AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poster War In MP: ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​

ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ.

Poster War In MP: ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿ ಪೇಸಿಎಂ ಮಾದರಿಯ ತಂತ್ರ ಪ್ರಯೋಗಿಸಲು ಹೋಗಿ ಪೇಚಿಗೆ ಸಿಲುಕಿದ ಕಾಂಗ್ರೆಸ್​
ಪೋಸ್ಟರ್​Image Credit source: Free Press Journal
ನಯನಾ ರಾಜೀವ್
|

Updated on:Jun 29, 2023 | 10:51 AM

Share

ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, ಮಧ್ಯಪ್ರದೇಶದಲ್ಲೂ ಸಿಎಂ ಶಿವರಾಜ್ ಸಿಂಗ್ ಅವರ ಪೋಸ್ಟರ್​ಗೆ ಫೋನ್ ಪೇ ಲೋಗೋ ಬಳಕೆ ಮಾಡಿ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲಿ ಫೋನ್​ ಪೇ ಮಾದರಿಯನ್ನು ಬಳಕೆ ಮಾಡಿರುವ ಕಾರಣ ಫೋನ್​ ಪೇ ಸಂಸ್ಥೆಯು ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದೆ.

ತಮ್ಮ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸಮರದ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಿದ್ದಾಜಿದ್ದಿಯೂ ಜೋರಾಗಿದೆ. ಪೋಸ್ಟರ್ ವಾರ್, ಟ್ವಿಟ್ಟರ್ ವಾರ್, ಮಾತಿನ ಸಮರ ಎಲ್ಲವೂ ನಡೆಯುತ್ತಿದ್ದು ಸಧ್ಯಕ್ಕೆ ಪೋಸ್ಟರ್ ವಾರ್ ಚಾಲ್ತಿಯಲ್ಲಿದೆ.

ಮತ್ತಷ್ಟು ಓದಿ: ಪೇಸಿಎಂ ಪೋಸ್ಟರ್​ ಅಭಿಯಾನಕ್ಕೆ ಫೀಲ್ಡ್​​ಗೆ ಇಳಿದ ಕಾಂಗ್ರೆಸ್​ ನಾಯಕರು: ಸಿಎಂ ಬೊಮ್ಮಾಯಿ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್​

ವರದಿ ಪ್ರಕಾರ, PhonePe ಕಂಪನಿಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನೊಂದಿಗೆ ಕಾಂಗ್ರೆಸ್​ MPಯನ್ನು ಟ್ಯಾಗ್ ಮಾಡುವ ಮೂಲಕ ಎಚ್ಚರಿಕೆ ನೀಡಿದೆ. ಅವರು ಟ್ವೀಟ್ ಮಾಡಿ PhonePe ಲೋಗೋ ನಮ್ಮ ಕಂಪನಿಯ ನೋಂದಾಯಿತ ಟ್ರೇಡ್‌ಮಾರ್ಕ್ ಆಗಿದೆ. ಅದನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ.

ಪೋಸ್ಟರ್‌ನಿಂದ ನಮ್ಮ ಲೋಗೋ ಮತ್ತು ಬ್ರ್ಯಾಂಡ್ ಬಣ್ಣವನ್ನು ತೆಗೆದುಹಾಕಲು ನಾವು ವಿನಮ್ರವಾಗಿ ವಿನಂತಿಸುತ್ತೇವೆ. PhonePe ತನ್ನ ಬ್ರ್ಯಾಂಡ್ ಲೋಗೋವನ್ನು ರಾಜಕೀಯ ಅಥವಾ ರಾಜಕೀಯೇತರ ಯಾವುದೇ ಮೂರನೇ ವ್ಯಕ್ತಿಯಿಂದ ಬಳಸುವುದನ್ನು ನಾವು ವಿರೋಧಿಸುತ್ತೇವೆ, ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಬರೆದಿದೆ.

ಬಿಜೆಪಿಯೇ ಒಂದು ವಾರ ಮೊದಲು ಕಮಲ್​ ನಾಥ್ ವಿರುದ್ಧ ಪೋಸ್ಟರ್​ ಹಾಕಿತ್ತು, ಅವರೇ ಮೊದಲು ಈ ಪೋಸ್ಟರ್​ ವಾರ್ ಆರಂಭಿಸಿದವರು ಎಂದು ಕಾಂಗ್ರೆಸ್ ದೂರಿದೆ. ಆದರೆ ಆ ಪೋಸ್ಟರ್ ನಾವು ಹಾಕಿದ್ದಲ್ಲ ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Thu, 29 June 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ