ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ
ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ನವೆಂಬರ್ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. […]
ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತ ಹೋರಾಡುತ್ತ ಈಗ ಅನ್‌ಲಾಕ್ 2ಕ್ಕೆ ಪ್ರವೇಶ ಮಾಡಿದ್ದೇವೆ. ಕೊರೊನಾ ಸಾವಿನ ಸಂಖ್ಯೆ ನೋಡಿದ್ರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ ನಾಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೇವೆ. ಹಾಗಾಗಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ನವೆಂಬರ್ವರೆಗೂ ಅನ್ನ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ 80 ಕೋಟಿಗೂ ಹೆಚ್ಚು ಬಡ ಕುಟುಂಬಕ್ಕೆ ರೇಷನ್ ಸಿಗಲಿದೆ. ಬಡ ಕುಟುಂಬದ ಪ್ರತಿಯೊಬ್ಬರಿಗೂ ಪ್ರತಿ ತಿಂಗಳು ಪಡಿತರ ಸಿಗಲಿದೆ. 5 ಕೆಜಿ ಅಕ್ಕಿ ಅಥವಾ ಗೋಧಿ, ಬೇಳೆ ಉಚಿತವಾಗಿ ನೀಡುತ್ತೇವೆ. ಈ ಮಹತ್ವದ ಯೋಜನೆ ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿರುತ್ತದೆ.
ಒಂದು ದೇಶ, ಒಂದು ರೇಷನ್ ಕಾರ್ಡ್ ದೇಶದ ಎಲ್ಲರಿಗೂ ಒಂದೇ ರೇಷನ್ ಕಾರ್ಡ್ ಕೊಡುವ ‘ಒಂದು ದೇಶ, ಒಂದು ರೇಷನ್ ಕಾರ್ಡ್’ ಯೋಜನೆಯನ್ನೂ ಶೀಘ್ರ ಜಾರಿ ಮಾಡ್ತೀವಿ. ಈ ಕಾರ್ಯಕ್ಕಾಗಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ವ್ಯಯಿಸುತ್ತಿದೆ.
ಇದೀಗ ದೇಶದಲ್ಲಿ ಮಳೆಗಾಲ ಶುರುವಾಗಿದೆ. ಕೃಷಿ ಕ್ಷೇತ್ರದಲ್ಲಿ ಈಗ ಚುರುಕಿನ ಚಟುವಟಿಕೆ ಕಂಡು ಬರುತ್ತಿದೆ. ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚು ಜನರಿಗೆ ನಮ್ಮ ಸರ್ಕಾರಗಳು ಪಡಿತರ ವಿತರಿಸಿವೆ ಎಂದರು.
Published On - 4:13 pm, Tue, 30 June 20