ದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆ ಕಂಡಿದ್ದರಿಂದ ಇಂದು(ಮಂಗಳವಾರ, ಜೂನ್ 8) ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.31 ರೂಪಾಯಿ ನಿಗದಿಯಾಗಿದೆ. ಮುಂಬೈನಗರದಲ್ಲಿ ಪೆಟ್ರೋಲ್ ದರ ಗರಿಷ್ಠ ಮಟ್ಟದಲ್ಲಿದ್ದು ಲೀಟರ್ ಪೆಟ್ರೋಲ್ ದರ 101.52 ರೂಪಾಯಿ ಆಗಿದೆ. ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಯ ಸಮಯದಲ್ಲಿ ಇಂಧನ ದವನ್ನು ಸತತ 18 ದಿನಗಳ ಕಾಲ ಸ್ಥಿರವಾಗಿ ಉಳಿಸಲಾಗಿತ್ತು. ಅದಾದ ಬಳಿಕ ಕಳೆದ ಮೇ 4ನೇ ತಾರಿಕಿನಂದು ಇಂಧನ ದರ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಆಗಿನಿಂದ ಇಲ್ಲಿಯವರೆಗೆ ಒಟ್ಟು 21 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಂಡು ಬಂದಿದೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.31 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.22 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 101.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.58 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 96.71 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.92 ರೂಪಾಯಿ ಆಗಿದೆ. ಇನ್ನು, ಕೊಲ್ಕತ್ತಾದಲ್ಲಿ ಲೀಟರ್ ಪೆಟ್ರೊಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.07 ರೂಪಾಯಿ ಆಗಿದೆ.ಅದೇ ರೀತಿ ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ದರ 98.49 ರೂಪಾಯಿ ಇದೆ. ಹಾಗೂ ಲೀಟರ್ ಡೀಸೆಲ್ ದರ 93.99 ರೂಪಾಯಿ ಆಗಿದೆ.
ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗಳನ್ನು ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕರ್ನಾಟಕ ರಾಜ್ಯದ ಉತ್ತರಕನ್ನಡ, ಚಿಕ್ಕಮಗಳೂರು ಹಾಗೂ ಬಳ್ಳಾರಿಯಲ್ಲಿ ಈಗಾಗಲೇ ಪೆಟ್ರೋಲ್ ದರ ಶತಕ ಬಾರಿಸಿ ಮುನ್ನುಗ್ಗಿದೆ. ಶೇ. 0.6ರಷ್ಟು ಕುಸಿತ ಕಂಡ ಬಳಿಕ ಬ್ರೆಂಟ್ ಕಚ್ಚಾ ಶೇ. 1.2ರಷ್ಟು ಇಳಿಕೆಯಾಗಿದೆ. ಇಳದು ಬೆಳಿಗ್ಗೆ ಬ್ಯಾರೆಲ್ಗೆ 71.38 ಡಾಲರ್ ತಲುಪಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಇದನ್ನೂ ಓದಿ:
ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html
ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html