ದೆಹಲಿ: ಇಂಧನ ದರ ಸತತವಾಗಿ ಎರಡು ದಿನಗಳಿಂದ ಏರಿಕೆ ಕಂಡಿತ್ತು. ಇಂದು (ಭಾನುವಾರ, ಜೂನ್ 13) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.12 ರೂಪಾಯಿ ಇದೆ. ಹಾಗೆಯೇ ಲೀಟ್ ಡೀಸೆಲ್ ದರ 86.98 ರೂಪಾಯಿ ಇದೆ. ಪ್ರಮುಖ ಮೆಟ್ರೋ ನಗರಗಳಿಗೆ ಹೋಲಿಸಿದರೆ ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಗರಿಷ್ಟ ಮಟ್ಟದಲ್ಲಿದೆ. ಲೀಟರ್ ಪೆಟ್ರೋಲ್ ದರ 102.30 ರೂ. ಹಾಗೂ ಲೀಟರ್ ಡೀಸೆಲ್ ದರ 94.39 ರೂಪಾಯಿ ಇದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 97.43 ರೂಪಾಯಿ ಇದ್ದು, ಲೀಟರ್ ಡೀಸೆಲ್ಗೆ 91.64 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 96.06 ರೂ. ಹಾಗೂ ಲೀಟರ್ ಡೀಸೆಲ್ ದರ 89.83 ರೂಪಾಯಿ ಇದೆ.
ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ದರದಲ್ಲಿ ಕೆಲವೇ ಪೈಸೆಗಳಷ್ಟು ಏರಿಕೆ ಆದರೆ ಶತಕ ಬಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಲೀಟರ್ ಪೆಟ್ರೋಲ್ ದರ 99.33 ರೂ. ಹಾಗೂ ಲೀಟರ್ ಡೀಸೆಲ್ ದರ 91.21 ರೂಪಾಯಿ ಇದೆ. ಭೂಪಾಲ್ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.29 ರೂ. ಹಾಗೂ ಲೀಟರ್ ಡಿಸೆಲ್ ದರ 95.60 ರೂಪಾಯಿ ಇದೆ.
ಕಳೆದ ಮೇ ತಿಂಗಳ 4ನೇ ತಾರೀಕಿನಂದು ಇಂಧನ ದರ ಏರಿಕೆ ಕಾಣಲು ಪ್ರಾರಂಭಿಸಿದೆ. ಇಲ್ಲಿಯವರೆಗೆ ಒಟ್ಟು 24 ಬಾರಿ ಏರಿಕೆ ಕಂಡಿದೆ. ಹೀಗಾಗಿ ಲೀಟರ್ ಪೆಟ್ರೋಲ್ ದರದಲ್ಲಿ 5.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರದಲ್ಲಿ 6.25 ರೂಪಾಯಿ ಹೆಚ್ಚಳವಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html
Published On - 8:49 am, Sun, 13 June 21