಂಡಿಲ್ಲ ಎನ್ನುವುದು ಕೊಂಚ ಸಮಾಧಾನ ತಂದಿದೆ. ಈ ವಾರದಲ್ಲಿ ಬುಧವಾರ ಮತ್ತು ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪೆಟ್ರೋಲ್ ಬೆಲೆ ವೇಗವಾಗಿ ಹೆಚ್ಚಾಗುತ್ತಿದ್ದು, ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.16 ರೂಪಾಯಿಯಾದರೆ, ಡಿಸೇಲ್ ಬೆಲೆ ಲೀಟರ್‌ಗೆ 89.18 ರೂಪಾಯಿಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.13 ರೂಪಾಯಿ ಮತ್ತು ಡೀಸೆಲ್ ಲೀಟರ್ 93.72 ರೂಪಾಯಿ, ಕೋಲ್ಕತ್ತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.04 ಮತ್ತು ಡೀಸೆಲ್ ಲೀಟರ್‌ಗೆ 92.03 ರೂಪಾಯಿ, ಪಾಟ್ನಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.81 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 94.52 ರೂಪಾಯಿಯಾಗಿದೆ.
ಚಂಡೀಗಡದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 95.36 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 88.81 ರೂಪಾಯಿ, ಲಕ್ನೋದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 95.97 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 89.59 ರೂಪಾಯಿ, ಭೋಪಾಲ್‌ನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 107.07 ಮತ್ತು ಡೀಸೆಲ್ ಲೀಟರ್‌ಗೆ 97.93 ರೂಪಾಯಿ, ಜೈಪುರದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.54 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 98.29 ರೂಪಾಯಿಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.99 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.54 ರೂಪಾಯಿಯಾಗಿದೆ.
ಪೆಟ್ರೋಲ್ ದರದಲ್ಲಿ ಮೇ 4 ರಿಂದ ಸುಮಾರು 9 ರೂಪಾಯಿ ಹೆಚ್ಚಳ ಪಶ್ಚಿಮ ಬಂಗಾಳ ಚುನಾವಣೆಯ ನಂತರ, ಮೇ 4 ರಿಂದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲು ಪ್ರಾರಂಭಿಸಿದವು. ಅಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಪೆಟ್ರೋಲ್ 34 ದಿನಗಳಲ್ಲಿ ಪ್ರತಿ ಲೀಟರ್‌ಗೆ 8.84 ರೂಪಾಯಿ ಹೆಚ್ಚಾಗಿದ್ದು, ಅದೇ ಸಮಯದಲ್ಲಿ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 8.39 ರೂಪಾಯಿ ಹೆಚ್ಚಳ ಕಂಡಿದೆ.
ಪೆಟ್ರೋಲ್-ಡೀಸೆಲ್ ಇಲ್ಲಿಯವರೆಗೆ ಎಷ್ಟು ದುಬಾರಿಯಾಗಿದೆ? 5 ರಾಜ್ಯಗಳಲ್ಲಿ ಚುನಾವಣೆಯ ನಂತರ, ಮೇ 4 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಹಂತವು ಪ್ರಾರಂಭವಾಗಿದ್ದು, ಇದು ಇಲ್ಲಿಯವರೆಗೆ ಮುಂದುವರೆದಿದೆ. ಮೇ 4 ರಿಂದ ಇಲ್ಲಿಯವರೆಗೆ, ಪೆಟ್ರೋಲ್ ಬೆಲೆಯಲ್ಲಿ ಒಟ್ಟು 33 ಪಟ್ಟು ಹೆಚ್ಚಾಗಿದೆ. ಆದರೆ, ಡೀಸೆಲ್ ಬೆಲೆಯನ್ನು 32 ಪಟ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದಿಂದ, ದೇಶದ ಹೆಚ್ಚಿನ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಬೆಲೆ ದಾಖಲೆಯ ಮಟ್ಟವನ್ನು ತಲುಪಿದೆ. ಇದರೊಂದಿಗೆ ರಾಜಧಾನಿ ದೆಹಲಿಯಲ್ಲಿ ಇದುವರೆಗೆ ಪೆಟ್ರೋಲ್ ಬೆಲೆ 8.76 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 8.45 ರೂಪಾಯಿ ಹೆಚ್ಚಳವಾಗಿದೆ.
11 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂಪಾಯಿ ದೇಶಾದ್ಯಂತ 11 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100 ರೂಪಾಯಿಯಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಲಡಾಖ್ ಮತ್ತು ಬಿಹಾರದಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಇಂದು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 107.43 ರೂಪಾಯಿಯಾಗಿದ್ದು, ದೇಶಾದ್ಯಂತ ಅತ್ಯಂತ ದುಬಾರಿ ಪೆಟ್ರೋಲ್ ರಾಜಸ್ಥಾನದ ಗಂಗನಗರದಲ್ಲಿ ಲಭ್ಯವಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html
Published On - 8:37 am, Sat, 3 July 21