ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಮೋದಿಯವರ ವ್ರತಾಚರಣೆ ಹೇಗಿರುತ್ತದೆ?

ಮೋದಿ ಅವರು 11 ದಿನಗಳ ಕಾಲ 'ಯಮ್ ನಿಯಮ್' ಅನ್ನು ಅನುಸರಿಸುತ್ತಾರೆ. ಅವರು ಧರ್ಮಗ್ರಂಥಗಳಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಮೋದಿಯವರ ವ್ರತಾಚರಣೆ ಹೇಗಿರುತ್ತದೆ?
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jan 18, 2024 | 5:27 PM

ದೆಹಲಿ ಜನವರಿ 18: ರಾಮಮಂದಿರದಲ್ಲಿ (Ram Mandir)  ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) 11ದಿನಗಳ ವ್ರತಾಚರಣೆ ಮಾಡುತ್ತಿದ್ದಾರೆ. ವ್ರತಾಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೆಲದ ಮೇಲೆ ಮಲಗಲಿದ್ದಾರೆ. ಅವರು ಕೇವಲ ಎಳನೀರು ಮಾತ್ರ ಸೇವಿಸಲಿದ್ದಾರೆ ಎಂದು ಮೂಲಗಳು ಗುರುವಾರ ಇಂಡಿಯಾ ಟುಡೇಗೆ ತಿಳಿಸಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” ಮತ್ತು “ಶುಭ” ಸಂದರ್ಭಕ್ಕೆ ಸಾಕ್ಷಿಯಾಗಲು ನಾನು ಅದೃಷ್ಟಶಾಲಿ ಎಂದು ಹೇಳಿದರು.

ಪ್ರಾಣ ಪ್ರತಿಷ್ಠಾ ವ್ಯಾಯಾಮದ ಸಮಯದಲ್ಲಿ ಎಲ್ಲಾ ಭಾರತೀಯರನ್ನು ಪ್ರತಿನಿಧಿಸುವವರಾಗಿ ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು  ನಾನು 11 ದಿನಗಳ ವಿಶೇಷ ಧಾರ್ಮಿಕ ವ್ರತಾಚರಣೆ ಪಾಲನೆ ಕೈಗೊಳ್ಳುತ್ತಿರುವುದಾಗಿ ಮೋದಿ ಹೇಳಿದ್ದಾರೆ.  ಮೋದಿ ಅವರು 11 ದಿನಗಳ ಕಾಲ ‘ಯಮ್ ನಿಯಮ್’ ಅನ್ನು ಅನುಸರಿಸುತ್ತಾರೆ. ಅವರು ಧರ್ಮಗ್ರಂಥಗಳಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಯಮ್ ನಿಯಮ’ ತನ್ನ ಸಾಧಕರಿಗೆ ಯೋಗ, ಧ್ಯಾನ ಮತ್ತು ವಿವಿಧ ಅಂಶಗಳಲ್ಲಿ ಶಿಸ್ತು ಸೇರಿದಂತೆ ಹಲವಾರು ಕಠಿಣ ಕ್ರಮಗಳನ್ನು ವಿವರಿಸುತ್ತದೆ. ಪ್ರಧಾನಿ ಮೋದಿ ಅವರು ತಮ್ಮ ದೈನಂದಿನ ಜೀವನದಲ್ಲಿ ಸೂರ್ಯೋದಯಕ್ಕೂ ಮುನ್ನ ಶುಭ ಸಮಯದಲ್ಲಿ ಏಳುವುದು, ಧ್ಯಾನ ಮತ್ತು ಸಾತ್ವಿಕ ಆಹಾರವನ್ನು ಸೇವಿಸುವುದು ಸೇರಿದಂತೆ ಹಲವು ಶಿಸ್ತುಗಳನ್ನು ಅನುಸರಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

11 ದಿನಗಳ ಕಾಲ ಕಠಿಣ ತಪಸ್ಸಿನೊಂದಿಗೆ ಉಪವಾಸವನ್ನೂ ಆಚರಿಸಲು ಪ್ರಧಾನಿ ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವರ ವಿಗ್ರಹದಲ್ಲಿ ದೈವಿಕ ಪ್ರಜ್ಞೆಯ ಅಭಿವ್ಯಕ್ತಿ ಎಂದು ಪ್ರಾಣ ಪ್ರತಿಷ್ಠೆಯನ್ನು ವಿವರಿಸಲಾಗಿದೆ. ಪವಿತ್ರ ಗ್ರಂಥಗಳು ಪ್ರಾಣ ಪ್ರತಿಷ್ಠೆ ಮೊದಲು ಉಪವಾಸದ ನಿಯಮಗಳಿಗೆ ಮಾರ್ಗಸೂಚಿಗಳನ್ನು ಒದಗಿಸುತ್ತವೆ.

ರಾಮಮಂದಿರದಲ್ಲಿ  ಪ್ರಾಣ ಪ್ರತಿಷ್ಠಾ

ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠೆಯ ಮುನ್ನ, ಬುಧವಾರ ರಾತ್ರಿ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮ ಲಲ್ಲಾನ ವಿಗ್ರಹವನ್ನು ತರಲಾಗಿದೆ ಎಂದು ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ಗರ್ಭಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಇಂದು ನೆರವೇರುವ ನಿರೀಕ್ಷೆ ಇದೆ.

ಇದನ್ನೂ ಓದಿ:ರಾಮಮಂದಿರ ಜ್ಞಾಪಕಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಜನವರಿ 22 ರ ಪ್ರಾಣ ಪ್ರತಿಷ್ಠಾ ಸಮಾರಂಭದ ಪೂರ್ವಭಾವಿಯಾಗಿ ಹಲವಾರು ವಿಧಿವಿಧಾನಗಳನ್ನು ನಡೆಸಲಾಗುತ್ತಿದೆ ಮತ್ತು ಕಾರ್ಯಕ್ರಮದ ಮುನ್ನಾದಿನದವರೆಗೆ ಮುಂದುವರಿಯುತ್ತದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವಸ್ಥಾನದ ಟ್ರಸ್ಟ್ ಪ್ರಕಾರ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು, ಸಂತರು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್