AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಏರುತ್ತಲೇ ಇದ್ದ ಪೆಟ್ರೋಲ್​, ಡೀಸೆಲ್​ ಇಂದಿನ ದರವೆಷ್ಟು?

Petrol Diesel Rate Today: ಇಂದು ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.66 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 87.41 ರೂಪಾಯಿ ಇದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ಗರಿಷ್ಟ ಮಟ್ಟದಲ್ಲಿದ್ದ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 102.82 ರೂಪಾಯಿ ಇದೆ

Petrol Price Today: ಏರುತ್ತಲೇ ಇದ್ದ ಪೆಟ್ರೋಲ್​, ಡೀಸೆಲ್​ ಇಂದಿನ ದರವೆಷ್ಟು?
ಸಂಗ್ರಹ ಚಿತ್ರ
TV9 Web
| Edited By: |

Updated on: Jun 17, 2021 | 8:32 AM

Share

Petrol Diesel Price Today | ದೆಹಲಿ: ಈಗಾಗಲೇ ಗರಿಷ್ಟ ಮಟ್ಟ ತಲುಪಿರುವ ಪೆಟ್ರೊಲ್(Petrol Rate)​ ಮತ್ತು ಡೀಸೆಲ್​ ದರದಲ್ಲಿ(Diesel Rate) ಇಂದು (ಗುರುವಾರ, ಜೂನ್​ 17) ಯಾವುದೇ ಬದಲಾವಣೆಗಳಿಲ್ಲ. ನಿನ್ನೆ ಲೀಟರ್​ ಪೆಟ್ರೋಲ್​ ಬೆಲೆಯನ್ನು 25 ಪೈಸೆ ಏರಿಕೆ ಮಾಡಲಾಗಿತ್ತು. ಹಾಗೆಯೇ ಲೀಟರ್​ ಡೀಸೆಲ್​ ದರದಲ್ಲಿ 13 ಪೈಸೆ ಹೆಚ್ಚಳ ಮಾಡಲಾಗಿತ್ತು. ಕಳೆದ ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್ ಮತ್ತು ಡೀಸೆಲ್​ ದರ ಒಟ್ಟು 25 ಬಾರಿ ಏರಿಕೆ ಕಂಡಿದೆ.

ಇಂದು ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.66 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​ ದರ 87.41 ರೂಪಾಯಿ ಇದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ಗರಿಷ್ಟ ಮಟ್ಟದಲ್ಲಿದ್ದ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 102.82 ರೂಪಾಯಿ ಇದೆ ಹಾಗೂ ಲೀಟರ್​ ಡೀಸೆಲ್​ ದರ 94.84 ರೂಪಾಯಿ ಇದೆ.

ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 99.89 ರೂಪಾಯಿಗೆ ತಲುಪಿದೆ. ಇನ್ನೇನು ಕೆಲ ಪೈಸೆಗಳು ಏರಿಕೆ ಆದರೆ ಶತಕ ಬಾರಿಸುವ ನಿರೀಕ್ಷೆಯಲ್ಲಿದೆ. ಲೀಟರ್​ ಡೀಸೆಲ್​ ದರ 92.89 ರೂಪಾಯಿ ಇದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಬಳ್ಳಾರಿ ಹಾಗೂ ಉತ್ತರ ಕನ್ನಡದ ಶಿರಸಿಯಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ನಿನ್ನೆ ತೈಲ ದರ ಹೆಚ್ಚಳ ಬಳಿಕ ಈ ಗುಂಪಿಗೆ ಬೀದರ್​ ಮತ್ತು ಹಾವೇರಿ ಜಿಲ್ಲೆಗಳು ಸೇರಿಕೊಂಡಿವೆ.

ಜೂನ್​ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರವನ್ನು ಒಟ್ಟು 9 ಬಾರಿ ಏರಿಕೆ ಮಾಡಲಾಯಿತು. ಕಳೆದ ಮೇ ತಿಂಗಳಿನಲ್ಲಿ ಒಟ್ಟು 16 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿತ್ತು. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 25 ಬಾರಿ ಇಂಧನ ದರವನ್ನು ಹೆಚ್ಚಿಸಲಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 96.58 ರೂಪಾಯಿ, ಲೀಟರ್​ ಡೀಸೆಲ್ ದರ 90.25 ರೂಪಾಯಿ ಇದೆ. ಹಾಗೆಯೇ ಚೆನ್ನೈನಲ್ಲಿ ಲೀಟರ್​ ಪೆಟ್ರೊಲ್​ ದರ 97.91 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.04 ರೂಪಾಯಿ ಇದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಲಡಾಕ್​ನಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ