Maratha Reservation: ಮರಾಠ ಮೀಸಲಾತಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಮರಾಠ ಮೀಸಲಾತಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕುತೂಹಲಕಾರಿಯಾಗಿ, ರಾಜ್ಯ ಸರ್ಕಾರವು ಇತ್ತೀಚೆಗೆ ಒಂದು ದಿನದ ವಿಶೇಷ ಅಧಿವೇಶನವನ್ನು ನಡೆಸಿತು ಮತ್ತು ವಿಧಾನಮಂಡಲದ ಉಭಯ ಸದನಗಳಲ್ಲಿ ಮರಾಠ ಮೀಸಲಾತಿಯನ್ನು ಅಂಗೀಕರಿಸಿತು. ಆ ಬಳಿಕ ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿಗೆ ಅನುಮೋದನೆ ನೀಡಲಾಗಿದೆ. ಆದರೆ ಈಗ ಈ ಮೀಸಲಾತಿಯ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಿಗರಿಗೆ ಶೇ 10ರಷ್ಟು ಮೀಸಲಾತಿ(Reservation) ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಆದರೆ, ಮರಾಠ ಮೀಸಲಾತಿ(Maratha Reservation) ಕಾನೂನು ಸಂಪೂರ್ಣ ನಿರಂಕುಶವಾಗಿದ್ದು, ಲೋಕಸಭೆ ಚುನಾವಣೆಯನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಸರಕಾರ ತರಾತುರಿಯಲ್ಲಿ ಮೀಸಲಾತಿ ಕಾನೂನನ್ನು ಜಾರಿಗೊಳಿಸಿದೆ. ಆದ್ದರಿಂದ, ಈ ಕಾಯಿದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಮೀಸಲಾತಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.
ಮನೋಜ್ ಜಾರಂಗೆ-ಪಾಟೀಲ್ ಅವರ ಆಂದೋಲನದ ನಂತರ, ಸರ್ಕಾರವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಂದ (SEBC) ಮರಾಠ ಸಮುದಾಯಕ್ಕೆ 10 ಪ್ರತಿಶತ ಮೀಸಲಾತಿ ನೀಡುವ ಕಾನೂನನ್ನು ತರಾತುರಿಯಲ್ಲಿ ಜಾರಿಗೊಳಿಸಿತು.
ಈ ಕಾಯಿದೆಯು ಸಂವಿಧಾನದ 14, 15, 16 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಇಂದ್ರ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೀಸಲಾತಿಗೆ ಶೇಕಡಾ 50 ಮಿತಿಯನ್ನು ನಿಗದಿಪಡಿಸಿತ್ತು. ಈ ಮಿತಿಯನ್ನು ಮೀರಿ, ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಶೇ.10 ರಷ್ಟು ಮೀಸಲಾತಿ ನೀಡಿದೆ.
ಮತ್ತಷ್ಟು ಓದಿ: Maratha Quota: ಮರಾಠ ಮೀಸಲಾತಿ ಕುರಿತು ಮಹಾರಾಷ್ಟ್ರ ಸರ್ಕಾರದ ಮಹತ್ವದ ನಿರ್ಧಾರ, ಶೇ.10 ಮೀಸಲಾತಿ ನೀಡುವ ಪ್ರಸ್ತಾವಕ್ಕೆ ಅನುಮೋದನೆ
ಸಾಮಾಜಿಕ ಕಾರ್ಯಕರ್ತ ಬಾವುಸಾಹೇಬ ಪವಾರ, ಅ. ರಾಕೇಶ್ ಪಾಂಡೆ ಮೂಲಕ ಸೋಮವಾರ (4ರಂದು) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಇದರಿಂದಾಗಿ ಮರಾಠ ಸಮುದಾಯದ ಮೀಸಲಾತಿ ಬಿಕ್ಕಟ್ಟು ಮತ್ತೆ ಎದುರಾಗಿದೆ. ದೇವೇಂದ್ರ ಫಡ್ನಿಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಹಾರಾಷ್ಟ್ರ ಸರ್ಕಾರವು ಮರಾಠ ಮೀಸಲಾತಿಯನ್ನು ಜಾರಿಗೆ ತಂದಿತು. ಆದರೆ ಆ ಮೀಸಲಾತಿ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಮರಾಠ ಮೀಸಲಾತಿಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಆದರೆ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಆ ಮೀಸಲಾತಿ ಉಳಿಯಲಿಲ್ಲ. ಈ ವಿಚಾರವಾಗಿ ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಕೆಯಾಗಿದೆ. ಸದ್ಯ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಸರ್ಕಾರವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿಯನ್ನು ಆಧಾರವಾಗಿಟ್ಟುಕೊಂಡಿದೆ. ಈ ವರದಿಯ ಪ್ರಕಾರ ಮರಾಠ ಸಮಾಜ ಹಿಂದುಳಿದಿರುವುದು ಸಾಬೀತಾಗಿದೆ. ಹೀಗಾಗಿ ಮರಾಠಾ ಸಮುದಾಯಕ್ಕೆ ಕೊಂಚ ರಿಲೀಫ್ ಸಿಕ್ಕಂತೆ ಕಾಣುತ್ತಿರುವಾಗಲೇ ಇದೀಗ ಈ ಜಾರಿಯಾದ ಮೀಸಲಾತಿ ವಿರುದ್ಧ ಮತ್ತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ