ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರದ ಭಾಗಲ್ಪುರದಿಂದ ಪಿಎಂ ಕಿಸಾನ್ ಸಮ್ಮಾನ್ 22,000 ಕೋಟಿ ರೂಪಾಯಿ ಮೌಲ್ಯದ ಮೊತ್ತವನ್ನು ಡಿಬಿಟಿ (ನೇರ ಫಲಾನುಭವಿ ವರ್ಗಾವಣೆ) ಯೋಜನೆಯ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರು ಪ್ರತಿ 4 ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ. ಅಂದರೆ ವರ್ಷಕ್ಕೆ 6,000 ರೂ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುವ ಹಣವನ್ನು ಪ್ರತಿ ವರ್ಷ 3 ಕಂತುಗಳಲ್ಲಿ ನೀಡಲಾಗುತ್ತದೆ.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಬಿಹಾರದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಅವರು ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.2019ರ ಫೆಬ್ರವರಿ 24ರಂದು ಪ್ರಾರಂಭಿಸಲಾದ ಈ ಯೋಜನೆಯು ಅರ್ಹ ಕೃಷಿ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತದೆ. ಇಲ್ಲಿಯವರೆಗೆ, 18 ಕಂತುಗಳಲ್ಲಿ 11 ಕೋಟಿಗೂ ಹೆಚ್ಚು ರೈತರಿಗೆ 3.46 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಲಾಗಿದೆ.
ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರು ಪ್ರತಿ 4 ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ. ಅಂದರೆ ವರ್ಷಕ್ಕೆ 6,000 ರೂ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುವ ಹಣವನ್ನು ಪ್ರತಿ ವರ್ಷ 3 ಕಂತುಗಳಲ್ಲಿ ನೀಡಲಾಗುತ್ತದೆ. ಈ ಯೋಜನೆಯನ್ನು 2019ರ ಮಧ್ಯಂತರ ಬಜೆಟ್‌ನಲ್ಲಿ ಅಂದಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಘೋಷಿಸಿದರು.ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದು ಈಗ ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ