NIA Raid: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ

ದೇಶದಲ್ಲಿ ಪಿಎಫ್ ಐ ,ಸಂಘಟನೆಗಳು ಉಗ್ರಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆ ಹಿನ್ನಲೆ ಎನ್​ಐಎ ಐದು ರಾಜ್ಯಗಳಲ್ಲಿ ದಾಳಿ ಮಾಡಿದೆ. ಐದು ರಾಜ್ಯದ ಹದಿನಾಲ್ಕು ಕಡೆ ಏಕ‌ಕಾಲಕ್ಕೆ ದಾಳಿ ಮಾಡಿದೆ. ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯೂ ಸಹ ಎನ್​ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

NIA Raid: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ
ಎನ್​ಐಎ (ಸಂಗ್ರಹ ಚಿತ್ರ)
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on:Aug 13, 2023 | 6:16 PM

ಬೆಂಗಳೂರು, (ಆಗಸ್ಟ್ 13): ಕರ್ನಾಟಕ (Karnataka) ಸೇರಿದಂತೆ ಇತರೆ 5 ರಾಜ್ಯಗಳ 14 ಸ್ಥಳಗಳಲ್ಲಿ ಏಕಕಾಲಕ್ಕೆ ಎನ್​ಐಎ(NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಫ್ ಐ(PFI)  ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆಯಲ್ಲಿ ಎನ್​ಐಎ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ 2047ರೊಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿರುವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ , ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಎನ್​ಐಎ ಏಕಕಾಲದಲ್ಲಿ ದಾಳಿ ಮಾಡಿದೆ.

ಶಸ್ತ್ರಾಸ್ತ್ರ ತರಬೇತಿ‌, ಐರನ್ ರಾಡ್ಸ್ , ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನಲೆ ಕೆಲ ಪಿಎಫ್​ಐ ಏಜೆಂಟ್​ಗಳನ್ನ ಎನ್​ಐಎ ಬಂಧಿಸಿತ್ತು. ಅಲ್ಲದೇ ಈ ಹಿಂದೆ ಪಿಎಫ್ಐನ 19 ಜನರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆ ಮಾಡಿತ್ತು ಇವರ ತನಿಖೆ ವೇಳೆ ಯುವಕರಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡಿ‌ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದೆ.

ಇದನ್ನೂ ಓದಿ: NIA Raids In Karnataka: ಶಿರಸಿಯಲ್ಲೂ ಎನ್​ಐಎ ದಾಳಿ: 4 ನಗರಗಳ 12 ಸ್ಥಳಗಳಲ್ಲಿ ತಪಾಸಣೆ, ಇಬ್ಬರ ಬಂಧನ

ಕರ್ನಾಟಕದ ದಕ್ಷಿಣ ಕನ್ನಡ, ಕೇರಳದ ಕಣ್ಣೂರು ಮತ್ತು ಮಲಪ್ಪುರಂ ಜಿಲ್ಲೆ, ಮಹಾರಾಷ್ಟ್ರದ ನಾಸಿಕ್ ಮತ್ತು ಕೊಲ್ಹಾಪುರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಬಿಹಾರದ ಕತಿಹಾರ್‌ನಲ್ಲಿ ದಾಳಿ ನಡೆದಿದ್ದು, ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:01 pm, Sun, 13 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್