ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ

ನಮ್ಮ ಸರ್ಕಾರವು ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ನಿರ್ಧರಿಸಿದ್ದು ಅದಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ
ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ: ಪ್ರಧಾನಿ ಮೋದಿ
Follow us
Ganapathi Sharma
|

Updated on:Dec 30, 2023 | 10:21 AM

ನವದೆಹಲಿ, ಡಿಸೆಂಬರ್ 30: ಅಯೋಧ್ಯೆಯಲ್ಲಿ (Ayodhya) ಒಟ್ಟು 15,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ತಮ್ಮ ಸರ್ಕಾರ ತೀರ್ಮಾನಿಸಿದ್ದು, ಆ ವಿಚಾರದಲ್ಲಿ ಬದ್ಧವಾಗಿದೆ ಎಂದು ಅಯೋಧ್ಯೆ ಭೇಟಿಗೂ ಮುನ್ನ ಮೋದಿ ತಿಳಿಸಿದ್ದಾರೆ.

‘ನಮ್ಮ ಸರ್ಕಾರವು ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ನಿರ್ಧರಿಸಿದ್ದು ಅದಕ್ಕೆ ಬದ್ಧವಾಗಿದೆ. ಈ ದಿಸೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಹಾಗೂ ಮರು ಅಭಿವೃದ್ಧಿ ಪಡಿಸಿದ ರೈಲು ನಿಲ್ದಾಣವನ್ನು ನಾಳೆ ಉದ್ಘಾಟಿಸಲಿದ್ದೇನೆ. ಇದರೊಂದಿಗೆ ಇನ್ನೂ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಭಾಗ್ಯ ನನ್ನದಾಗಿದೆ. ಇದು ಅಯೋಧ್ಯೆ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿರುವ ನನ್ನ ಕುಟುಂಬ ಸದಸ್ಯರ ಜೀವನವನ್ನು ಸುಲಭಗೊಳಿಸಲಿದೆ’ ಎಂದು ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಉಲ್ಲೇಖಿಸಿದ್ದಾರೆ.

ನವೀಕರಿಸಿದ ಅಯೋಧ್ಯೆ ರೈಲು ನಿಲ್ದಾಣವನ್ನು ಬೆಳಗ್ಗೆ 11:15ಕ್ಕೆ ಪ್ರಧಾನಿ ಮೋದಿಯವರು ಉದ್ಘಾಟಿಸುತ್ತಿದ್ದಾರೆ. ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೂ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ. ಇದರಲ್ಲಿ ಕರ್ನಾಟಕದ 2 ವಂದೇ ಭಾರತ್ ರೈಲುಗಳೂ (ಮಂಗಳೂರು-ಮಡಗಾವ್‌, ಕೊಯಮತ್ತೂರು-ಬೆಂಗಳೂರು ವಂದೇ ಭಾರತ್ ರೈಲು) ಸೇರಿರಲಿವೆ. ಮಧ್ಯಾಹ್ನ 12:15ಕ್ಕೆ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: ರಾಮಲಲ್ಲಾನ ವಿಗ್ರಹಗಳೆಲ್ಲವೂ ಚೆನ್ನಾಗಿವೆ, ಒಂದನ್ನು ಆಯ್ಕೆ ಮಾಡುವುದು ಕಷ್ಟ: ಚಂಪತ್ ರಾಯ್

ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಮೋದಿ ಅವರು ಹಲವಾರು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 am, Sat, 30 December 23

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ