AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಪಿಕಪ್ ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರು ಸಾವು, 13 ಜನರಿಗೆ ಗಾಯ

ಪಿಕಪ್ ಟ್ರಕ್ ಪಲ್ಟಿಯಾಗಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ, ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವು 12 ಜನರ ಬದುಕನ್ನು ಕಸಿದುಕೊಂಡಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಮಧ್ಯಪ್ರದೇಶ: ಪಿಕಪ್ ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರು ಸಾವು, 13 ಜನರಿಗೆ ಗಾಯ
ಅಪಘಾತ Image Credit source: India Today
ನಯನಾ ರಾಜೀವ್
|

Updated on: Apr 30, 2026 | 9:28 AM

Share

ಧಾರ್, ಏಪ್ರಿಲ್ 30: ಪಿಕಪ್ ಟ್ರಕ್ ಪಲ್ಟಿಯಾಗಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ, ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ(Accident)ವು 12 ಜನರ ಬದುಕನ್ನು ಕಸಿದುಕೊಂಡಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ರಾತ್ರಿ 8:30ರ ಸುಮಾರಿಗೆ ಹೆದ್ದಾರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ನಡೆದಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಸಿಕೊಂಡಿದ್ದ ಪಿಕಪ್ ಟ್ರಕ್, ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಹಲವು ಬಾರಿ ಪಲ್ಟಿಯಾಗಿದೆ. ಈ ಭೀಕರ ದೃಶ್ಯ ಕಂಡ ಪ್ರತ್ಯಕ್ಷದರ್ಶಿಗಳು ಬೆಚ್ಚಿಬಿದ್ದಿದ್ದಾರೆ. ಮೃತರಲ್ಲಿ ಹಲವಾರು ಅಮಾಯಕ ಮಕ್ಕಳೂ ಸೇರಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯರ ಪ್ರಕಾರ, ಸದ್ಯ 13 ಜನರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮತ್ತಷ್ಟು ಓದಿ: ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು

ಈ ಘಟನೆಯ ಕುರಿತು ತೀವ್ರ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಈ ಸಂದರ್ಭದಲ್ಲಿ ಪ್ರಾರ್ಥಿಸಿದ್ದಾರೆ.

ಅತಿಯಾದ ವೇಗ ಮತ್ತು ಮಿತಿಮೀರಿದ ಭಾರ ಹೊರುವುದು ಅಮಾಯಕರ ಪ್ರಾಣಕ್ಕೆ ಹೇಗೆ ಸಂಚಕಾರ ತರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ