AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಪಿಎಫ್​ಐ ಜೊತೆ ಆರ್​ಎಸ್​ಎಸ್​ ಕೂಡ ಬ್ಯಾನ್ ಮಾಡಿ; ಕೇರಳ ಕಾಂಗ್ರೆಸ್ ಸಂಸದ ಆಗ್ರಹ

ಪಿಎಫ್‌ಐ ನಿಷೇಧವೊಂದೇ ಎಲ್ಲದಕ್ಕೂ ಪರಿಹಾರವಲ್ಲ. ಆರ್‌ಎಸ್‌ಎಸ್ ಕೂಡ ದೇಶದಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆದ್ದರಿಂದ ಸರ್ಕಾರ ಎರಡನ್ನೂ ನಿಷೇಧಿಸಬೇಕು ಎಂದು ಕೇರಳದ ಸಂಸದ ಕೋಡಿಕುನ್ನಿಲ್ ಸುರೇಶ್ ಒತ್ತಾಯಿಸಿದ್ದಾರೆ.

PFI Ban: ಪಿಎಫ್​ಐ ಜೊತೆ ಆರ್​ಎಸ್​ಎಸ್​ ಕೂಡ ಬ್ಯಾನ್ ಮಾಡಿ; ಕೇರಳ ಕಾಂಗ್ರೆಸ್ ಸಂಸದ ಆಗ್ರಹ
ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 28, 2022 | 11:59 AM

ತಿರುವನಂತಪುರಂ: ಪಿಎಫ್​ಐ ಸಂಘಟನೆ (PFI)ಯನ್ನು ಬ್ಯಾನ್ ಮಾಡುವುದು ಒಂದೇ ಪರಿಹಾರವಲ್ಲ. ಆರ್​ಎಸ್​ಎಸ್​ (RSS) ಸಹ ಬ್ಯಾನ್​ ಆಗಬೇಕು ಎಂದು ಕೇರಳದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಆಗ್ರಹಿಸಿದ್ದಾರೆ. RSS ಕೂಡ ಭಾರತದಲ್ಲಿ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಹೀಗಾಗಿ, ಸರ್ಕಾರ RSS, PFI ಎರಡನ್ನೂ ಸಮಾನವಾಗಿ ನಿಷೇಧಿಸಬೇಕು. ಅದು ಬಿಟ್ಟು ಪಿಎಫ್​ಐಗೆ ಮಾತ್ರ ನಿಷೇಧ ಯಾಕೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಪಿಎಫ್‌ಐ ನಿಷೇಧವೊಂದೇ ಎಲ್ಲದಕ್ಕೂ ಪರಿಹಾರವಲ್ಲ. ಆರ್‌ಎಸ್‌ಎಸ್ ಕೂಡ ದೇಶದಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್ ಮತ್ತು ಪಿಎಫ್‌ಐ ಎರಡೂ ಸಮಾನವಾಗಿವೆ. ಆದ್ದರಿಂದ ಸರ್ಕಾರ ಎರಡನ್ನೂ ನಿಷೇಧಿಸಬೇಕು ಎಂದು ಕೇರಳದ ಸಂಸದ ಕೋಡಿಕುನ್ನಿಲ್ ಸುರೇಶ್ ಒತ್ತಾಯಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಅದರ ಭಯೋತ್ಪಾದಕ ಚಟುವಟಿಕೆಗಳಿಗಾಗಿ ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಕ್ರಮವು ಎಲ್ಲಾ ದೇಶವಿರೋಧಿ ಗುಂಪುಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ. ದೀರ್ಘಕಾಲದಿಂದ ಇದು ಈ ದೇಶದ ಜನರ ಬೇಡಿಕೆಯಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Operation Octopus: ಪಿಎಫ್​ಐ ವಿರುದ್ಧ ಎನ್​ಐಎ 2ನೇ ಹಂತದ ದಾಳಿ, 8 ರಾಜ್ಯಗಳಲ್ಲಿ 170ಕ್ಕೂ ಹೆಚ್ಚು ಮಂದಿಯ ಬಂಧನ

ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಿಕೆ ಕಾಯಿದೆಯಡಿಯಲ್ಲಿ ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ರಿಹಬ್ ಇಂಡಿಯಾ ಫೌಂಡೇಶನ್ (RIF) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಕೆಲವು ಸಂಘಟನೆಗಳನ್ನು 5 ವರ್ಷಗಳ ಕಾಲ ನಿಷೇಧಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ಧಾರಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಧನ್ಯವಾದ ಅರ್ಪಿಸಿದ್ದಾರೆ. ಪಿಎಫ್‌ಐ ಮಹಾರಾಷ್ಟ್ರದಲ್ಲೂ ಅಶಾಂತಿಯನ್ನು ಸೃಷ್ಟಿಸಿದೆ ಮತ್ತು ಕೋಮು ವಿಭಜನೆಯನ್ನು ಸೃಷ್ಟಿಸಲು ಯೋಜಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PFI Banned: ಪಿಎಫ್​ಐ ಹಾಗೂ ಅದರ ಅಂಗ ಸಂಸ್ಥೆಗಳ ನಿಷೇಧಕ್ಕೆ 15 ಕಾರಣಗಳು

ಮಂಗಳವಾರ, NIA ಭಾರತದ 15 ರಾಜ್ಯಗಳ 93 ಸ್ಥಳಗಳಲ್ಲಿ ಶೋಧ ನಡೆಸಿತ್ತು. ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಕೇರಳ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಹೈದರಾಬಾದ್, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಣಿಪುರದಲ್ಲಿ 100 ಕ್ಕೂ ಹೆಚ್ಚು ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಎನ್‌ಐಎ ಪಿಎಫ್‌ಐ ಜೊತೆ ನಂಟು ಹೊಂದಿರುವ 106 ಜನರನ್ನು ಬಂಧಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ