AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಏರುತ್ತಲೇ ಇದ್ದ ಪೆಟ್ರೋಲ್​, ಡೀಸೆಲ್​ ದರ ಇಂದು ಸಹ ಹೆಚ್ಚಳವೇ?

Petrol Diesel Rate Today: ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರದಲ್ಲಿ ಕೆಲವೇ ಪೈಸೆಗಳಷ್ಟು ಏರಿಕೆ ಆದರೆ ಶತಕ ಬಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಲೀಟರ್ ಪೆಟ್ರೋಲ್ ದರ 99.33 ರೂ. ಹಾಗೂ ಲೀಟರ್​ ಡೀಸೆಲ್​ ದರ 91.21 ರೂಪಾಯಿ ಇದೆ.

Petrol Price Today: ಏರುತ್ತಲೇ ಇದ್ದ ಪೆಟ್ರೋಲ್​, ಡೀಸೆಲ್​ ದರ ಇಂದು ಸಹ ಹೆಚ್ಚಳವೇ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 13, 2021 | 8:53 AM

Share

ದೆಹಲಿ: ಇಂಧನ ದರ ಸತತವಾಗಿ ಎರಡು ದಿನಗಳಿಂದ ಏರಿಕೆ ಕಂಡಿತ್ತು. ಇಂದು (ಭಾನುವಾರ, ಜೂನ್​ 13) ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.12 ರೂಪಾಯಿ ಇದೆ. ಹಾಗೆಯೇ ಲೀಟ್​ ಡೀಸೆಲ್​ ದರ 86.98 ರೂಪಾಯಿ ಇದೆ. ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್​ ದರ ಗರಿಷ್ಟ ಮಟ್ಟದಲ್ಲಿದೆ. ಲೀಟರ್​ ಪೆಟ್ರೋಲ್​ ದರ 102.30 ರೂ. ಹಾಗೂ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 97.43 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 91.64 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 96.06 ರೂ. ಹಾಗೂ ಲೀಟರ್​ ಡೀಸೆಲ್ ದರ 89.83 ರೂಪಾಯಿ ಇದೆ.

ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರದಲ್ಲಿ ಕೆಲವೇ ಪೈಸೆಗಳಷ್ಟು ಏರಿಕೆ ಆದರೆ ಶತಕ ಬಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಲೀಟರ್ ಪೆಟ್ರೋಲ್ ದರ 99.33 ರೂ. ಹಾಗೂ ಲೀಟರ್​ ಡೀಸೆಲ್​ ದರ 91.21 ರೂಪಾಯಿ ಇದೆ. ಭೂಪಾಲ್​ನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 104.29 ರೂ. ಹಾಗೂ ಲೀಟರ್​ ಡಿಸೆಲ್ ದರ 95.60 ರೂಪಾಯಿ ಇದೆ.

ಕಳೆದ ಮೇ ತಿಂಗಳ 4ನೇ ತಾರೀಕಿನಂದು ಇಂಧನ ದರ ಏರಿಕೆ ಕಾಣಲು ಪ್ರಾರಂಭಿಸಿದೆ. ಇಲ್ಲಿಯವರೆಗೆ ಒಟ್ಟು 24 ಬಾರಿ ಏರಿಕೆ ಕಂಡಿದೆ. ಹೀಗಾಗಿ ಲೀಟರ್​ ಪೆಟ್ರೋಲ್​ ದರದಲ್ಲಿ 5.72 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರದಲ್ಲಿ 6.25 ರೂಪಾಯಿ ಹೆಚ್ಚಳವಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:49 am, Sun, 13 June 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್