ಆಕ್ಸಿಜನ್​ ಅಭಾವ ನೀಗಿಸಲು ಕೇಂದ್ರ ಸರ್ಕಾರದಿಂದ ಕ್ರಮ; ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

ಈ ವರ್ಷದ ಪ್ರಾರಂಭದಲ್ಲಿ ದೇಶಾದ್ಯಂತ ವಿವಿಧ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ 162 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್​​ನಿಂದ 201.58 ಕೋಟಿ ರೂ.ನೀಡಿತ್ತು.

ಆಕ್ಸಿಜನ್​ ಅಭಾವ ನೀಗಿಸಲು ಕೇಂದ್ರ ಸರ್ಕಾರದಿಂದ ಕ್ರಮ; ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
| Updated By: ರಶ್ಮಿ ಕಲ್ಲಕಟ್ಟ

Updated on:Apr 25, 2021 | 7:02 PM

ದೆಹಲಿ: ಆಕ್ಸಿಜನ್ ಕೊರತೆಯನ್ನು ನೀಗಿಸಲು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ, ದೇಶದಲ್ಲಿ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 551 ಪ್ರೆಶರ್​ ಸ್ವಿಂಗ್​ ಆಡ್ಸರ್ಪ್ಶನ್ (ಪಿಎಸ್​ಎ) ವೈದ್ಯಕೀಯ ಆಕ್ಸಿಜನ್​ ಉತ್ಪಾದನಾ ಘಟಕಗಳ ಸ್ಥಾಪನೆಗೆ ಹಣ ನೀಡಲು ಪಿಎಂ ಕೇರ್ಸ್​ ಫಂಡ್​​ನಿಂದ ತಾತ್ವಿಕ ಅನುಮೋದನೆ ಸಿಕ್ಕಿದೆ. ಎಷ್ಟಾಗತ್ತೋ ಅಷ್ಟು ಬೇಗ ಈ ಘಟಕಗಳು ಕಾರ್ಯಶುರುಮಾಡುವಂತಾಗಬೇಕು. ಇವುಗಳಿಂದ ಆಮ್ಲಜನಕ ಪೂರೈಕೆಗೆ ಲಭ್ಯತೆಗೆ ಉತ್ತೇಜನ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.

ಒಟ್ಟು 551 ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಅನುಮೋದನೆ ಸಿಕ್ಕಿದ್ದು, ಇವುಗಳನ್ನು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಮಾನ್ಯತೆ ಪಡೆದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವರ್ಷದ ಪ್ರಾರಂಭದಲ್ಲಿ ದೇಶಾದ್ಯಂತ ವಿವಿಧ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ 162 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್​​ನಿಂದ 201.58 ಕೋಟಿ ರೂ.ನೀಡಿತ್ತು. ಸದ್ಯ ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಈ ಮಧ್ಯೆ ದೇಶದ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ರೋಗಿಗಳು ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಯನ್ನು ನೀಗಿಸಲು ಕೇಂದ್ರ ಸರ್ಕಾರ 551 ಆಕ್ಸಿಜನ್ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ಸ್ಥಾವರ

ಸಮರ್ಪಕ  ಆಕ್ಸಿಜನ್ ಪೂರೈಕೆದಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಆಕ್ಸಿಜನ್  ಸ್ಥಾವರ ಸ್ಥಾಪಿಸಲಾಗುವುದು .ದೇಶದಾದ್ಯಂತವಿರುವ ಜನರಿಗೆ ನೆರವಾಗಲು ಮತ್ತು ಆಸ್ಪತ್ರೆಗಲ್ಲಿ ಆಕ್ಸಿಜನ್ ಪೂರೈಕೆ  ಅಡಚಣೆ ಇಲ್ಲದೆ ಸಿಗುವಂತ ಮಾಡುವ ಮಹತ್ವದ ನಿರ್ಧಾರ  ಇದಾಗಿದೆ ಎಂದು ಪ್ರಧಾನಿ  ನರೇಂದ್ರ ಮೋದಿ  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಿಂಗೆ ಮರ್ಯಾದೆ ಇಲ್ವಾ, ನನ್ ಹಿಂದೆ ಬರಬೇಡ; ಬಿಗ್​ ಬಾಸ್​ ಚೆಲುವೆಗೆ ಮಂಜು ಹೀಗೆ ಹೇಳಿದ್ದೇಕೆ?

ಶರಣು ಮಣ್ಣಿಗೆ : ಹಸಿರಿಲ್ಲದೆ ಉಪವಾಸ ಬಿದ್ದ ಕಣ್ಣಿಗೆ ಖಿನ್ನತೆಗೆ ಜಾರಿದ ಮನಸ್ಸಿಗೆ ಕಂಡುಕೊಂಡ ಉಪಾಯವಿದು!

Published On - 2:47 pm, Sun, 25 April 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ