ಕೋಝಿಕ್ಕೋಡ್: ಶಸ್ತ್ರಚಿಕಿತ್ಸೆಗೆ ಒಳಗಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳದ (Kerala) ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಉದ್ಯೋಗಿಯನ್ನು ಕೇರಳ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಹಿಳಾ ಶಸ್ತ್ರಚಿಕಿತ್ಸಾ ಐಸಿಯುನಲ್ಲಿ ಸಂಪೂರ್ಣವಾಗಿ ಪ್ರಜ್ಞೆ ಬಂದ ನಂತರ ಮಹಿಳೆಯು ನರ್ಸ್ ಮತ್ತು ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸೇವೆಯಿಂದ ಅಮಾನತುಗೊಂಡ ಆರೋಪಿ ಸಿ ಶಸೀಂದ್ರನ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ನಂತರ ಪರಾರಿಯಾಗಿದ್ದ. ಈ ಹಿಂದೆಯೂ ಇಂತಹ ಘಟನೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರು ತಮ್ಮ ತನಿಖೆಯಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದಾರೆ ಮತ್ತು ಮಹಿಳೆಯನ್ನು ಆಪರೇಷನ್ ಥಿಯೇಟರ್‌ನಿಂದ ಐಸಿಯುಗೆ ವರ್ಗಾಯಿಸಿದಾಗ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದರು. ಆಕೆಯನ್ನು ಐಸಿಯುಗೆ ವರ್ಗಾಯಿಸುವಾಗ ಮಹಿಳಾ ಉದ್ಯೋಗಿಗಳ ಲಭ್ಯತೆಯಿಲ್ಲದ ಕಾರಣ ಶಸೀಂದ್ರನ್ನ್ನು ತನ್ನೊಂದಿಗೆ ಬರುವಂತೆ ಕೇಳಲಾಯಿತು.
ಇದನ್ನೂ ಓದಿ:ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ಅರೆಸ್ಟ್
ಪ್ರಕರಣದ ತನಿಖೆಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಇಂತಹ ಘಟನೆಗಳನ್ನು ತಡೆಯುವುದು ಹೇಗೆ ಎಂಬ ಬಗ್ಗೆ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿದ್ದಾರೆ. ಸಹಾಯಕ ಆಯುಕ್ತ ಕೆ ಸುದರ್ಶನ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:59 pm, Mon, 20 March 23