ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನ್ಯಾಯಾಂಗವನ್ನು ಒತ್ತಾಯಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ‘‘ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು. ಇದು ದೇಶದ ಸಾಮಾನ್ಯ ನಾಗರಿಕರಿಗೆ ನ್ಯಾಯ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ’’ ಎಂದು ಪ್ರಧಾನಿ ಹೇಳಿದ್ದಾರೆ. ‘‘ನಮ್ಮ ದೇಶದಲ್ಲಿ ನ್ಯಾಯಾಂಗವು ಸಂವಿಧಾನದ ರಕ್ಷಣೆಯ ಪಾತ್ರ ವಹಿಸಿದರೆ, ಶಾಸಕಾಂಗವು ನಾಗರಿಕರ ಆಶಯಗಳನ್ನು ಪ್ರತಿನಿಧಿಸುತ್ತದೆ. ಸಂವಿಧಾನದ ಈ ಎರಡು ವಿಭಾಗಗಳ ಸಮತೋಲನವು ದೇಶದಲ್ಲಿ ಪರಿಣಾಮಕಾರಿ ಮತ್ತು ಸಮಯ ಬದ್ಧವಾದ ನ್ಯಾಯಾಂಗ ವ್ಯವಸ್ಥೆಗೆ ಮಾರ್ಗಸೂಚಿ ಸಿದ್ಧಪಡಿಸುತ್ತದೆ ಎಂದು ನಾನು ನಂಬುತ್ತೇನೆ’’ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ನುಡಿದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಧಾನಿ ಭಾಷಣದ ಮುಖ್ಯಾಂಶಗಳು:
ಎಎನ್ಐ ಟ್ವೀಟ್ ಇಲ್ಲಿದೆ:
We should encourage local languages in courts. This will increase the confidence of the common citizens of the country in the justice system: PM Narendra Modi in Delhi pic.twitter.com/nEp08g5z5H
— ANI (@ANI) April 30, 2022
ಪ್ರಧಾನಿ ಮೋದಿ ಮಾತು:
Addressing the Joint Conference of Chief Ministers and Chief Justices of High Courts. https://t.co/P1jsj2N1td
— Narendra Modi (@narendramodi) April 30, 2022
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅರುಣಾಚಲ ಪ್ರದೇಶದ ಪೇಮಾ ಖಂಡು ಮತ್ತು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಪಂಜಾಬ್ ಸಿಎಂ ಭಗವಂತ್ ಮಾನ್ ಮೊದಲಾದವರು ಪ್ರಮುಖ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಒಂದು ವಾರದಲ್ಲಿ ಪ್ರಧಾನಿ ಮೋದಿ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.
ಇನ್ನೂ ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮದೀನಾದಲ್ಲಿ ಪಾಕ್ ಪ್ರಧಾನಿ ನೇತೃತ್ವದ ನಿಯೋಗವನ್ನು ನೋಡಿ ‘ಚೋರ್ ಚೋರ್’ ಎಂದು ಕೂಗಿದ ಯಾತ್ರಿಕರು
Published On - 11:32 am, Sat, 30 April 22