ಬುಲ್​ಡೋಜರ್ ರಾಜಕೀಯ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮುಸ್ಲಿಂ ಸಂಘಟನೆ ಅರ್ಜಿ

‘ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅಪರಾಧ ತಡೆಯುವ ನೆಪದಲ್ಲಿ ಅಲ್ಪಸಂಖ್ಯಾತರನ್ನು, ಅದರಲ್ಲಿಯೂ ಮುಖ್ಯವಾಗಿ ಮುಸ್ಲಿಮರನ್ನು ಹತ್ತಿಕ್ಕಲು ಬುಲ್​ಡೋಜರ್​ಗಳನ್ನು ಬಳಸಲಾಗುತ್ತಿದೆ’ ಎಂದು ಹೇಳಲಾಗಿದೆ.

ಬುಲ್​ಡೋಜರ್ ರಾಜಕೀಯ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮುಸ್ಲಿಂ ಸಂಘಟನೆ ಅರ್ಜಿ
ಮಧ್ಯಪ್ರದೇಶದಲ್ಲಿ ಮನೆಗಳನ್ನು ಕೆಡವುತ್ತಿರುವ ಜೆಸಿಬಿಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 18, 2022 | 1:20 PM

ದೆಹಲಿ: ಹಿಂಸಾಚಾರದಂಥ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವವರ ಮನೆಗಳನ್ನು ಬುಲ್​ಡೋಜರ್ ಬಳಸಿ ಕೆಡವುವ ಕ್ರಮಗಳನ್ನು ಪ್ರಶ್ನಿಸಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಜಮಾತ್ ಉಲಾಮಾ-ಎ-ಹಿಂದ್ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಭಾರತ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಈ ಕುರಿತು ಅಗತ್ಯ ಸೂಚನೆ ನೀಡಬೇಕು. ಯಾವುದೇ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಆರೋಪಿಗಳ ಮನೆಯನ್ನು ಪ್ರತೀಕಾರಕ್ಕಾಗಿ ಕೆಡುವುವ ಹಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿನಂತಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಜಮಾತ್ ಉಲಾಮಾ-ಎ-ಹಿಂದ್​ ಅಧ್ಯಕ್ಷ ಅರ್ಷದ್ ಮದಾನಿ, ‘ಅಪಾಯಕಾರಿ ಬುಲ್​ಡೋಜರ್ ರಾಜಕಾರಣ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅಪರಾಧ ತಡೆಯುವ ನೆಪದಲ್ಲಿ ಅಲ್ಪಸಂಖ್ಯಾತರನ್ನು, ಅದರಲ್ಲಿಯೂ ಮುಖ್ಯವಾಗಿ ಮುಸ್ಲಿಮರನ್ನು ಹತ್ತಿಕ್ಕಲು ಬುಲ್​ಡೋಜರ್​ಗಳನ್ನು ಬಳಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಗಲಭೆಯಂಥ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎನ್ನುವ ಕಾರಣಕ್ಕೆ ಹಲವರ ಮನೆ ಹಾಗೂ ವಾಣಿಜ್ಯ ಕಟ್ಟಡಗಳನ್ನು ವಿನಾಕಾರಣ ಕೆಡವಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ವಿದ್ಯಮಾನ ಹೆಚ್ಚಾಗುತ್ತಿದೆ. ಈ ಕೆಟ್ಟ ಪರಂಪರೆಗೆ ಕಡಿವಾಣ ಹಾಕಬೇಕಿದೆ. ಅದೇ ಉದ್ದೇಶದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ‘ಅಪರಾಧ ತಡೆಯುವ ನೆಪದಲ್ಲಿ ಮುಸ್ಲಿಮರ ವಿರುದ್ಧ ಪ್ರತೀಕಾರ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸಹ ಬುಲ್​ಡೋಜರ್ ರಾಜಕಾರಣ ಸಮರ್ಥಿಸುತ್ತಿದ್ದು, ಅಲ್ಪಸಂಖ್ಯಾತರು ಮನೆಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ರಾಜ್ಯ ಅಥವಾ ಕೇಂದ್ರ ಸರ್ಕಾರವು ಜರುಗಿಸುವ ಇಂಥ ಕ್ರಮಗಳು ಸಂವಿಧಾನದ ಆಶಯಗಳು ಮತ್ತು ಅಪರಾಧ ನ್ಯಾಯ ಪ್ರಕ್ರಿಯೆ ವ್ಯವಸ್ಥೆಗೆ ವಿರುದ್ಧವಾಗಿವೆ. ಆರೋಪಿಗಳ ಹಕ್ಕುಗಳನ್ನೂ ಈ ಕ್ರಮಗಳು ಉಲ್ಲಂಘಿಸುತ್ತವೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ‘ದೇಶದಲ್ಲಿ ಪ್ರಚಲಿತದಲ್ಲಿರುವ ಅಪರಾಧ ನ್ಯಾಯ ಪ್ರಕ್ರಿಯೆ ವ್ಯವಸ್ಥೆಗೂ ಬುಲ್​ಡೋಜರ್ ರಾಜಕಾರಣವು ಬಾಧಕವಾಗಿದೆ. ನ್ಯಾಯ ವಿಚಾರಣೆ ಮತ್ತು ತೀರ್ಪು ನೀಡುವ ಪ್ರಕ್ರಿಯೆಯಲ್ಲಿ ನ್ಯಾಯಾಲಯಗಳಿಗೆ ಪಾತ್ರವೇ ಇಲ್ಲದಂತೆ ಆಗಿದೆ. ಸರ್ಕಾರಗಳು ಈ ದುಸ್ಸಾಹಸಗಳಿಗೆ ಶೀಘ್ರ ಕಡಿವಾಣ ಹಾಕಬೇಕು. ಮತ್ತೊಮ್ಮೆ ಇಂಥ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಬೇಕು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲು ನ್ಯಾಯಾಲಯ ಅವಕಾಶ ನೀಡಬಾರದು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಪರಾಧ ತಡೆ ಕ್ರಮದ ಭಾಗವಾಗಿ ಯಾವುದೇ ವಾಣಿಜ್ಯ ಆಸ್ತಿಯನ್ನು ಮುಟ್ಟುಗೋಲು ಹಾಕುವುದು ಅಥವಾ ಕೆಡುವುದು ತಪ್ಪು. ದೇಶದಲ್ಲಿ ಕೋಮು ಗಲಭೆ ತಡೆಯುವ ಕುಡಿರುವ ಪೊಲೀಸರಿಗೆ ಇನ್ನಷ್ಟು ತರಬೇತಿ ಒದಗಿಸಬೇಕಿದೆ. ಈ ಬಗ್ಗೆಯೂ ನ್ಯಾಯಾಲಯ ಅಗತ್ಯ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅಪರಾಧ ತನಿಖಾ ಪ್ರಕ್ರಿಯೆಯ ಭಾಗ ಆಗಿರದ ಸಚಿವರು, ಶಾಸಕರು ಮತ್ತು ಇತರ ಯಾವುದೇ ಜನರು ತನಿಖೆಯಲ್ಲಿ ವಿನಾಕಾರಣ ಮೂಗುತೂರಿಸಬಾರದು. ಯಾವುದೇ ವ್ಯಕ್ತಿ ಅಥವಾ ಸಮುದಾಯದ ಮೇಲೆ ಅಪರಾಧದ ಆರೋಪ ಹೊರಿಸಬಾರದು. ಈ ಬಗ್ಗೆಯೂ ನ್ಯಾಯಾಲಯ ಅಗತ್ಯ ನಿರ್ದೇಶನ ನೀಡಬೇಕು ಎಂದು ಜಮಾತ್ ಮನವಿ ಮಾಡಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿದ್ದ ವ್ಯಕ್ತಿಗಳ ಆಸ್ತಿ ಧ್ವಂಸ

ಇದನ್ನೂ ಓದಿ: ಮಧ್ಯಪ್ರದೇಶ: ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೇರಿ ಎಂಟು ಮಂದಿಯನ್ನು ಅರೆನಗ್ನರಾಗಿ ನಿಲ್ಲಿಸಿದ ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

Published On - 12:46 pm, Mon, 18 April 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್