PFI Ban: ಇದು ಪ್ರಜಾಪ್ರಭುತ್ವ ವಿರೋಧಿ; ಸುಪ್ರೀಂಕೋರ್ಟ್​ನಲ್ಲಿ ನಿಷೇಧ ಪ್ರಶ್ನಿಸಲು ಪಿಎಫ್​ಐ ನಾಯಕರ ನಿರ್ಧಾರ

ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತದಲ್ಲಿ ತಕ್ಷಣದಿಂದ ಸಂಘಟನೆಯ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಸಿಎಫ್​ಐ ಹೇಳಿದೆ.

PFI Ban: ಇದು ಪ್ರಜಾಪ್ರಭುತ್ವ ವಿರೋಧಿ; ಸುಪ್ರೀಂಕೋರ್ಟ್​ನಲ್ಲಿ ನಿಷೇಧ ಪ್ರಶ್ನಿಸಲು ಪಿಎಫ್​ಐ ನಾಯಕರ ನಿರ್ಧಾರ
ಪಿಎಫ್ಐ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 29, 2022 | 11:59 AM

ದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Popular Front of India – PFI) ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸುತ್ತೇವೆ ಎಂದು ಪಿಎಫ್​ಐನ ಅಂಗಸಂಸ್ಥೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (Campus Front of India – CFI) ಘೋಷಿಸಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಭಾರತದಲ್ಲಿ ತಕ್ಷಣದಿಂದ ಸಂಘಟನೆಯ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸುತ್ತೇವೆ ಎಂದು ಸಿಎಫ್​ಐ ಹೇಳಿದೆ.

ಹತ್ತಾರು ವರ್ಷಗಳಿಂದ ನಾವು ವಿದ್ಯಾರ್ಥಿಗಳ ಜೊತೆಗೆ ಕೆಲಸ ಮಾಡುತ್ತಿದ್ದೆವು. ಪ್ರಜಾಸತ್ತಾತ್ಮಕ ಆಶಯ ಎತ್ತಿಹಿಡಿಯುವ, ಸಾಮಾಜಿಕ ಬದ್ಧತೆ, ಕಾಳಜಿ ಇರುವ ಯುವಜನರನ್ನು ರೂಪಿಸಲು ಯತ್ನಿಸುತ್ತಿದ್ದೆವು. ಪಿಎಫ್​ಐ ಮತ್ತು ಸಿಎಫ್​ಐ ವಿರುದ್ಧ ಕೇಂದ್ರ ಸರ್ಕಾರವು ಮಾಡಿರುವ ಎಲ್ಲ ಆರೋಪಗಳನ್ನು ನಿರಾಕರಿಸುತ್ತೇವೆ. ನೆಲದ ಕಾನೂನಿನ ವಿರುದ್ಧ ಯಾವುದೇ ಕೆಲಸ ನಾವು ಮಾಡಿಲ್ಲ ಎಂದು ಸಿಎಫ್​ಐ ತಿಳಿಸಿದೆ. ಸಂಘಟನೆಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಬೇಡಿ. ಅಕಸ್ಮಾತ್ ಬೇರೆ ಯಾರಾದರೂ ಸಂಘಟನೆಯ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದರೆ ಅಂಥವರಿಂದ ನೀವು ದೂರ ಇರಿ ಎಂದು ಸಿಎಫ್​ಐ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದೆ.

ಈ ನಡುವೆ ಕೇರಳದ ಪಿಎಫ್​ಐ ಘಟಕವನ್ನು ವಿಸರ್ಸಿಸಲಾಗಿದೆ. ಪಿಎಫ್​ಐ ಹೆಸರಿನಲ್ಲಿ ನಡೆಯುತ್ತಿದ್ದ ಎಲ್ಲ ರಾಜಕೀಯ ಮತ್ತು ಸಂಘಟನಾತ್ಮಕ ಚಟುವಟಿಕೆ ನಿಲ್ಲಿಸುವಂತೆ ಪಿಎಫ್​ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎ.ಅಬ್ದುಲ್ ಸತ್ತಾರ್ ಕರೆ ನೀಡಿದ್ದಾರೆ ಎನ್ನುವ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆದರೆ ಪಿಎಫ್​ಐನ ಯಾವುದೇ ಪದಾಧಿಕಾರಿ ಈ ಪತ್ರವನ್ನು ನಿರಾಕರಿಸಿಲ್ಲ. ಪಿಎಫ್​ಐ ವಿಸರ್ಜನೆಯಾಗಿದೆ ಎಂದು ಪ್ರಶ್ನಾರ್ಥಕ ಚಿಹ್ನೆಯ ಶೀರ್ಷಿಕೆಯೊಂದಿಗೆ ‘ದಿ ಹಿಂದೂ’ ಜಾಲತಾಣವು ವರದಿ ಮಾಡಿದೆ.

ಪಿಎಫ್​ಐ ನಿಷೇಧ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಪ್ರಸ್ತಾಪವಾಗಿದೆ. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿದೆ.

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು