AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೊಲ್​, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ!

Petrol Diesel Rate Today: ಈಗಾಗಲೇ ಗರಿಷ್ಠ ಮಟ್ಟದಲ್ಲಿರುವ ವಾಣಿಜ್ಯ ನಗರಿ ಮುಂಬೈ ಲೀಟರ್​ ಪೆಟ್ರೋಲ್​ ಬೆಲೆಯನ್ನು 103.36 ರೂಪಾಯಿ ಕಾಯ್ದಿರಿಸಿಕೊಂಡಿದೆ. ಅದೇ ರೀತಿ ಲೀಟರ್​ ಡೀಸೆಲ್ ಬೆಲೆ 95.44 ರೂಪಾಯಿ ಇದೆ.

Petrol Price Today: ಇಂದು ಪೆಟ್ರೊಲ್​, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ!
ಪಿಟಿಐ ಚಿತ್ರ
TV9 Web
| Edited By: |

Updated on: Jun 21, 2021 | 8:31 AM

Share

ದೆಹಲಿ: ಈಗಾಗಲೇ ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್​ ಮತ್ತು ಡೀಸೆಲ್​ ಇಂದು (ಸೋಮವಾರ, ಜೂನ್​ 21) ಯಾವುದೇ ಬದಲಾವಣೆ ಕಂಡಿಲ್ಲ. ನಿನ್ನೆ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ದರ 97.22 ರೂಪಾಯಿ ಹಾಗೂ ಲೀಟ​ರ್ ಡೀಸೆಲ್​ ದರ 87.97 ರೂಪಾಯಿಗೆ ಹೆಚ್ಚಳವಾಗಿದೆ. ಕಳೆದ ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 27 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಏರಿಕೆ ಮಾಡಲಾಗಿದೆ. ಆ ಮೂಲಕ ಲೀಟರ್​ ಪೆಟ್ರೋಲ್​ ಬೆಲೆ 6.82 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 7.24 ರೂಪಾಯಿ ಹೆಚ್ಚಳವಾಗಿದೆ.

ಈಗಾಗಲೇ ಗರಿಷ್ಠ ಮಟ್ಟದಲ್ಲಿರುವ ವಾಣಿಜ್ಯ ನಗರಿ ಮುಂಬೈ ಲೀಟರ್​ ಪೆಟ್ರೋಲ್​ ಬೆಲೆಯನ್ನು 103.36 ರೂಪಾಯಿ ಕಾಯ್ದಿರಿಸಿಕೊಂಡಿದೆ. ಅದೇ ರೀತಿ ಲೀಟರ್​ ಡೀಸೆಲ್ ಬೆಲೆ 95.44 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 98.40 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.58 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 100.47 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.89 ರೂಪಾಯಿ ಇದೆ.

ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 97.12 ರೂಪಅಯಿ ಹಾಗೂ ಲೀಟರ್​ ಡೀಸೆಲ್​ ದರ 90.82 ರೂಪಾಯಿ ಇದೆ. ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ಬೆಲೆ 100ರ ಗಡಿ ದಾಟಿ ಮುನ್ನುಗ್ಗಿದೆ.

ಭಾತರ ಮತ್ತು ಪಾಕಿಸ್ತಾನದ ಗಡಿಯಂಚಿನಲ್ಲಿರುವ ರಾಜಸ್ಥಾನದ ಶ್ರೀಗಂಗನಗರ್​ನಲ್ಲಿ ಲೀಟರ್​ ಪೆಟ್ರೋಲ್ ದರ 108.37 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 101.12 ರೂಪಾಯಿ ಇದೆ. ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಮುಂಬೈ, ಬೆಂಗಳೂರು ಸೇರಿದಂತೆ ಹೈದರಾಬಾದ್​ನಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ