Petrol Diesel Price Today | ದೆಹಲಿ: ಈಗಾಗಲೇ ಗರಿಷ್ಟ ಮಟ್ಟ ತಲುಪಿರುವ ಪೆಟ್ರೊಲ್(Petrol Rate) ಮತ್ತು ಡೀಸೆಲ್ ದರದಲ್ಲಿ(Diesel Rate) ಇಂದು (ಗುರುವಾರ, ಜೂನ್ 17) ಯಾವುದೇ ಬದಲಾವಣೆಗಳಿಲ್ಲ. ನಿನ್ನೆ ಲೀಟರ್ ಪೆಟ್ರೋಲ್ ಬೆಲೆಯನ್ನು 25 ಪೈಸೆ ಏರಿಕೆ ಮಾಡಲಾಗಿತ್ತು. ಹಾಗೆಯೇ ಲೀಟರ್ ಡೀಸೆಲ್ ದರದಲ್ಲಿ 13 ಪೈಸೆ ಹೆಚ್ಚಳ ಮಾಡಲಾಗಿತ್ತು. ಕಳೆದ ಮೇ ತಿಂಗಳಿನಿಂದ ಏರಿಕೆ ಕಾಣಲು ಪ್ರಾರಂಭಿಸಿದ ಪೆಟ್ರೋಲ್ ಮತ್ತು ಡೀಸೆಲ್ ದರ ಒಟ್ಟು 25 ಬಾರಿ ಏರಿಕೆ ಕಂಡಿದೆ.
ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.66 ರೂಪಾಯಿ ಇದೆ. ಹಾಗೆಯೇ ಲೀಟರ್ ಡೀಸೆಲ್ ದರ 87.41 ರೂಪಾಯಿ ಇದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ಗರಿಷ್ಟ ಮಟ್ಟದಲ್ಲಿದ್ದ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 102.82 ರೂಪಾಯಿ ಇದೆ ಹಾಗೂ ಲೀಟರ್ ಡೀಸೆಲ್ ದರ 94.84 ರೂಪಾಯಿ ಇದೆ.
ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.89 ರೂಪಾಯಿಗೆ ತಲುಪಿದೆ. ಇನ್ನೇನು ಕೆಲ ಪೈಸೆಗಳು ಏರಿಕೆ ಆದರೆ ಶತಕ ಬಾರಿಸುವ ನಿರೀಕ್ಷೆಯಲ್ಲಿದೆ. ಲೀಟರ್ ಡೀಸೆಲ್ ದರ 92.89 ರೂಪಾಯಿ ಇದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಬಳ್ಳಾರಿ ಹಾಗೂ ಉತ್ತರ ಕನ್ನಡದ ಶಿರಸಿಯಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗಿದೆ. ನಿನ್ನೆ ತೈಲ ದರ ಹೆಚ್ಚಳ ಬಳಿಕ ಈ ಗುಂಪಿಗೆ ಬೀದರ್ ಮತ್ತು ಹಾವೇರಿ ಜಿಲ್ಲೆಗಳು ಸೇರಿಕೊಂಡಿವೆ.
ಜೂನ್ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಇಂಧನ ದರವನ್ನು ಒಟ್ಟು 9 ಬಾರಿ ಏರಿಕೆ ಮಾಡಲಾಯಿತು. ಕಳೆದ ಮೇ ತಿಂಗಳಿನಲ್ಲಿ ಒಟ್ಟು 16 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿತ್ತು. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 25 ಬಾರಿ ಇಂಧನ ದರವನ್ನು ಹೆಚ್ಚಿಸಲಾಗಿದೆ.
ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 96.58 ರೂಪಾಯಿ, ಲೀಟರ್ ಡೀಸೆಲ್ ದರ 90.25 ರೂಪಾಯಿ ಇದೆ. ಹಾಗೆಯೇ ಚೆನ್ನೈನಲ್ಲಿ ಲೀಟರ್ ಪೆಟ್ರೊಲ್ ದರ 97.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.04 ರೂಪಾಯಿ ಇದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಲಡಾಕ್ನಲ್ಲಿ ಲೀಟರ್ ಪೆಟ್ರೋಲ್ ದರ 100ರ ಗಡಿ ದಾಟಿ ಮುನ್ನುಗ್ಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html