PM Kisan Scheme: ಪಿಎಂ ಕಿಸಾನ್​ ಯೋಜನೆಯ 9ನೇ ಕಂತು ಬಿಡುಗಡೆ; 19,500 ಕೋಟಿ ರೂ. ರೈತರ ಖಾತೆಗೆ ವರ್ಗಾವಣೆ

PM Kisan Samman Nidhi 9th Instalment: ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (PM Kisan Scheme) 9ನೇ ಕಂತು ಇಂದು (ಆಗಸ್ಟ್​ 09) ಬಿಡುಗಡೆಯಾಗಿದೆ. ಪಿಎಂ- ಕಿಸಾನ್ ನಿಧಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಬಿಡುಗಡೆ ಮಾಡಿದ್ದಾರೆ.

PM Kisan Scheme: ಪಿಎಂ ಕಿಸಾನ್​ ಯೋಜನೆಯ 9ನೇ ಕಂತು ಬಿಡುಗಡೆ; 19,500 ಕೋಟಿ ರೂ. ರೈತರ ಖಾತೆಗೆ ವರ್ಗಾವಣೆ
ಪ್ರಧಾನಿ ನರೇಂದ್ರ ಮೋದಿ
Edited By:

Updated on: Aug 09, 2021 | 1:09 PM

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (PM Kisan Scheme) 9ನೇ ಕಂತು ಇಂದು (ಆಗಸ್ಟ್​ 09) ಬಿಡುಗಡೆಯಾಗಿದೆ. ಪಿಎಂ ಕಿಸಾನ್ ನಿಧಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ವಿಡಿಯೋ ಕಾನ್ಫರೆನ್ಸ್​ ಮೂಲಕ ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ 2,000 ರೂಪಾಯಿ ಜಮೆಯಾಗುತ್ತಿದೆ. ಕೇಂದ್ರ ಸರ್ಕಾರ ಸದರಿ ಯೋಜನೆ ಅಡಿಯಲ್ಲಿ ರೈತರಿಗೆ ಬಿಡುಗಡೆ ಮಾಡುತ್ತಿರುವ ಪಿಎಂ ಕಿಸಾನ್ ನಿಧಿಯ 9 ನೇ ಕಂತು (PM Kisan 9th Instalment) ಇದಾಗಿದ್ದು, ಈ ಯೋಜನೆಯಿಂದಾಗಿ ರೈತರು ಕೇಂದ್ರದಿಂದ ಪ್ರತಿವರ್ಷ ಮೂರು ಕಂತುಗಳಲ್ಲಿ 6,000 ರೂಪಾಯಿಗಳ ಹಣಕಾಸಿನ ನೆರವು ಪಡೆಯುತ್ತಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಸರ್ಕಾರದ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. 2018ನೇ ಇಸವಿಯ ಡಿಸೆಂಬರ್ 1ರಂದು ಆರಂಭಗೊಂಡ ಈ ಯೋಜನೆಯಡಿ 2 ಹೆಕ್ಟೇರ್​ ತನಕ ಒಟ್ಟಾರೆಯಾಗಿ ಭೂಮಿ ಇರುವ ಅಥವಾ ಮಾಲೀಕತ್ವ ಹೊಂದಿರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂಪಾಯಿಯನ್ನು ತಲಾ 2 ಸಾವಿರ ರೂಪಾಯಿಯಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಮೊತ್ತವು ನೇರವಾಗಿ ಫಲಾನುಭವಿಗಳ ಬ್ಯಾಂಕ್​ ಖಾತೆಗೆ ವರ್ಗಾವಣೆಯಾಗಲಿದೆ.

ಅಂದಹಾಗೆ, ಈ ಯೋಜನೆಯಡಿ ಕೆಲವು ವರ್ಗವನ್ನು ಹೊರಗಿಡಲಾಗಿದ್ದು, ಇದು ದೇಶದ ಎಲ್ಲ ಅನ್ನದಾತರಿಗೆ ಸಿಗುವ ನೆರವಲ್ಲ. ಕಡಿಮೆ ಜಮೀನು ಹೊಂದಿರುವ ರೈತರು ಮಾತ್ರ ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗುವುದು ಸಾಧ್ಯ. ಅಧಿಕೃತ ಮೂಲಗಳ ಪ್ರಕಾರ ಸುಮಾರು 12.11 ಕೋಟಿ ರೈತರು ಆರ್ಥಿಕ ನೆರವು ಪಡೆಯಲಿದ್ದಾರೆ.

ಈಚಿನ ಕಂತು ಬಂದಿದೆಯೇ ಎಂಬುದನ್ನು ಪರಿಶೀಲಿಸಲು ಹಂತ ಹಂತವಾದ ವಿವರಣೆ ಹೀಗಿದೆ:
1. ಅಧಿಕೃತ ವೆಬ್​ಸೈಟ್​ www.pmkisan.gov.in ಭೇಟಿ ನೀಡಿ.
2. ಅಧಿಕೃತ ವೆಬ್​ಸೈಟ್​ನ ಹೋಮ್​ ಪೇಜ್​ನಲ್ಲಿ ಫಾರ್ಮರ್ಸ್​ ಕಾರ್ನರ್​ ಮೇಲೆ ಕ್ಲಿಕ್ ಮಾಡಬೇಕು.
3. ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿಗಳ ಪಟ್ಟಿ) ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
4. ರಾಜ್ಯ, ಜಿಲ್ಲೆ/ಉಪಜಿಲ್ಲೆ, ಬ್ಲಾಕ್​ ಮತ್ತು ಹಳ್ಳಿ ಈ ಮಾಹಿತಿಯನ್ನು ಸರಿಯಾಗಿ ಆರಿಸಬೇಕು.
5. Get Report ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
6. ಸ್ಕ್ರೀನ್ ಮೇಲೆ ಕಾಣುವ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿ ಪಟ್ಟಿ) ಮೇಲೆ ಕ್ಲಿಕ್ ಮಾಡಬೇಕು.
7. ಹೆಸರನ್ನು ಪರಿಶೀಲಿಸಿ, ಖಾತ್ರಿ ಪಡಿಸಬೇಕು.
8. pmskny ಹೋಮ್​ಪೇಜ್​ಗೆ ಮರಳಬೇಕು.
9. ಬೆನಿಫಿಷಿಯರಿ ಸ್ಟೇಟಸ್ ಬಟನ್ ಮೇಲೆ ಮತ್ತೆ ಕ್ಲಿಕ್ ಮಾಡಬೇಕು.
10. ಆಧಾರ್ ಕಾರ್ಡ್ ಮಾಹಿತಿ ಅಥವಾ ಮೊಬೈಲ್ ನಂಬರ್ ಅಥವಾ ಅಕೌಂಟ್ ನಂಬರ್ ನಮೂದಿಸಬೇಕು.
11. get date ಬಟನ್ ಮೇಲೆ ಕ್ಲಿಕ್ ಮಾಡಬೇಕು.
12. ಕಂತಿನ ಸ್ಥಿತಿ ಏನು ಎಂಬುದರ ಬಗ್ಗೆ ಮಾಹಿತಿ ಸ್ಕ್ರೀನ್​ ಮೇಲೆ ಕಾಣಿಸುತ್ತದೆ.

ಇದನ್ನೂ ಓದಿ:
ಪಿಎಂ ಕಿಸಾನ್​ ಯೋಜನೆಯ 9ನೇ ಕಂತು ಇಂದು ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯಾ ಎಂದು ಪರಿಶೀಲಿಸಲು ಹೀಗೆ ಮಾಡಿ 

(PM Kisan Scheme Narendra Modi releases PM Kisan 9th Instalment today know how to check)

Published On - 12:57 pm, Mon, 9 August 21