AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್​, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಗಮನಿಸಿ

Petrol Diesel Rate Today: ದೆಹಲಿಯಲ್ಲಿ ಲೀಟರ್​​ ಪೆಟ್ರೋಲ್​ ದರ 98.81 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 89.18 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 104.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 96.72 ರೂಪಾಯಿ ಇದೆ.

Petrol Price Today: ಇಂದು ಪೆಟ್ರೋಲ್​, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 01, 2021 | 8:43 AM

Share

Petrol Diesel Price Today | ದೆಹಲಿ: ನಿನ್ನೆ ಪೆಟ್ರೋಲ್​, ಡೀಸೆಲ್​ ದರದಲ್ಲಿ ಏರಿಕೆ ಮಾಡಲಾಗಿತ್ತು. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಇಂದು (ಜೂನ್​ 30, ಬುಧವಾರ) ಪೆಟ್ರೋಲ್​, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಳೆದ ಮೇ ತಿಂಗಳಿನಿಂದ ತೈಲ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತ್ತು. ಇಲ್ಲಿಯವರೆಗೂ ಕೂಡಾ ಏರುತ್ತಲೇ ಇದೆ. ಒಟ್ಟು 32 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿದೆ.

ದೆಹಲಿಯಲ್ಲಿ ಲೀಟರ್​​ ಪೆಟ್ರೋಲ್​ ದರ 98.81 ರೂಪಾಯಿ ಇದೆ. ಲೀಟರ್​ ಡೀಸೆಲ್​ ದರ 89.18 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 104.90 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 96.72 ರೂಪಾಯಿ ಇದೆ. ಪ್ರಮುಖ ಮೆಟ್ರೋ ನಗರಗಳಲ್ಲಿಯೇ ಗರಿಷ್ಠ ಮಟ್ಟದ ಪೆಟ್ರೋಲ್​ ಮತ್ತು ಡೀಸೆಲ್​ ದರ ಹೊಂದಿರುವ ನಗರ ಮುಂಬೈ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 99.80 ರೂಪಾಯಿ ಇದೆ. ಲೀಟರ್ ಡೀಸೆಲ್​ ದರ 93.72 ರೂಪಾಯಿ ಆಗಿದೆ. ಇನ್ನು, ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 98.64 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 92.03 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 102.11 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.54 ರೂಪಾಯಿ ಇದೆ.

ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಒಡಿಶಾ, ಕರ್ನಾಟಕ, ಲಡಾಕ್​, ಪಾಟ್ನಾದಲ್ಲಿ ಈಗಾಗಲೇ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 100.81 ರೂಪಾಯಿ ಇದ್ದರೆ, ಲೀಟರ್ ಡೀಸೆಲ್​ ದರ 94.52 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 9:05 am, Wed, 30 June 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್