AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಎಸ್​ ರಾವತ್​ ಹೆಲಿಕಾಪ್ಟರ್​ ಪತನಕ್ಕೆ ಕಾರಣ ಮೋಡ; ಕೊನೇ ಕ್ಷಣದಲ್ಲಿ ಪೈಲಟ್​​ಗಳು ಮಾಡಿಲ್ಲ ತುರ್ತುಕರೆ, ಇಂದು ವರದಿ ಸಲ್ಲಿಸುವ ಸಾಧ್ಯತೆ

ಚಾಪರ್​ ಪತನಕ್ಕೆ ಕಾರಣವೇನು ಎಂಬ ಬಗ್ಗೆ ಸೇನೆಯ ಮೂರೂ ವಿಭಾಗಗಳಿಂದ ತನಿಖಾ ತಂಡ ನಿಯೋಜಿಸಲಾಗಿದ್ದು, ಅವರು ತಮ್ಮ ತನಿಖಾ ವರದಿಯನ್ನು ಇಂದು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಸಿಡಿಎಸ್​ ರಾವತ್​ ಹೆಲಿಕಾಪ್ಟರ್​ ಪತನಕ್ಕೆ ಕಾರಣ ಮೋಡ; ಕೊನೇ ಕ್ಷಣದಲ್ಲಿ ಪೈಲಟ್​​ಗಳು ಮಾಡಿಲ್ಲ ತುರ್ತುಕರೆ, ಇಂದು ವರದಿ ಸಲ್ಲಿಸುವ ಸಾಧ್ಯತೆ
ಹೆಲಿಕಾಪ್ಟರ್​ ಪತನ
TV9 Web
| Updated By: Lakshmi Hegde|

Updated on:Jan 05, 2022 | 8:02 AM

Share

ದೆಹಲಿ: ಡಿಸೆಂಬರ್​  8 ರಂದು ತಮಿಳುನಾಡಿವ ಕೂನೂರ್​ ಬಳಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು ಇತರ 12 ಸೇನಾ ಅಧಿಕಾರಿಗಳು ಮೃತಪಟ್ಟ ಪ್ರಕರಣದ ತನಿಖಾ ವರದಿಯನ್ನು ಇಂದು ಮೂರೂ ಸೇವೆಗಳ (ಭೂಸೇನೆ, ವಾಯುಸೇನೆ, ನೌಕಾಪಡೆ) ತನಿಖಾ ತಂಡ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ರಿಗೆ ಸಲ್ಲಿಸಲಿದೆ ಎಂದು ಹೇಳಲಾಗಿದೆ. ಡಿ.8ರಂದು ನಡೆದ ಈ ದುರ್ಘಟನೆಯಿಂದ ರಾಷ್ಟ್ರಕ್ಕೆ ಶಾಕ್​ ಆಗಿತ್ತು. ಅಂದು ಪತನವಾಗಿದ್ದು Mi-17V5 ಸೇನಾ ಚಾಪರ್​. ಇದು ವಿವಿಐಪಿ ಹೆಲಿಕಾಪ್ಟರ್ ಆಗಿದ್ದು, ಪ್ರಮುಖ ವ್ಯಕ್ತಿಗಳು ಪ್ರಯಾಣ ಮಾಡುವಾಗ ಎಲ್ಲ ರೀತಿಯ ಪರಿಶೀಲನೆ ಮಾಡಿಯೇ ಕಳಿಸಲಾಗುತ್ತದೆ. ಹಾಗಿದ್ದಾಗ್ಯೂ ಕೂಡ ತಮಿಳುನಾಡಿನ ಬಳಿ ಪತನಗೊಂಡು ಪ್ರಮುಖ ಅಧಿಕಾರಿಗಳು ಮೃತಪಟ್ಟಿದ್ದರು.

ಚಾಪರ್​ ಪತನಕ್ಕೆ ಕಾರಣವೇನು ಎಂಬ ಬಗ್ಗೆ ಸೇನೆಯ ಮೂರೂ ವಿಭಾಗಗಳಿಂದ ತನಿಖಾ ತಂಡ ನಿಯೋಜಿಸಲಾಗಿದ್ದು, ಅವರು ತಮ್ಮ ತನಿಖಾ ವರದಿಯನ್ನು ಇಂದು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇನ್ನು ಸಿಡಿಎಸ್​ ಜನರಲ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳು ಪ್ರಯಾಣ ಮಾಡುತ್ತಿದ್ದ ಈ ಚಾಪರ್​ ತುಂಬ ಕೆಳಗೆ ಹೋಗುತ್ತಿತ್ತು. ಅಲ್ಲಿಯೇ ಇದ್ದ ರೈಲ್ವೆ ಹಳಿಯನ್ನು ಅನುಸರಿಸಿ ಮೇಲೆ ಹಾರುತ್ತಿತ್ತು. ಆದರೆ ಅವರು ಹೋಗುತ್ತಿದ್ದ ದಾರಿಯಲ್ಲಿ ಒಮ್ಮೆಲೇ ಮೋಡದ ಹೊದಿಕೆ ಎದುರು ಬಂದಿದ್ದರಿಂದ, ಅದನ್ನು ತಪ್ಪಿಸಲು ಹೆಲಿಕಾಪ್ಟರ್​ ಪೈಲಟ್​​ಗಳು ಪ್ರಯತ್ನ ಪಟ್ಟರು ಇದೇ ಅಪಘಾತಕ್ಕೆ ಕಾರಣ ಎಂದು ಮೂಲಗಳಿಂದ ತಿಳಿದುಬಂದಿದ್ದಾಗಿ ಎಎನ್​​ಐ ವರದಿ ಮಾಡಿದೆ. ಅಷ್ಟೇ ಅಲ್ಲ, ಈ ಹೆಲಿಕಾಪ್ಟರ್​​ನಲ್ಲಿ ಇದ್ದವರೆಲ್ಲ ಮಾಸ್ಟರ್​ ಗ್ರೀನ್​ ವರ್ಗಕ್ಕೆ ಸೇರಿದವರು. ಹೆಲಿಕಾಪ್ಟರ್​, ವಿಮಾನ ಸಾರಿಗೆಯಲ್ಲಿ ಅತ್ಯಂತ ಉತ್ತಮ ಪೈಲಟ್​ಗಳು ಎಂದು ಗುರುತಿಸಿಕೊಂಡವರು. ಕಡಿಮೆ ಗೋಚರತೆಯ ಸಂದರ್ಭದಲ್ಲೂ ಇವರು ಹೆಲಿಕಾಪ್ಟರ್​​ನ್ನು ಕೆಳಗೆ ಇಳಿಸುವಷ್ಟು ನುರಿತರು ಆಗಿದ್ದರೂ. ಅವರು ಸಾಗುತ್ತಿದ್ದ ಮಾರ್ಗದಲ್ಲಿಯೇ ಹೆಲಿಕಾಪ್ಟರ್ ಕೆಳಗೆ ಇಳಿಸಬಹುದಿತ್ತು. ಆದರೆ ಮೋಡದಿಂದ ಹೊರಗೆ ಹೋಗುವ ಪ್ರಯತ್ನ ಮಾಡಿದರು. ಇದೇ ಕಾರಣಕ್ಕೆ ಕೆಳಗೆ ಬಿದ್ದು, ಬಂಡೆಗೆ ಅಪ್ಪಳಿಸಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖವಾಗಿದೆ ಎಂದೂ ಎಎನ್​ಐ ತಿಳಿಸಿದೆ.

ತುರ್ತು ಕರೆ ಮಾಡಿಲ್ಲ ಚಾಪರ್​ ಅಪಘಾತದ ಕೊನೇ ಹಂತದಲ್ಲಿ ಅದರಲ್ಲಿ ಇದ್ದ ಪೈಲಟ್​​ಗಳು ಸಮೀಪದ ಏರ್​ಸ್ಟೇಶನ್​​ಗಳಿಗೆ ಯಾವುದೇ ಕರೆ ಮಾಡಿಲ್ಲ. ಹೀಗಾಗಿ ಅವರಿಗೆ ಕೊನೇ ಕ್ಷಣದವರೆಗೂ ಎಮರ್ಜನ್ಸಿ ಇದೆ ಎಂದು ಅನ್ನಿಸಲಿಲ್ಲ ಎನ್ನಿಸುತ್ತದೆ. ಎಲ್ಲವೂ ಒಂದೇ ಬಾರಿಗೆ ಆಗಿಹೋಯಿತು ಎಂದೂ ತನಿಖಾ ತಂಡಗಳ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಎಎನ್​ಐ ತಿಳಿಸಿದೆ. ಇನ್ನು ಪ್ರಕರಣದ ತನಿಖೆಯ ನೇತೃತ್ವವನ್ನು ಭಾರತೀಯ ವಾಯು ಸೇನೆ (IAF) ಅಧಿಕಾರಿ ವಹಿಸಿದ್ದರು. ಹಾಗೇ, ಈ ತಂಡದಲ್ಲಿ ನೇವಿ ಚಾಪರ್ ಪೈಲಟ್​ ಮತ್ತು ಸೇನಾ ಅಧಿಕಾರಿಯೊಬ್ಬರು ಇದ್ದಾರೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Petrol Rate: ಇಂದು ಸಹ ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಎಷ್ಟಿದೆ? ಇಲ್ಲಿದೆ ವಿವರ

Published On - 8:02 am, Wed, 5 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ