35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ […]

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By: KUSHAL V

Updated on:Aug 23, 2020 | 2:33 PM

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ ಹೇಗೆ ಮುದ್ರಿಸಲಾಗುತ್ತಿದೆ ಎಂಬ ಪ್ರಶ್ನೆಗಳೂ ಸಹ ಉದ್ಭವಿಸುತ್ತಿವೆ. ದಾಳಿಯಲ್ಲಿ ಮುಟ್ಟುಗೋಲು ಹಾಕಿಕೊಂಡ NCERT ಪಠ್ಯಪುಸ್ತಕಗಳನ್ನು 2 ರಿಂದ 12 ನೇ ತರಗತಿಗೆ ಮುದ್ರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ದೇಶದ ಹಲವು ರಾಜ್ಯಗಳಲ್ಲಿ ಈ ಪುಸ್ತಕಗಳನ್ನ ಮಾರಾಟ ಮಾಡುತ್ತಿದ್ದವರ ವಿಳಾಸಗಳೂ ಸಹ ಪೊಲೀಸರಿಗೆ ದೊರೆತಿವೆ.

ಇದಲ್ಲದೆ, ಪ್ರಕರಣದ ಮಾಸ್ಟರ್ ಮೈಂಡ್ ಸಚಿನ್ ಗುಪ್ತಾ ಉತ್ತರಪ್ರದೇಶದ ಶಿಕ್ಷಣ ಮಂಡಳಿಯ ನಕಲಿ ಪಠ್ಯಪುಸ್ತಕಗಳನ್ನು ಸಹ ಮುದ್ರಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Published On - 2:33 pm, Sun, 23 August 20

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು