Petrol Price Today: ಇಂದಿನ ಪೆಟ್ರೋಲ್, ಡೀಸೆಲ್​ ದರ ವಿವರ ಇಲ್ಲಿದೆ

Petrol Diesel Rate Today: ಮೇ ತಿಂಗಳ ಪ್ರಾರಂಭದಿಂದ ಇಲ್ಲಿಯವೆರೆಗೆ ಒಟ್ಟು 28 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 103.63 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರ95.72 ರೂಪಾಯಿ ಇದೆ.

Petrol Price Today: ಇಂದಿನ ಪೆಟ್ರೋಲ್, ಡೀಸೆಲ್​ ದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 23, 2021 | 8:57 AM

Petrol Diesel Price Today | ದೆಹಲಿ: ಇಂದು (ಬುಧವಾರ, ಜೂನ್ 23) ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿನ್ನೆ ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ(Petrol Rate) 25 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ(Diesel Rate) 28 ಪೈಸೆ ಹೆಚ್ಚಳ ಮಾಡಲಾಗಿತ್ತು. ಆ ಮೂಲಕ ಪೆಟ್ರೋಲ್​, ಡೀಸೆಲ್ ದರ ಗರಿಷ್ಟ ಮಟ್ಟದಲ್ಲಿತ್ತು. ಅದೇ ದರದನ್ನು ಇಂದು ಪ್ರಮುಖ ನಗರಗಳಲ್ಲಿ ಕಾಣಬಹುದು.

ರಾಜಸ್ಥಾನ, ಜಮ್ಮ ಮತ್ತು ಕಾಶ್ಮೀರ, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ರಾಜಸ್ಥಾನದ ಶ್ರೀಗಂಗನಗರ್​ನಲ್ಲಿ ಲೀಟರ್​ ಪೆಟ್ರೋಲ್ ದರ 108.37 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 101.12 ರೂಪಾಯಿ ಇದೆ.

ಮೇ ತಿಂಗಳ ಪ್ರಾರಂಭದಿಂದ ಇಲ್ಲಿಯವೆರೆಗೆ ಒಟ್ಟು 28 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 103.63 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರ95.72 ರೂಪಾಯಿ ಇದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 97.50 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 88.23 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 98.65 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.83 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 100.79 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.54 ರೂಪಾಯಿ ಇದೆ. ನಿನ್ನೆ ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರದಲ್ಲಿ 29 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28 ಪೈಸೆ ಹೆಚ್ಚಳ ಮಾಡಲಾಗಿತ್ತು. ಇಂದು ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಹಾಗಾಗಿ ಇದೇ ದರವನ್ನು ಕಾಯ್ದಿರಿಸಿಕೊಂಡಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:49 am, Wed, 23 June 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ