AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು’: ಪ್ರಧಾನಿ ನರೇಂದ್ರ ಮೋದಿ

PM Modi at conference with Judges, CMs: ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

PM Modi: ‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು’: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: shivaprasad.hs|

Updated on:Apr 30, 2022 | 11:44 AM

Share

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನ್ಯಾಯಾಂಗವನ್ನು ಒತ್ತಾಯಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ‘‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಇದು ದೇಶದ ಸಾಮಾನ್ಯ ನಾಗರಿಕರಿಗೆ ನ್ಯಾಯ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ’’ ಎಂದು ಪ್ರಧಾನಿ ಹೇಳಿದ್ದಾರೆ. ‘‘ನಮ್ಮ ದೇಶದಲ್ಲಿ ನ್ಯಾಯಾಂಗವು ಸಂವಿಧಾನದ ರಕ್ಷಣೆಯ ಪಾತ್ರ ವಹಿಸಿದರೆ, ಶಾಸಕಾಂಗವು ನಾಗರಿಕರ ಆಶಯಗಳನ್ನು ಪ್ರತಿನಿಧಿಸುತ್ತದೆ. ಸಂವಿಧಾನದ ಈ ಎರಡು ವಿಭಾಗಗಳ ಸಮತೋಲನವು ದೇಶದಲ್ಲಿ ಪರಿಣಾಮಕಾರಿ ಮತ್ತು ಸಮಯ ಬದ್ಧವಾದ ನ್ಯಾಯಾಂಗ ವ್ಯವಸ್ಥೆಗೆ ಮಾರ್ಗಸೂಚಿ ಸಿದ್ಧಪಡಿಸುತ್ತದೆ ಎಂದು ನಾನು ನಂಬುತ್ತೇನೆ’’ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನುಡಿದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ಭಾಷಣದ ಮುಖ್ಯಾಂಶಗಳು:

  1. ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಿಸಲು ನಾವು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ. ನ್ಯಾಯಾಂಗ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ನವೀಕರಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ ನುಡಿದಿದ್ದಾರೆ.
  2. ಭಾರತ ಸರ್ಕಾರವು ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನವನ್ನು ಅಳವಡಿಕೆಯನ್ನು ಡಿಜಿಟಲ್ ಇಂಡಿಯಾ ಮಿಷನ್‌ನ ಅತ್ಯಗತ್ಯ ಭಾಗವೆಂದು ಪರಿಗಣಿಸುತ್ತದೆ. ಇ-ಕೋರ್ಟ್‌ಗಳ ಯೋಜನೆಯನ್ನು ಇಂದು ಮಿಷನ್ ಮೋಡ್‌ ಅಡಿಯಲ್ಲಿ ಜಾರಿಗೊಳಿಸಲಾಗುತ್ತಿದೆ.
  3. ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಇದು ದೇಶದ ಸಾಮಾನ್ಯ ನಾಗರಿಕರಿಗೆ ನ್ಯಾಯ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
  4. 2015 ರಲ್ಲಿ ನಾವು ಅಪ್ರಸ್ತುತವಾದ ಸುಮಾರು 1800 ಕಾನೂನುಗಳನ್ನು ಗುರುತಿಸಿದ್ದೇವೆ. ಇವುಗಳಲ್ಲಿ ಕೇಂದ್ರವು ಅಂತಹ 1450 ಕಾನೂನುಗಳನ್ನು ರದ್ದುಗೊಳಿಸಿದೆ. ರಾಜ್ಯಗಳು 75 ಕಾನೂನುಗಳನ್ನು ರದ್ದುಗೊಳಿಸಿವೆ.

ಎಎನ್​ಐ ಟ್ವೀಟ್ ಇಲ್ಲಿದೆ:

ಪ್ರಧಾನಿ ಮೋದಿ ಮಾತು:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅರುಣಾಚಲ ಪ್ರದೇಶದ ಪೇಮಾ ಖಂಡು ಮತ್ತು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಪಂಜಾಬ್ ಸಿಎಂ ಭಗವಂತ್ ಮಾನ್ ಮೊದಲಾದವರು ಪ್ರಮುಖ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಒಂದು ವಾರದಲ್ಲಿ ಪ್ರಧಾನಿ ಮೋದಿ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಇನ್ನೂ ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮದೀನಾದಲ್ಲಿ ಪಾಕ್ ಪ್ರಧಾನಿ ನೇತೃತ್ವದ ನಿಯೋಗವನ್ನು ನೋಡಿ ‘ಚೋರ್ ಚೋರ್’ ಎಂದು ಕೂಗಿದ ಯಾತ್ರಿಕರು

Published On - 11:32 am, Sat, 30 April 22

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?