ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಮಂಗಳವಾರ, ಜೂನ್ 15) ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಇಂದು ಸ್ಥಿರತೆ ಕಾಯ್ದುಕೊಂಡಿದೆ. ಸೋಮವಾರ, ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 29 ಪೈಸೆ ಮತ್ತು ಡೀಸೆಲ್ ಬೆಲೆಯನ್ನು 30 ಪೈಸೆಗೆ ಹೆಚ್ಚಿಸಲಾಗಿತ್ತು. ಏರುತ್ತಿರುವ ಇಂಧನದ ಬೆಲೆಯಿಂದಾಗಿ ಈಗಾಗಲೇ ಕೆಲವು ಮಹಾನಗರಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಇನ್ನು ರಾಜಸ್ಥಾನದ ಶ್ರೀಗಂಗನಗರದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 107.53 ರೂಪಾಯಿಯಾಗಿದೆ ಹಾಗೂ ಡಿಸೇಲ್ ಬೆಲೆ ಲೀಟರ್‌ಗೆ 100 ರೂಪಾಯಿಯಾಗಿದೆ.
ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡಿಸೇಲ್ ದರ?
ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.41 ರೂಪಾಯಿ ಮತ್ತು ಡೀಸೆಲ್ 87.28 ರೂಪಾಯಿಯಾಗಿದೆ. ಅದೇ ರೀತಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 102.58 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.70 ರೂಪಾಯಿಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.34 ರೂಪಾಯಿ ಮತ್ತು ಡೀಸೆಲ್ 90.12 ರೂಪಾಯಿ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.69 ರೂಪಾಯಿ ಮತ್ತು ಡೀಸೆಲ್ 91.92 ರೂಪಾಯಿ. ಪಾಟ್ನಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 98.49 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 92.59 ರೂಪಾಯಿ. ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 93.40 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 87.47 ರೂಪಾಯಿ. ಭೋಪಾಲ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.59 ರೂಪಾಯಿಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.63 ರೂಪಾಯಿ ಮತ್ತು ಡಿಸೇಲ್ ಬೆಲೆ ಲೀಟರ್‌ಗೆ 92.52 ರೂಪಾಯಿಯಾಗಿದೆ.
ಪೆಟ್ರೋಲ್ ದರ 25 ದಿನಗಳಲ್ಲಿ 6.09 ರೂಪಾಯಿ ಹೆಚ್ಚಳ
ಮೇ 4 ರಿಂದ ಪೆಟ್ರೋಲ್ ಬೆಲೆ ಸತತವಾಗಿ ಏರಿಕೆ ಕಂಡಿದ್ದು, ಪೆಟ್ರೋಲ್ ದರ 25 ದಿನಗಳಲ್ಲಿ ಪ್ರತಿ ಲೀಟರ್‌ಗೆ 6.09 ರೂಪಾಯಿಗಳಷ್ಟು ದುಬಾರಿಯಾಗಿದೆ.
ಡೀಸೆಲ್ ದರ 25 ದಿನಗಳಲ್ಲಿ 6.50 ರೂಪಾಯಿ ಹೆಚ್ಚಳ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 20 ಫೆಬ್ರವರಿ 2021 ರಂದು ಡೀಸೆಲ್ ಬೆಲೆಯನ್ನು ಲೀಟರ್‌ಗೆ 17 ಪೈಸೆ ಹೆಚ್ಚಿಸಿತ್ತು. ಇದರ ನಂತರ, ಎರಡು ತಿಂಗಳಿಗಿಂತ ಹೆಚ್ಚು ಕಾಲ ಡಿಸೇಲ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಕಂಡುಬಂದಿರಲಿಲ್ಲ. ಆದರೆ ಮೇ 4 ರಿಂದ ಅಂದರೆ ಚುನಾವಣೆಯ ನಂತರದ 25 ದಿನಗಳಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 6.30 ರೂಪಾಯಿ ಏರಿಕೆಯಾಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html