AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಏರುತ್ತಲೇ ಇದ್ದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಂದು ಹೆಚ್ಚಳವಿದೆಯೇ? ದರ ವಿವರ ಪರಿಶೀಲಿಸಿ

Petrol Diesel Rate Today: ಕಳೆದ ಮೇ 4ನೇ ತಾರಿಕಿನಂದು ಇಂಧನ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಆಗಿನಿಂದ ಇಲ್ಲಿಯವರೆಗೆ ಒಟ್ಟು 21 ಬಾರಿ ಪೆಟ್ರೋಲ್ ಮತ್ತು ಡೀಸೆಲ್​ ದರ ಏರಿಕೆ ಕಂಡು ಬಂದಿದೆ.

Petrol Price Today: ಏರುತ್ತಲೇ ಇದ್ದ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಇಂದು ಹೆಚ್ಚಳವಿದೆಯೇ? ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jun 08, 2021 | 9:13 AM

ದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆ ಕಂಡಿದ್ದರಿಂದ ಇಂದು(ಮಂಗಳವಾರ, ಜೂನ್​ 8) ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್​ ದರ 95.31 ರೂಪಾಯಿ ನಿಗದಿಯಾಗಿದೆ. ಮುಂಬೈನಗರದಲ್ಲಿ​ ಪೆಟ್ರೋಲ್​ ದರ ಗರಿಷ್ಠ ಮಟ್ಟದಲ್ಲಿದ್ದು ಲೀಟರ್ ಪೆಟ್ರೋಲ್​ ದರ 101.52 ರೂಪಾಯಿ ಆಗಿದೆ. ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಯ ಸಮಯದಲ್ಲಿ ಇಂಧನ ದವನ್ನು ಸತತ 18 ದಿನಗಳ ಕಾಲ ಸ್ಥಿರವಾಗಿ ಉಳಿಸಲಾಗಿತ್ತು. ಅದಾದ ಬಳಿಕ ಕಳೆದ ಮೇ 4ನೇ ತಾರಿಕಿನಂದು ಇಂಧನ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಆಗಿನಿಂದ ಇಲ್ಲಿಯವರೆಗೆ ಒಟ್ಟು 21 ಬಾರಿ ಪೆಟ್ರೋಲ್ ಮತ್ತು ಡೀಸೆಲ್​ ದರ ಏರಿಕೆ ಕಂಡು ಬಂದಿದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ದರ 95.31 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.22 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 101.52 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.58 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 96.71 ರೂಪಾಯಿ ಹಾಗೂ ಲೀಟರ್​ ಡೀಸೆಲ್​​ ದರ 90.92 ರೂಪಾಯಿ ಆಗಿದೆ. ಇನ್ನು, ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೊಲ್​ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್​ ದರ 89.07 ರೂಪಾಯಿ ಆಗಿದೆ.ಅದೇ ರೀತಿ ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್ ದರ 98.49 ರೂಪಾಯಿ ಇದೆ. ಹಾಗೂ ಲೀಟರ್​ ಡೀಸೆಲ್​ ದರ 93.99 ರೂಪಾಯಿ ಆಗಿದೆ.

ಮೌಲ್ಯವರ್ಧಿತ ತೆರಿಗೆ (ವ್ಯಾಟ್​) ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗಳನ್ನು ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕರ್ನಾಟಕ ರಾಜ್ಯದ ಉತ್ತರಕನ್ನಡ, ಚಿಕ್ಕಮಗಳೂರು ಹಾಗೂ ಬಳ್ಳಾರಿಯಲ್ಲಿ ಈಗಾಗಲೇ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ಶೇ. 0.6ರಷ್ಟು ಕುಸಿತ ಕಂಡ ಬಳಿಕ ಬ್ರೆಂಟ್​ ಕಚ್ಚಾ ಶೇ. 1.2ರಷ್ಟು ಇಳಿಕೆಯಾಗಿದೆ. ಇಳದು ಬೆಳಿಗ್ಗೆ ಬ್ಯಾರೆಲ್​ಗೆ 71.38 ಡಾಲರ್​ ತಲುಪಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ