Petrol Price Today: ಜೂನ್​ ತಿಂಗಳಿನಲ್ಲಿ 15 ಬಾರಿ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ಬೆಲೆ!

Petrol Diesel Rate Today: ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 98.46 ರೂಪಾಯಿ ಇದೆ. ಅದೇ ರೀತಿ ಲೀಟರ್​ ಡೀಸೆಲ್​​ ದರ 88.90 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 104.56 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 96.42 ರೂಪಾಯಿ ನಿಗದಿಯಾಗಿದೆ.

Petrol Price Today: ಜೂನ್​ ತಿಂಗಳಿನಲ್ಲಿ 15 ಬಾರಿ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ಬೆಲೆ!
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Jun 28, 2021 | 9:08 AM

Petrol Diesel Price Today | ದೆಹಲಿ: ಇಂದು ( ಸೋಮವಾರ, ಜೂನ್​ 28) ಪೆಟ್ರೋಲ್​, ಡೀಸೆಲ್​ ದರದಲ್ಲಿ ಬದಲಾವಣೆಗಳಿಲ್ಲ. ಕಳೆದ ಎರಡು ದಿನಗಳಿಂದ ಸತತವಾಗಿ ಇಂಧನ ದರ ಏರಿಕೆ ಕಂಡಿತ್ತು. ಕಳೆದ ವಾರಗಳಿಂದ ಗಮನಿಸಿದರೆ ಒಂದು ದಿನದ ವಿರಾಮದ ಬಳಿಕ ಪೆಟ್ರೋಲ್​, ಡೀಸೆಲ್​ ದರ ಏರಿಕೆ ಕಾಣುತ್ತಿತ್ತು. ಆ ನಂತರ ಇಂದು ದರದಲ್ಲಿ ಏರಿಳಿತ ಕಂಡು ಬಂದಿಲ್ಲ.

ಕಳೆದ ಮೇ ತಿಂಗಳ 4 ನೇ ತಾರೀಕಿನಿಂದ ಪೆಟ್ರೋಲ್​ ಮತ್ತು ಡೀಸೆಲ್​ ಏರಿಕೆ ಕಾಣಲು ಪ್ರಾರಂಭಿಸಿದೆ. ಇಲ್ಲಿರವೆಗೂ ಸಹ ಏರುತ್ತಲೇ ಇದೆ. ಸಾಮಾನ್ಯ ಎಲ್ಲಾ ನಗರಗಳಲ್ಲಿಯೂ ಕೂಡಾ ಇಂಧನ ದರ ಗರಿಷ್ಠ ಮಟ್ಟ ತಲುಪಿದ್ದು ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ಪ್ರಮುಖ ಮೆಟ್ರೋ ನಗರಗಳಲ್ಲಿ ವಾಣಿಜ್ಯ ನಗರಿ ಮುಂಬೈ ಗರಿಷ್ಠ ಮಟ್ಟದ ಪೆಟ್ರೋಲ್​, ಡೀಸೆಲ್​ ದರವನ್ನು ಹೊಂದಿದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 98.46 ರೂಪಾಯಿ ಇದೆ. ಅದೇ ರೀತಿ ಲೀಟರ್​ ಡೀಸೆಲ್​​ ದರ 88.90 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 104.56 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 96.42 ರೂಪಾಯಿ ನಿಗದಿಯಾಗಿದೆ. ಮೇ ತಿಂಗಳಿನಿಂದ ಹೆಚ್ಚಳವಾಗಲು ಆರಂಭಿಸಿದ ಪೆಟ್ರೋಲ್​, ಡೀಸೆಲ್​ ದರ ಇಲ್ಲಿಯವರೆಗೆ ಒಟ್ಟು 31 ಬಾರಿ ಏರಿಕೆ ಕಂಡಿದೆ. ಜೂನ್​ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ 15 ಬಾರಿ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 101.75 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 94.25 ರೂಪಾಯಿ ಇದೆ. ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 98.30 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 91.75 ರೂಪಾಯಿ ಇದೆ. ಭೋಪಾಲ್​ನಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಲೀಟರ್​ ಪೆಟ್ರೋಲ್ ದರ 106.71 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 97.63 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್