AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Samman Yojana: ಮೇ 31ರಂದು ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತು ಬಿಡುಗಡೆ; ಇಕೆವೈಸಿ ಮಾಡುವುದು ಹೇಗೆ?

ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಭೂ ಹಿಡುವಳಿ ಹೊಂದಿರುವ ಎಲ್ಲಾ ರೈತ ಕುಟುಂಬಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಅರ್ಹ ರೈತರು ವರ್ಷಕ್ಕೆ 6,000 ರೂ.ಗಳನ್ನು ಪಡೆಯುತ್ತಾರೆ.

PM Kisan Samman Yojana: ಮೇ 31ರಂದು ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತು ಬಿಡುಗಡೆ; ಇಕೆವೈಸಿ ಮಾಡುವುದು ಹೇಗೆ?
ಸಾಂದರ್ಭಿಕ ಚಿತ್ರImage Credit source: DNA
TV9 Web
| Edited By: |

Updated on: May 29, 2022 | 3:01 PM

Share

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Yojana) ಘೋಷಣೆಗಾಗಿ ಕಾಯುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕಚೇರಿ ಸಿಹಿ ಸುದ್ದಿ ನೀಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಮೇ 31ರಂದು ಬಿಡುಗಡೆ ಮಾಡಲಾಗುವುದು. 21,000 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಈ ಯೋಜನೆಯಡಿ ಬಿಡುಗಡೆ ಮಾಡಲಾಗುವುದು. ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಡಿಯಲ್ಲಿ ಭಾರತದ 9 ಸಚಿವಾಲಯಗಳು ಮತ್ತು ಇಲಾಖೆಗಳನ್ನು ವ್ಯಾಪಿಸಿರುವ 16 ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.

ಮೇ 31ರಂದು ಶಿಮ್ಲಾದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಯಲಿದೆ. ಈ ಘೋಷಣೆಯ ನಂತರ ಅರ್ಹ ರೈತರು ತಮ್ಮ 4 ತಿಂಗಳ ಭತ್ಯೆ ಮೊತ್ತವಾದ 2,000 ರೂ. ಪಡೆಯಬಹುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಡಿಸೆಂಬರ್ 2018ರಲ್ಲಿ ಪ್ರಾರಂಭಿಸಲಾಯಿತು. ಇದು ಬೆಂಬಲದ ಅಗತ್ಯವಿರುವ ರೈತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: PM- KISAN eKYC: ಪಿಎಂ-ಕಿಸಾನ್ ಇಕೆವೈಸಿಗೆ ಮೇ 31 ಕೊನೆ ದಿನ

ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಭೂ ಹಿಡುವಳಿ ಹೊಂದಿರುವ ಎಲ್ಲಾ ರೈತ ಕುಟುಂಬಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಅರ್ಹ ರೈತರು ವರ್ಷಕ್ಕೆ 6,000 ರೂ.ಗಳನ್ನು ಪಡೆಯುತ್ತಾರೆ. ಇದನ್ನು ವರ್ಷದಲ್ಲಿ 3 ಬಾರಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

ಪಿಎಂ-ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸರ್ಕಾರವು eKYC ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. PM-KISAN ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. PM-KISAN ಪೋರ್ಟಲ್‌ನಲ್ಲಿ OTP ಆಧಾರಿತ eKYC ಲಭ್ಯವಿದೆ.

eKYC ಮಾಡುವುದು ಹೇಗೆ?:

* ttps://pmkisan.gov.in/ ನಲ್ಲಿ ಪಿಎಂ ಕಿಸಾನ್‌ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

* ಪೇಜಿನ ಮುಖಪುಟದಲ್ಲಿ ಲಭ್ಯವಿರುವ eKYC ಆಯ್ಕೆಯ ಮೇಲೆ ಕ್ಲಿಕ್ ಮಾಡಿ

* eKYC ಪುಟದಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಸರ್ಚ್ ಬಟನ್ ಕ್ಲಿಕ್ ಮಾಡಿ.

* ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ

* ಮಾಹಿತಿಯನ್ನು ಸಲ್ಲಿಸಿದ ನಂತರ, ‘OTP ಪಡೆಯಿರಿ’ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ. ನೀವು ಈ ಹಿಂದೆ ನಮೂದಿಸಿದ ಮೊಬೈಲ್ ಸಂಖ್ಯೆಗೆ ನೀವು ಒಂದು ಬಾರಿಯ ಪಾಸ್‌ವರ್ಡ್ ಅನ್ನು ಸ್ವೀಕರಿಸುತ್ತೀರಿ.

* ಬಾಕ್ಸ್‌ನಲ್ಲಿ ಈ OTP ಅನ್ನು ನಮೂದಿಸಿ

* ನಿಮ್ಮ eKYC ಪ್ರಕ್ರಿಯೆಯು ಪೂರ್ಣಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು