Plastic Ban: ಇಂದಿನಿಂದ ಏಕ ಬಳಕೆಯ ಪ್ಲಾಸ್ಟಿಕ್​ಗೆ ನಿಷೇಧ; 1 ಲಕ್ಷ ರೂ. ದಂಡ ಕಟ್ಟಬೇಕಾದೀತು ಹುಷಾರ್!

Single Use Plastic Ban: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಿದರೆ 500 ರೂ.ನಿಂದ 1 ಲಕ್ಷದವರೆಗೂ ದಂಡ ವಿಧಿಸಬಹುದು. ಹಾಗೇ, 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದಾಗಿದೆ.

Plastic Ban: ಇಂದಿನಿಂದ ಏಕ ಬಳಕೆಯ ಪ್ಲಾಸ್ಟಿಕ್​ಗೆ ನಿಷೇಧ; 1 ಲಕ್ಷ ರೂ. ದಂಡ ಕಟ್ಟಬೇಕಾದೀತು ಹುಷಾರ್!
ಪ್ಲಾಸ್ಟಿಕ್ ನಿಷೇಧImage Credit source: times now
Follow us
| Updated By: ಸುಷ್ಮಾ ಚಕ್ರೆ

Updated on:Jul 01, 2022 | 7:50 AM

ಬೆಂಗಳೂರು: ಇಂದಿನಿಂದ (ಜುಲೈ 1) ಭಾರತದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (Single Use Plastic) ಬಳಕೆ ಮೇಲೆ ನಿಷೇಧ ಹೇರಲಾಗಿದೆ. ಹೀಗಾಗಿ, ತರಕಾರಿ, ಹಾಲು, ಹಣ್ಣು ಮತ್ತಿತರ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅಂಗಡಿಗಳಲ್ಲಿ ನಿಮಗೆ ಪ್ಲಾಸ್ಟಿಕ್ ಕವರ್ ಸಿಗುವುದಿಲ್ಲ. ಭಾರತ ಸರ್ಕಾರವು ಇಂದಿನಿಂದ (ಜುಲೈ 1) ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಿದೆ. ಕಸದ ಮತ್ತು ನಿರ್ವಹಣೆಯಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಮಾಲಿನ್ಯವನ್ನು ನಿಯಂತ್ರಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಏಕ-ಬಳಕೆಯ ಪ್ಲಾಸ್ಟಿಕ್ ನಿಷೇಧದ ಭಾಗವಾಗಿ, ಶಾಂಪೂ ಬಾಟಲಿಗಳು, ಪ್ಲೋಯ್ಥೀನ್ ಪ್ಲಾಸ್ಟಿಕ್ ಚೀಲಗಳು ಮತ್ತು ಬಿಸಾಡಬಹುದಾದ ಕಾಫಿ, ಟೀ ಕಪ್​ಗಳಂತಹ ವಸ್ತುಗಳನ್ನು ನಿಷೇಧಿಸಲಾಗಿದೆ.

ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿದ್ದು, ಕರ್ನಾಟಕ ಸರ್ಕಾರವು 2016ರಿಂದಲೇ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ. ಇದೀಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೊರಡಿಸಿದ ಈ ಆದೇಶವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ಗಡಿ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲು ಇನ್ನಷ್ಟು ಸಹಾಯಕವಾಗಿದೆ.

ಇದನ್ನೂ ಓದಿ: ಜುಲೈ 1 ರಿಂದ ಈ ಪ್ಲಾಸ್ಟಿಕ್​​​ ವಸ್ತುಗಳನ್ನು ಸುತರಾಂ ಬಳಸುವಂತಿಲ್ಲ! ನಿಷೇಧ ಹೇರಿದ್ದೇವೆ ಎಂದ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್

ಇದನ್ನೂ ಓದಿ
Image
Viral News: ಕೆಟ್ಟ ಕನಸಿಗೆ ಹೆದರಿ ಕದ್ದ ದೇವರ ವಿಗ್ರಹಗಳನ್ನು ವಾಪಾಸ್ ತಂದಿಟ್ಟ ಕಳ್ಳರು; ಅಂಥದ್ದೇನಾಯ್ತು?
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಕಾಲ್ಪನಿಕ ಕತೆ ಎಂದ ವಿಕಿಪೀಡಿಯಾ ಬರಹ; ವಿವೇಕ್ ಅಗ್ನಿಹೋತ್ರಿ ತೀವ್ರ ಆಕ್ಷೇಪ
Image
ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ

KSPCB ಇಂದಿನಿಂದ ನಿಷೇಧಿತ ವಸ್ತುಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದ್ದು, ಅವರು ಪ್ಲಾಸ್ಟಿಕ್‌ಗೆ ಪರ್ಯಾಯಗಳನ್ನು ಒದಗಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಿಶ್ರಗೊಬ್ಬರ ಚೀಲಗಳು ಮತ್ತು ಬಟ್ಟೆ ಚೀಲಗಳ ಪೂರೈಕೆಗೆ ಮಂಡಳಿಯು ಈಗಾಗಲೇ ಅನುಮೋದನೆ ನೀಡಲಾಗಿದೆ.

1 ಲಕ್ಷ ರೂ. ದಂಡ!:

ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಿದರೆ ಅಥವಾ ಕಸದ ರೂಪದಲ್ಲಿ ಹಾಕಿದರೆ ವ್ಯಕ್ತಿಯ ಮತ್ತು ಮನೆಗಳಿಗೆ ಹಾಗೂ ಸಾಂಸ್ಥಿಕ ತ್ಯಾಜ್ಯ ಉತ್ಪಾದಕರಿಗೆ 500 ರೂ.ನಿಂದ 1 ಲಕ್ಷದವರೆಗೂ ದಂಡ ವಿಧಿಸಬಹುದು. ಹಾಗೇ, 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದಾಗಿದೆ.

ಇಂದಿನಿಂದ ಯಾವ ವಸ್ತುಗಳಿಗೆ ನಿಷೇಧ?: ಇಯರ್ ಬಡ್‌ಗಳು, ಬಲೂನ್‌ಗಳು, ಕ್ಯಾಂಡಿ, ಐಸ್‌ಕ್ರೀಮ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟ್ರಾ, ಕಟ್ಲರಿ ವಸ್ತುಗಳು – ಪ್ಲೇಟ್‌ಗಳು, ಕಪ್‌ಗಳು, ಗ್ಲಾಸ್‌ಗಳು, ಫೋರ್ಕ್ಸ್, ಸ್ಪೂನ್‌ಗಳು, ಚಾಕುಗಳು, ಟ್ರೇಗಳು, ಸ್ಟಿರರ್‌ಗಳು, ಸ್ವೀಟ್ ಬಾಕ್ಸ್, ಇನ್ವಿಟೇಶನ್ ಕಾರ್ಡ್, ಸಿಗರೇಟ್ ಪ್ಯಾಕೆಟ್​ಗಳಿಗೆ ಬಳಸುವ ಪ್ಯಾಕೇಜಿಂಗ್ ವಸ್ತುಗಳಿಗೆ ನಿಷೇಧ ಹೇರಲಾಗಿದೆ. ಹಾಗೇ, 100 ಮೈಕ್ರಾನ್‌ಗಿಂತ ಕಡಿಮೆ ಇರುವ PVC ಬ್ಯಾನರ್‌ಗಳು, ಅಲಂಕಾರಕ್ಕಾಗಿ ಪಾಲಿಸ್ಟೈರೀನ್, ಕ್ಯಾರಿ ಬ್ಯಾಗ್‌ಗಳು, ಅಲಂಕಾರಕ್ಕಾಗಿ ಬಳಸುವ ಥರ್ಮಾಕೋಲ್ ಗಳು, ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದೆ.

Published On - 7:49 am, Fri, 1 July 22

Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ