ಆಸ್ಪತ್ರೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ

ಅರೆಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ
ಸಾಮದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 20, 2023 | 5:00 PM

ಕೋಝಿಕ್ಕೋಡ್‌: ಶಸ್ತ್ರಚಿಕಿತ್ಸೆಗೆ ಒಳಗಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳದ (Kerala) ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಉದ್ಯೋಗಿಯನ್ನು ಕೇರಳ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಹಿಳಾ ಶಸ್ತ್ರಚಿಕಿತ್ಸಾ ಐಸಿಯುನಲ್ಲಿ ಸಂಪೂರ್ಣವಾಗಿ ಪ್ರಜ್ಞೆ ಬಂದ ನಂತರ ಮಹಿಳೆಯು ನರ್ಸ್ ಮತ್ತು ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸೇವೆಯಿಂದ ಅಮಾನತುಗೊಂಡ ಆರೋಪಿ ಸಿ ಶಸೀಂದ್ರನ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ನಂತರ ಪರಾರಿಯಾಗಿದ್ದ. ಈ ಹಿಂದೆಯೂ ಇಂತಹ ಘಟನೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರು ತಮ್ಮ ತನಿಖೆಯಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದಾರೆ ಮತ್ತು ಮಹಿಳೆಯನ್ನು ಆಪರೇಷನ್ ಥಿಯೇಟರ್‌ನಿಂದ ಐಸಿಯುಗೆ ವರ್ಗಾಯಿಸಿದಾಗ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದರು. ಆಕೆಯನ್ನು ಐಸಿಯುಗೆ ವರ್ಗಾಯಿಸುವಾಗ ಮಹಿಳಾ ಉದ್ಯೋಗಿಗಳ ಲಭ್ಯತೆಯಿಲ್ಲದ ಕಾರಣ ಶಸೀಂದ್ರನ್​​ನ್ನು ತನ್ನೊಂದಿಗೆ ಬರುವಂತೆ ಕೇಳಲಾಯಿತು.

ಇದನ್ನೂ ಓದಿ:ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ಅರೆಸ್ಟ್​​

ಪ್ರಕರಣದ ತನಿಖೆಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಇಂತಹ ಘಟನೆಗಳನ್ನು ತಡೆಯುವುದು ಹೇಗೆ ಎಂಬ ಬಗ್ಗೆ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿದ್ದಾರೆ. ಸಹಾಯಕ ಆಯುಕ್ತ ಕೆ ಸುದರ್ಶನ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Mon, 20 March 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ