ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐಗೆ ವರ್ಗಾಯಿಸಿದ ಸರ್ಕಾರ, ಫಡ್ನವೀಸ್ ಹೇಳಿಕೆ ಪಡೆದ ಸಿಬಿಐ

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 23, 2022 | 4:11 PM

ದೇವೇಂದ್ರ ಫಡ್ನವೀಸ್ ಅವರ ಹೇಳಿಕೆಯನ್ನು ಈ ಹಿಂದೆ ದಾಖಲಿಸಿಕೊಂಡಿದ್ದ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣ ಸೇರಿದಂತೆ ಎರಡು ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರವು ರಾಜ್ಯ ಪೊಲೀಸರಿಗೆ ಸೂಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐಗೆ ವರ್ಗಾಯಿಸಿದ ಸರ್ಕಾರ, ಫಡ್ನವೀಸ್ ಹೇಳಿಕೆ ಪಡೆದ ಸಿಬಿಐ
Fadnavis
Follow us on

ಮುಂಬೈ: ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೇಳಿಕೆಯನ್ನು ಈ ಹಿಂದೆ ದಾಖಲಿಸಿಕೊಂಡಿದ್ದ ಆಪಾದಿತ ಫೋನ್ ಕದ್ದಾಲಿಕೆ ಪ್ರಕರಣ ಸೇರಿದಂತೆ ಎರಡು ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರವು ರಾಜ್ಯ ಪೊಲೀಸರಿಗೆ ಸೂಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡನೇ ಪ್ರಕರಣದಲ್ಲಿ  ಮಾಜಿ ರಾಜ್ಯ ಸಚಿವ ಗಿರೀಶ್ ಮಹಾಜನ್ ಅವರು ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.  ಈ ಎರಡು ಪ್ರಕರಣಗಳ ತನಿಖೆಯನ್ನು ವರ್ಗಾಯಿಸಲು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ, ಆದರೆ ಮುಂಬೈ ಪೊಲೀಸರು ಈ ಬಗ್ಗೆ ಯಾವುದೇ ಈವರೆಗೂ ಪಡೆದಿಲ್ಲ.

ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರು 2019 ರಲ್ಲಿ ರಾಜ್ಯ ಗುಪ್ತಚರ ಇಲಾಖೆ (ಎಸ್‌ಐಡಿ) ಮುಖ್ಯಸ್ಥರಾಗಿದ್ದಾಗ ರಾಜಕೀಯ ಮುಖಂಡರು ಮತ್ತು ಹಿರಿಯ ಅಧಿಕಾರಿಗಳ ಫೋನ್‌ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜಕೀಯ ನಾಯಕರು ಮತ್ತು ಹಿರಿಯ ಅಧಿಕಾರಿಗಳ ಫೋನ್ ಟ್ಯಾಪಿಂಗ್ ಮತ್ತು ಗೌಪ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಬಿಕೆಸಿ ಸೈಬರ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಮುಂಬೈ ಪೊಲೀಸರು 2021 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಿದ್ದರು. ಈ ಬಗ್ಗೆ ಎಸ್‌ಐಡಿ ದೂರು ದಾಖಲಿಸಿದೆ.

ಇದನ್ನೂ ಓದಿ
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

2014 ಮತ್ತು 2019 ರ ನಡುವೆ ಮುಖ್ಯಮಂತ್ರಿಯಾಗಿದ್ದ ಫಡ್ನವೀಸ್ ಅವರು, ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಆಗಿನ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಿಗೆ Ms ಶುಕ್ಲಾ ಅವರು ಬರೆದಿರುವ ಪತ್ರವನ್ನು ಉಲ್ಲೇಖಿಸಿದ್ದಾರೆ.  ಇದು ಶಿವಸೇನೆ ನೇತೃತ್ವದ ಆಡಳಿತಾರೂಢ ಒಕ್ಕೂಟದ ನಾಯಕರೊಂದಿಗೆ ಕೋಲಾಹಲಕ್ಕೆ ಕಾರಣವಾಯಿತು.

ಅದಕ್ಕೂ ಮೊದಲು, ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರು ತಮ್ಮ ತನಿಖಾ ವರದಿಯಲ್ಲಿ ಎಂಎಸ್ ಶುಕ್ಲಾ ಗೌಪ್ಯ ವರದಿಯನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಕರಣದಲ್ಲಿ ಸೈಬರ್ ಪೊಲೀಸ್ ತಂಡವು ಶುಕ್ಲಾ ಅವರ ಹೇಳಿಕೆಯನ್ನು ದಾಖಲಿಸಿದೆ ಎಂದು  ಹೇಳಿದರು,  ಫಡ್ನವಿಸ್ ಅವರ ಹೇಳಿಕೆಯನ್ನು ಈ ವರ್ಷದ ಮಾರ್ಚ್‌ನಲ್ಲಿಯೂ ದಾಖಲಿಸಲಾಗಿದೆ.

ಆಗಿನ ಮುಂಬೈ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ಅವರ ಆದೇಶದ ಮೇರೆಗೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಇತ್ತೀಚೆಗೆ ದಕ್ಷಿಣ ಮುಂಬೈನ ಕೊಲಾಬಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ಇದೀಗ ಕಳೆದ ತಿಂಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಹೊಸ ಸರ್ಕಾರ ರಚನೆಯಾದ ನಂತರ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಆದೇಶ ಹೊರಡಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಗಿರೀಶ್ ಮಹಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಮಹಾಜನ್ ಜೊತೆಗೆ ಇತರ 28 ಮಂದಿಯನ್ನು ಹೆಸರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Published On - 4:11 pm, Sat, 23 July 22