AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಬದಲಾವಣೆಗಳಿಲ್ಲ; ಪ್ರಮುಖ ನಗರಗಳಲ್ಲಿನ ಇಂಧನ ಬೆಲೆ ವಿವರ ಇಲ್ಲಿದೆ

Petrol Diesel Rate Today: ನಿನ್ನೆ ಇಂಧನ ದರ ಏರಿಕೆ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಲೀಟರ್​ ಪೆಟ್ರೋಲ್​ ದರ 97.76 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 88.30 ರೂಪಾಯಿ ಇದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್​ ದರದಲ್ಲಿ ಬದಲಾವಣೆಗಳಿಲ್ಲ; ಪ್ರಮುಖ ನಗರಗಳಲ್ಲಿನ ಇಂಧನ ಬೆಲೆ ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 25, 2021 | 8:50 AM

Share

Petrol Diesel Price Today | ದೆಹಲಿ: ಇಂದು (ಶುಕ್ರವಾರ, ಜೂನ್ 25) ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಜೂನ್​ ತಿಂಗಳ ಕೊನೆಯ ವಾರದಿಂದಲೂ ಒಂದು ದಿನ ಬಿಟ್ಟು ಮತ್ತೊಂದು ದಿನ ಇಂಧನ ದರ ಹೆಚ್ಚಳವಾಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂದು ಕೂಡಾ ತೈಲ ದರದಲ್ಲಿ ಬದಲಾವಣೆಗಳು ಕಂಡು ಬಂದಿಲ್ಲ. ಆದರೆ ನಿನ್ನೆ ಲೀಟರ್​ ಪೆಟ್ರೋಲ್​ ದರದಲ್ಲಿ 23-26 ಪೈಸೆ ಹಾಗೂ ಲೀಟರ್ ಡೀಸೆಲ್​ ದರದಲ್ಲಿ 6-7 ಪೈಸೆ ಏರಿಕೆ ಮಾಡಲಾಗಿತ್ತು.

ನಿನ್ನೆ ಇಂಧನ ದರ ಏರಿಕೆ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಲೀಟರ್​ ಪೆಟ್ರೋಲ್​ ದರ 97.76 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 88.30 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 98.88 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.89 ರೂಪಾಯಿ ಆಗಿದೆ.

ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 101.03 ರೂಪಾಯಿ ಇದೆ. ಅದೇ ರೀತಿ, ಲೀಟರ್​ ಡೀಸೆಲ್​ ದರ 93.61 ರೂಪಾಯಿಗೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 97.63 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 91.15 ರೂಪಾಯಿ ಇದೆ.

ಪ್ರಮುಖ ನಗರಗಳಲ್ಲಿ ಈಗಾಗಲೇ ಪೆಟ್ರೋಲ್​ ಮತ್ತು ಡೀಸೆಲ್​ ದರ ಗರಿಷ್ಟ ಮಟ್ಟದಲ್ಲಿದೆ. ಮೆಟ್ರೋ ನಗರಗಳಲ್ಲಿಯೇ ಅತಿ ಗರಿಷ್ಟ ಮಟ್ಟದ ಇಂಧನ ದರ ಹೊಂದಿರುವ ನಗರ ಮುಂಬೈ. ಲೀಟರ್​ ಪೆಟ್ರೋಲ್​ ದರ 103.89 ರೂಪಾಯಿಗೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:48 am, Fri, 25 June 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ